ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಯುವಕರು

0
785

ನವದೆಹಲಿ: ಉತ್ತರ ಪ್ರದೇಶದ ಸಂಭಾಲ್ ನ ಒಂದು ಯುವಕರ ಗುಂಪೊಂದು  ಉರಿ ಸೆಕ್ಟರ್ ನಲ್ಲಿ ನಡೆದ ಸೇನಾ ಪ್ರಧಾನ ಕಚೇರಿ ಮೇಲಿನ ಉಗ್ರರ ದಾಳಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಉಗ್ರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ತಮ್ಮ ರಕ್ತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರಗಳನ್ನು ಬರೆದಿದ್ದಾರೆ.

%e0%b2%89%e0%b2%b0%e0%b2%bf-%e0%b2%89%e0%b2%97%e0%b3%8d%e0%b2%b0%e0%b2%b0%e0%b3%811

ಉರಿ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನ್ಯಾಯ ದೊರಕಬೇಕಿದ್ದು, ಟ್ವಿಟರ್ ನಲ್ಲಿ ಖಂಡನೆ ವ್ಯಕ್ತಪಡಿಸುವ ಪ್ರತಿಕ್ರಿಯೆಗಳ ನಮಗೆ ಅಗತ್ಯವಿಲ್ಲ. ಮಾತುಕತೆ ಬೇಕಿಲ್ಲ, ನೇರವಾಗಿ ಯುದ್ಧ ನಡೆಯಬೇಕಿದೆ. ರಕ್ತಕ್ಕೆ ರಕ್ತವೇ ಪ್ರತೀಕಾರ ಎಂದು ಯುವಕರು ಪತ್ರದಲ್ಲಿ ಹೇಳಿದ್ದಾರೆ.

ಕಾಶ್ಮೀರದಲ್ಲಿ ಅಸ್ಥಿರ ಮತ್ತು ಉದ್ವಿಗ್ನ ಸ್ಥಿತಿ ಭದ್ರತೆ ಮತ್ತು ಶಾಂತಿಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಕಾಶ್ಮೀರದಲ್ಲಿ ಮಾನವಹಕ್ಕುಗಳ ಉಲ್ಲಂಘನೆ ಸಾಮಾನ್ಯವಾಗಿದೆ. ಹೀಗಾಗಿ ಕಾಯಂ ಸದಸ್ಯ ರಾಷ್ಟ್ರಗಳು ಮಧ್ಯಪ್ರವೇಶ ಮಾಡುವ ಮೂಲಕ ಸಮಸ್ಯೆಗೆ ಪರಿಹಾರ ಹುಡುಕಬೇಕು ಎಂದು ಪತ್ರದಲ್ಲಿ ಷರೀಫ್ ಮನವಿ ಮಾಡಿದ್ದಾರೆ. ಇದೇ ವೇಳೆ, ಅಮೆರಿಕ ವಿದೇಶಾಂಗ ಸಚಿವ ಜಾನ್‌ ಕೆರ್ರಿ ಅವರನ್ನು ಭೇಟಿ ಮಾಡಿ ಪ್ರತ್ಯೇಕ ದೂರು ನೀಡಿದ್ದಾರೆ.

ವಿಶ್ವಸಂಸ್ಥೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ನವಾಜ್ ಶರೀಫ್ ಅವರು ಕೆಲ ಹೇಳಿಕೆಗಳನ್ನು ನೀಡಿದ್ದರು. ಉಗ್ರ ಬುರ್ಹಾನ್ ವಾನಿಯನ್ನು ಯುವ ನಾಯಕನೆಂದು ಹೇಳಿದ್ದರು. ಈ ರೀತಿಯ ಹೇಳಿಕೆಯ ನಂತರವಾದರೂ ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.