ಜು.4ರಿಂದ ವಿಧಾನಸಭೆ ಮುಂಗಾರು ಅಧಿವೇಶನ ನಡೆಯಲಿದೆ

0
502

ಬೆಂಗಳೂರು, ಜು.3: ರಾಜ್ಯ ವಿಧಾನಸಭೆಯ ಅಧಿವೇಶನವು ಜು.4 ರಿಂದ 29 ರವರೆಗೆ ನಡೆಯಲಿದೆ ಎಂದು ವಿಧಾನಸಭೆ ಉಪಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದ್ದಾರೆ.

ಶುಕ್ರವಾರದವರೆಗೆ 2767 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು ಆ ಪೈಕಿ 90 ಚುಕ್ಕೆ ಗುರುತಿನ ಪ್ರಶ್ನೆಗಳು, 521 ಚುಕ್ಕೆ ರಹಿತ ಪ್ರಶ್ನೆಗಳಾಗಿವೆ. ಉಳಿದಂತೆ 2 ಗಮನ ಸೆಳೆಯುವ ಸೂಚನೆಗಳು ಬಂದಿದ್ದು, ನಿಯಮ 351ರಡಿಯಲ್ಲಿ 14 ಸೂಚನೆಗಳನ್ನು ಸ್ವೀಕರಿಸಲಾಗಿದೆ ಎಂದು ಅವರು ತಿಳಿಸಿದರು.

ಒಟ್ಟು 19 ದಿನಗಳ ಕಾಲ ಪ್ರಶ್ನೋತ್ತರ ಕಾರ್ಯಕಲಾಪಗಳು ಜರುಗಲಿವೆ. ಎರಡು ಖಾಸಗಿ ನಿರ್ಣಯಗಳು ಮಂಡನೆಯಾಗಲಿದ್ದು, ಚರ್ಚೆಗೆ ಅವಕಾಶ ಕಲ್ಪಿಸಿ ಕೊಡಲಾಗುವುದು. ಇದು ಬಜೆಟ್ನ ಮುಂದುವರೆದ ಅಧಿವೇಶನವಾಗಿದ್ದು ಪೂರ್ಣ ಪ್ರಮಾಣದ ಬಜೆಟ್ಗೆ ಅಂಗೀಕಾರ ಪಡೆಯಬೇಕಾಗಿದೆ ಎಂದು ಶಿವಶಂಕರರೆಡ್ಡಿ ಹೇಳಿದರು. ಒಟ್ಟು 19 ದಿನಗಳ ಕಾಲ ಪ್ರಶ್ನೋತ್ತರ ಕಾರ್ಯಕಲಾಪಗಳು ಜರುಗಲಿವೆ. ಎರಡು ಖಾಸಗಿ ನಿರ್ಣಯಗಳು ಮಂಡನೆಯಾಗಲಿದ್ದು, ಚರ್ಚೆಗೆ ಅವಕಾಶ ಕಲ್ಪಿಸಿ ಕೊಡಲಾಗುವುದು. ಇದು ಬಜೆಟ್ನ ಮುಂದುವರೆದ ಅಧಿವೇಶನವಾಗಿದ್ದು ಪೂರ್ಣ ಪ್ರಮಾಣದ ಬಜೆಟ್ಗೆ ಅಂಗೀಕಾರ ಪಡೆಯಬೇಕಾಗಿದೆ ಎಂದು ಶಿವಶಂಕರರೆಡ್ಡಿ ಹೇಳಿದರು. ಈ ಬಾರಿ ಸದನದಲ್ಲಿ ರಾಜ್ಯದ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಚರ್ಚೆಗಳು ನಡೆಯಲಿವೆ ಎಂಬ ಭಾವನೆ ನನ್ನಲ್ಲಿದೆ. ಅಧಿವೇಶನದಲ್ಲಿ ಮಹಿಳೆಯರ ಸಮಸ್ಯೆಗಳ ಬಗ್ಗೆ ಒಂದು ದಿನ ಚರ್ಚೆ ಮಾಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಹಾಗೂ ಸ್ವಯಂಸೇವಾ ಸಂಸ್ಥೆಯೊಂದು ಮಕ್ಕಳ ಬಗ್ಗೆ ಚರ್ಚೆ ಮಾಡಲು ಒಂದು ದಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ ಎಂದು ಅವರು ತಿಳಿಸಿದರು. ಮಹಿಳೆಯರ ಸಮಸ್ಯೆಗಳ ಬಗ್ಗೆ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಚರ್ಚೆ ನಡೆಸುವಂತೆ ಬಂದಿರುವ ಪ್ರಸ್ತಾವನೆಗಳು ಸದನ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯ ಮುಂದಿರಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿವಶಂಕರರೆಡ್ಡಿ ತಿಳಿಸಿದರು. ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾ: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಎಂಟು ಮಂದಿ ಶಾಸಕರು ಅಡ್ಡಮತದಾನ ಮಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಪಕ್ಷದಿಂದ ದೂರು ಬಂದಿದೆ. ಈ ಸಂಬಂಧ ಕಾನೂನು ಇಲಾಖೆಯ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.