ಕನ್ನಡಪರ ಸಂಘಟನೆಗಳ ಒಕ್ಕೂಟ ದಿಂದ ಇಂದು ರೈಲು ತಡೆ ಚಳವಳಿ

0
490

ಚಳವಳಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಮತ್ತು ರೈಲ್ವೆ ಪೊಲೀಸರು ಮೆಜೆಸ್ಟಿಕ್ ರೈಲು ನಿಲ್ದಾಣ ಸೇರಿದಂತೆ ಎಲ್ಲ ನಿಲ್ದಾಣಗಳಲ್ಲಿ ಭಾರೀ ಬಿಗಿಭದ್ರತೆ ಕಲ್ಪಿಸಿದ್ದಾರೆ.

ಕಾವೇರಿ ನದಿ ನೀರು ಸಂಬಂಧ ಸುಪ್ರೀಂಕೋರ್ಟ್ನ ತೀರ್ಪು ಹಾಗೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳ ಒಕ್ಕೂಟ ಇಂದು ರಾಜ್ಯದಲ್ಲಿ ರೈಲು ತಡೆ ಚಳವಳಿ ಹಮ್ಮಿಕೊಂಡಿದೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ರೈಲು ತಡೆ ಚಳವಳಿ ನಡೆಸಲು ನಿರ್ಧರಿಸಿದ್ದಾಗಿ ಒಕ್ಕೂಟ ಹೇಳಿಕೊಂಡಿದೆ.

26-1458989647-kalasabanduriproject8
ಸಾಂದರ್ಭಿಕ ಚಿತ್ರ

ರೈಲ್ವೆ ಇಲಾಖೆ ಇಂದ ಎಚ್ಚರಿಕೆ

ದಿನಪೂರ್ತಿ ಬಂದ್ ವಿರುದ್ಧ ರೈಲ್ವೆ ಇಲಾಖೆಯು ಕನ್ನಡಪರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದೆ. “ಗಮನ ಸೆಳೆಯಲು ಸಾಂಕೇತಿಕ ಪ್ರತಿಭಟನೆ ನಡೆಸಬಹುದು. ಆದರೆ, ದಿನಪೂರ್ತಿ ರೈಲುಗಳನ್ನು ತಡೆಯಲು ಸಾಧ್ಯವಿಲ್ಲ.” ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಒಂದು ವೇಳೆ ಅಂತಹ ಕ್ರಮಕ್ಕೆ ಮುಂದಾದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೇಳಿದೆ.

ಪೊಲೀಸರಿಂದ ವಾಟಾಳ್ ನಾಗರಾಜ್ ವಶಕ್ಕೆ:

29-1469777462-23-1442986942-vatalnagaraj5

ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರು ಗುರುವಾರ ರೈಲು ತಡೆ ಹಮ್ಮಿಕೊಂಡಿರುವುದರಿಂದ ಪೂರ್ವಭಾವಿಯಾಗಿ ಬುಧವಾರ ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಮಲಗಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಉರುಳು ಸೇವೆಗೆ ಮುಂದಾದ ವಾಟಾಳ್ ನಾಗರಾಜ್, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.⁠⁠⁠⁠