ಆರ್ಥಿಕ ಪ್ರಗತಿಯಲ್ಲಿ ಕರ್ನಾಟಕಕ್ಕೆ ನಂಬರ್‌ 1 ಸ್ಥಾನ…

0
1591

ಕರ್ನಾಟಕಕ್ಕೆ ಇನ್ನೊಂದು ಗರಿ ಲಭಿಸಿದೆ. ದೇಶದ ದೊಡ್ಡ ರಾಜ್ಯಗಳ ಪೈಕಿ ಆರ್ಥಿಕ ವಿಭಾಗದ ಇಂಡಿಯಾ ಟುಡೆ ಮ್ಯಾಗಜಿನ್ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕಕ್ಕೆ ದೇಶದ ಆರ್ಥಿಕ ಪ್ರಗತಿಯಲ್ಲಿ ರಾಜ್ಯಗಳ ಪೈಕಿ ಅಗ್ರಸ್ಥಾನ ದೊರೆತಿದೆ. ಈ ಸಮೀಕ್ಷೆ ಪ್ರಕಾರ, ದೇಶದಲ್ಲಿ ಆರ್ಥಿಕವಾಗಿ ಪ್ರಗತಿ ಸಾಧಿಸಿರುವ ದೊಡ್ಡ ರಾಜ್ಯಗಳಲ್ಲಿ ಕರ್ನಾಟಕವೇ ಮೊದಲ ಸ್ಥಾನ ಪಡೆದುಕೊಂಡಿದೆ. ಕಳೆದ ಒಂದು ವರ್ಷದ ಪ್ರಗತಿದಾಯಕ ಕಾರ್ಯಕ್ರಮಗಳನ್ನ ಅವಲೋಕಿಸಿ, ಜನಮತದೊಂದಿಗೆ ಈ ಆಯ್ಕೆ ಮಾಡಲಾಗಿದೆ. ಇದರಿಂದ ಕರ್ನಾಟಕ ನಂಬರ್‌ ವನ್‌ ಸ್ಥಾನ ಪಡೆದ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

14639897_1356384067705613_5324569333245922309_n

ಇದರಲ್ಲಿ ಹೂಡಿಕೆಗೆ ಅಗತ್ಯವಾದ ವಾತಾವರಣ, ಕೃಷಿ, ಶಿಕ್ಷಣ, ಮೂಲಭೂತ ಸೌಕರ್ಯ ಮತ್ತು ಕಾನೂನು ಮತ್ತು ಸುವ್ಯವಸ್ಥೆ, ಪರಿಸರ ಸಂರಕ್ಷಣೆ ಹಾಗೂ ಇ – ಆಡಳಿತವನ್ನು ಪರಿಗಣನೆಗೆ ತೆಗೆದುಕೊಂಡು ಇಂಡಿಯಾ ಟುಡೆ ಮ್ಯಾಗಜಿನ್ ಈ ಸಮೀಕ್ಷೆ ನಡೆಸಿತ್ತು.


ಕರ್ನಾಟಕದ ಜಿಡಿಪಿ ಪರ್ ಕ್ಯಾಪಿಟಾ ಶೇ.16ರಷ್ಟು ಹೆಚ್ಚಾಗಿದ್ದು, 2014-15ರಲ್ಲಿ 77,168 ರೂ ಇದ್ದದ್ದು 2015-16ರಲ್ಲಿ 89,545 ರೂ.ಗೆ ಏರಿಕೆ ಆಗಿದೆ. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಹೆಚ್ಚಾಗಿದೆ. 2014ರಲ್ಲಿ 2,361 ಕೋಟಿ ರೂ. ಇದ್ದ ಬಂಡವಾಳ ಹೂಡಿಕೆ 2015ರಲ್ಲಿ 13,780 ಕೋಟಿ ರೂ.ಗೆ ಏರಿಕೆ ಆಗಿರುವುದರಿಂದ ಕರ್ನಾಟಕಕ್ಕೆ ನಂ.1 ಸ್ಥಾನ ಲಭಿಸಿದೆ.[]

ಇನ್ನು ಒಟ್ಟಾರೆ ಶ್ರೇಯಾಂಕದ ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ ಲಭಿಸಿದ್ದು ಮಹಾರಾಷ್ಟ್ರ ಮೊದಲನೇ ಸ್ಥಾನದಲ್ಲಿದೆ. ಉತ್ತರಾಖಂಡ್ ಹಾಗೂ ಗುಜರಾತ್ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನ ಪಡೆದಿವೆ. ಶುಕ್ರವಾರ ದೆಹಲಿಯಲ್ಲಿ ಇಂಡಿಯಾ ಟುಡೇ ಆಯೋಜಿಸಿದ್ದ ‘ಸ್ಟೇಟ್ ಆಫ್ ದಿ ಸ್ಟೇಟ್ಸ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಂದ ಸಿಎಂ ಸಿದ್ದರಾಮಯ್ಯ ಅವರು ಪ್ರಶಸ್ತಿ ಸ್ವೀಕರಿಸಿದರು.