ಭಾರತೀಯ ಕ್ರೀಡಾ ಪಟುಗಳಿಗೆ ಸಲ್ಮಾನ್ ಖಾನ್  ಉಡುಗೊರೆ

0
877

 

ಒಂದು ಕಾಲದಲ್ಲಿ ಬಾಲಿವುಡ್ ಬ್ಯಾಡ್ ಬಾಯ್ ಎಂದೇ ಹೆಸರಾಗಿದ್ದ ಸಲ್ಮಾನ್ ಖಾನ್ ಈಗ ಗುಡ್ ಬಾಯ್ ಆಗ್ತಿದ್ದಾರೆ. ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಸಲ್ಮಾನ್ ಖಾನ್, ರಿಯೊ ಒಲಂಪಿಕ್ಸ್ ನಲ್ಲಿ ಪಾಲ್ಗೊಂಡ ಭಾರತೀಯ ಕ್ರೀಡಾಪಟುಗಳಿಗೆ ಚೆಕ್ ನೀಡಲು ಮುಂದಾಗಿದ್ದಾರೆ.

ಪ್ರತಿಯೊಬ್ಬ ಭಾರತೀಯ ಕ್ರೀಡಾಪಟುವಿಗೆ ಒಂದು ಲಕ್ಷದ ಒಂದು ಸಾವಿರ ರೂಪಾಯಿ ನೀಡುವುದಾಗಿ ಸಲ್ಮಾನ್ ಹೇಳಿದ್ದಾರೆ. ಟ್ವಿಟರ್ ನಲ್ಲಿ ಸಲ್ಮಾನ್ ಖಾನ್ ಈ ವಿಷಯವನ್ನು ಬಹಿರಂಗ ಪಡಿಸಿದ್ದಾರೆ. ರಿಯೊದ ಗುಡ್ವಿಲ್ ರಾಯಭಾರಿಯಾಗಿರುವ ಸಲ್ಮಾನ್ ಖಾನ್, ಕ್ರೀಡಾಪಟುಗಳಿಗೆ ಸರ್ಕಾರ ಪ್ರೋತ್ಸಾಹ ನೀಡಬೇಕೆಂದು ಟ್ವೀಟ್ ಮಾಡಿದ್ದಾರೆ. ರಿಯೊ ಒಲಂಪಿಕ್ಸ್ ನಲ್ಲಿ 118 ಭಾರತೀಯ ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ.

ಬಾಲಿವುಡ್ ನ ಸುಲ್ತಾನ್ ಸಲ್ಮಾನ್ ಖಾನ್ ರಿಯೊ ಒಲಂಪಿಕ್ಸ್ ನಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳಿಗೆ ತಲಾ ಒಂದು ಲಕ್ಷದ ಒಂದು ಸಾವಿರ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. . ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಸಲ್ಮಾನ್ ಖಾನ್, ರಿಯೊ ಒಲಂಪಿಕ್ಸ್ ನಲ್ಲಿ ಪಾಲ್ಗೊಂಡ ಭಾರತೀಯ ಕ್ರೀಡಾಪಟುಗಳಿಗೆ ಚೆಕ್ ನೀಡಲು ಮುಂದಾಗಿದ್ದಾರೆ. ಪ್ರತಿಯೊಬ್ಬ ಭಾರತೀಯ ಕ್ರೀಡಾಪಟುವಿಗೆ ಒಂದು ಲಕ್ಷದ ಒಂದು ಸಾವಿರ ರೂಪಾಯಿ ನೀಡುವುದಾಗಿ ಸಲ್ಮಾನ್ ಹೇಳಿದ್ದಾರೆ. ಟ್ವಿಟರ್ ನಲ್ಲಿ ಸಲ್ಮಾನ್ ಖಾನ್ ಈ ವಿಷಯವನ್ನು ಬಹಿರಂಗ ಪಡಿಸಿದ್ದಾರೆ. ರಿಯೊದ ಗುಡ್ವಿಲ್ ರಾಯಭಾರಿಯಾಗಿರುವ ಸಲ್ಮಾನ್ ಖಾನ್, ಕ್ರೀಡಾಪಟುಗಳಿಗೆ ಸರ್ಕಾರ ಪ್ರೋತ್ಸಾಹ ನೀಡಬೇಕೆಂದು ಟ್ವೀಟ್ ಮಾಡಿದ್ದಾರೆ. ರಿಯೊ ಒಲಂಪಿಕ್ಸ್ ನಲ್ಲಿ 118 ಭಾರತೀಯ ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ.