ಟೀಂ ಇಂಡಿಯಾದ ನೂತನ ಸಾರಥಿ ಕನ್ನಡಿಗ ಅನಿಲ್ ಕುಂಬ್ಳೆ

0
1349

ನವದೆಹಲಿ: ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ಟೀಂ ಇಂಡಿಯಾ ಕೋಚ್ ಹುದ್ದೆಗೆ ಕೊನೆಗೂ ಸಾರಥಿ ಸಿಕ್ಕಂತಾಗಿದೆ. ಹೌದು ಮಾಜಿ ಕ್ರಿಕೆಟಿಗ ಕನ್ನಡಿಗ ಅನಿಲ್ ಕುಂಬ್ಳೆ ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆ ಮಾಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಘೋಷಿಸಿದೆ.

ಟೀಂ ಇಂಡಿಯಾ ಕೋಚ್ ಆಯ್ಕೆ ವಿಚಾರವಾಗಿ ಇಂದು ಹಿಮಾಚಲದ ಧರ್ಮಶಾಲಾದಲ್ಲಿ ನಡೆದ ಬಿಸಿಸಿಐ ಉನ್ನತ ಮಟ್ಟದ ಸಭೆಯಲ್ಲಿ ಅನಿಲ್ ಕುಂಬ್ಳೆಯನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆ ಮಾಡಲಾಗಿದೆ.ಮಾಜಿ ಡೈರೆಕ್ಟರ್ ರವಿಶಾಸ್ತ್ರಿ ಹಾಗೂ ಸಂದೀಪ್ ಪಾಟೀಲ್ ಕೋಚ್ ಹುದ್ದೆ ರೇಸ್ ನಲ್ಲಿದ್ದರು. ಇವರಿಬ್ಬರನ್ನು ಹಿಂದಿಕ್ಕಿದ ಅನಿಲ್ ಕುಂಬ್ಳೆ ಕೋಚ್ ಆಗಿ ಆಯ್ಕೆಯಾಗಿದ್ದಾರೆ.