ಕಾವೇರಿ ವಿಚಾರಣೆಗಾಗಿ ಇಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

0
636

ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಕಾವೇರಿ ನೀರಿನ ವಿಚಾರವಾಗಿ ಮಂಗಳವಾರ ವಿಚಾರಣೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಭಾರೀ ಭದ್ರತೆ ಮಾಡಲಾಗಿದೆ. ತಮಿಳರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶ, ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಗಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪ್ರಮುಖ ರಸ್ತೆಗೆಳು, ಸ್ಥಳಗಳ ಮೇಲೆ ಪೊಲೀಸರು ನಿಗಾ ಇರಿಸಿದ್ದು, ಅಗತ್ಯ ಎಚ್ಚರಿಕೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಮೇಘರಿಕ್ ಹೇಳಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ಪಡೆಯ ಆರು ತುಕಡಿ, ಬಿಎಸ್ ಎಫ್, ಸೀಮಾ ಸುರಕ್ಷಾ ಬಲದ ತಲಾ ಮೂರು ಕಂಪೆನಿ, ಒಂದು ಇಂಡೋ ಟಿಬೆಟನ್ ಬಾರ್ಡರ್ ಪಡೆ, ಕೆಎಸ್ ಆರ್ ಪಿಯ ನಲವತ್ತು ತುಕಡಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಇಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. 14 ಅರೆಸೇನಾ ತುಕಡಿ, 40 ಕೆಎಸ್‍ಆರ್‍ಪಿ, ಸಿಎಆರ್ ತುಕಡಿ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಮೇಘರಿಕ್ ಹೇಳಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬೆಂಗಳೂರಿನಾದ್ಯಂತ ಪೊಲೀಸ್ ಕಣ್ಗಾವಲು ಹಾಕಲಾಗಿದೆ.

ಇಂದು ಕಾವೇರಿ ವಿಚಾರಣೆ ಸಂದರ್ಭ ಕಿಡಿಗೇಡಿಗಳು ಹಗೂ ಸಮಾಜ ವಿದ್ರೋಹಿ ಶಕ್ತಿಗಳು ದುಷ್ಕøತ್ಯದಲ್ಲಿ ತೊಡಗಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಆಧಾರದಲ್ಲಿ ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದೇವೆ ಎಂದು ಮೇಘರಿಕ್ ಹೇಳಿದ್ದಾರೆ.

ಈ ಎಲ್ಲದರ ಜೊತೆಗೆ ಹದಿನೈದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಿದ್ದು, ನಗರದಲ್ಲಿ ಇತ್ತೀಚೆಗೆ ಜಾರಿಗೊಳಿಸಿದ್ದ ನಿಷೇಧಾಜ್ಞೆಯು ಮಂಗಳವಾರ ರಾತ್ರಿಯವರೆಗೂ ಮುಂದುವರಿಯಲಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ