ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ, ಬತ್ತಿ ಹೋಗುತ್ತಿದೆ ಕೆಆರ್ ಎಸ್ ಜಲಾಶಯ

0
916

ಬತ್ತಿ ಹೋಗುತ್ತಿರುವ ಕಾವೇರಿ

ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ, ಬತ್ತಿ ಹೋಗುತ್ತಿದೆ ಕೆಆರ್ ಎಸ್ ಜಲಾಶಯ

ಬೆಂಗಳೂರು: ವರ್ಷದಿಂದ ವರ್ಷಕ್ಕೆ ಅಂತರ್ಜಲ ಮಟ್ಟ ಕುಸಿಯುತ್ತಿರುವುದರಿಂದ ಬತ್ತಿ ಹೋಗುತ್ತಿರುವ ಕೊಳವೆ ಬಾವಿಗಳ ಸಂಖ್ಯೆ ಹೆಚ್ಚಾಗುತ್ತಿದೆ … ಕಾವೇರಿ ನೀರು ಬಿಡುವಂತೆ ತಮಿಳುನಾಡು ತೀವ್ರ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಮಳೆ ಬಾರದ ಸ್ಥಿತಿ ಇರುವಾಗ ತಮಿಳುನಾಡಿಗೆ ನೀರು ಬಿಡಲಾಗಿದೆ.

ಬೇಸಿಗೆ ಇನ್ನೂ ಪೂರ್ಣಪ್ರಮಾಣದಲ್ಲಿ ಪ್ರಾರಂಭವಾಗಿಲ್ಲ, ಆಗಲೇ ರಾಜ್ಯದೆಲ್ಲೆಡೆ ಕುಡಿಯುವ ನೀರಿಗಾಗಿ ಹಾಹಾಕಾರ ಎದ್ದಿದೆ.ಆಂತರಿಕ ಬಿಕ್ಕಟ್ಟು ನಿರ್ವಹಣೆಯಲ್ಲಿಯೇ ಮೈಮರೆತಿದ್ದ ರಾಜ್ಯಸರ್ಕಾರ ಕೊನೆಗೂ ಎಚ್ಚೆತ್ತುಕೊಂಡಾಗ ಪರಿಸ್ಥಿತಿ ಕೈಮೀರಿ ಹೋಗಿದೆ.

ಕೊಡಗಿನಲ್ಲಿಯೇ ನದಿ, ತೊರೆಗಳು ತುಂಬಿ ಹರಿಯುತ್ತಿಲ್ಲ ಎಂದಾದ ಮೇಲೆ ಕೆಆರ್ ಎಸ್ ನೀರು ತಾನೆ ಹೇಗೆ ಹರಿದು ಬರಬೇಕು?. ಕಾವೇರಿ ಕಣಿವೆಯಲ್ಲಿ ಎಷ್ಟೇ ಜೋರಾಗಿ ಮಳೆ ಸುರಿದರೂ ಕೆಆರ್ ಎಸ್ ನೀರಿನ ಮಟ್ಟ ಹೆಚ್ಚುವ ಲಕ್ಷಣಗಳಂತು ಖಂಡಿತಾ ಇಲ್ಲ. ಸುಪ್ರೀಂಕೋರ್ಟ್ ತೀರ್ಪಿನಂತೆ ತಮಿಳುನಾಡಿಗೆ ನೀರು ಹರಿಯುತ್ತಲೇ ಇದ್ದು, ಸೆ.20ರವರೆಗೆ ಇದೇ ರೀತಿ ನೀರು ಹರಿದರೆ ಜಲಾಶಯ ಬರಿದಾಗಿ ಡೆಡ್ಸ್ಟೋರೇಜ್ ತಲುಪಲಿದೆ.

ನೀರು ಇದೇ ರೀತಿ ಹರಿಯುತ್ತಲೇ ಇದ್ದರೆ ಕೆಆರ್ ಎಸ್ ಜಲಾಶಯ ಸೇರಿದಂತೆ ಕಾವೇರಿ ಕಣಿವೆಯ ಎಲ್ಲ ಜಲಾಶಯಗಳು ಬತ್ತಿ ಹೋಗುವುದರಲ್ಲಿ ಎರಡು ಮಾತಿಲ್ಲ. ಈ ನಡುವೆ ಕೆಆರ್ ಎಸ್ ನ ಕಾಲುವೆಗಳಿಗೆ ನೀರು ಹರಿಸುವ ಮೂಲಕ ರೈತರ ಕಣ್ಣೊರೆಸುವ ತಂತ್ರವನ್ನು ಸರ್ಕಾರ ಮಾಡುತ್ತಿದ್ದರೂ ಆ ನೀರನ್ನು ನಂಬಿ ಯಾವುದೇ ಬೆಳೆ ಬೆಳೆಯಲಾರದ ಸ್ಥಿತಿಗೆ ರೈತ ಬಂದು ತಲುಪಿದ್ದಾನೆ.

ಕಾವೇರಿ ನೀರಾವರಿ ನಿಗಮದ ಕಾರ್ಯನಿರ್ವಾಹಕ ಅಭಿಯಂತರ ಕಚೇರಿಯ ಮೂಲಗಳ ಪ್ರಕಾರ ಜಲಾಶಯದಲ್ಲಿ ಮಂಗಳವಾರ ಇದ್ದ ‘ಬಳಕೆಗೆ ಲಭ್ಯ’ ನೀರಿನ ಪ್ರಮಾಣ ಕೇವಲ 6.657 ಟಿಎಂಸಿ ಮಾತ್ರ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ ಬಳಕೆಗೆ ಲಭ್ಯ ನೀರಿನ ಪ್ರಮಾಣ 20.385 ಟಿಎಂಸಿ ಇತ್ತು.

ಯಾವಾಗ ಜಲಾಶಯಗಳಲ್ಲಿ ನೀರಿನ ಮಟ್ಟ ನೆಲ ಕಚ್ಚತೊಡಗಿತೋ ಜಲಾಶಯದ ನೀರಿನ ಮಟ್ಟವನ್ನು ಮಾಧ್ಯಮಗಳಿಗೆ ತಿಳಿಸುವುದನ್ನೇ ನಿಲ್ಲಿಸಲಾಗಿದೆ. ಕೆಆರ್ಎಸ್ಗೆ ಎರಡು ಜಲಾಶಯಗಳಿಂದ ಹರಿದು ಬರುತ್ತಿರುವ ನೀರು ಸೇರಿ ಒಳಹರಿವು 9847 ಇದ್ದು, ಕೆಆರ್ಎಸ್ನಲ್ಲಿ ನೀರಾವರಿ ಇಲಾಖೆಯು ಸ್ಥಾಪಿಸಿರುವ ಜಲಮಾಪನ ಘಟಕದ ಅಧಿಕಾರಿಗಳ ಪ್ರಕಾರ ಮಂಗಳವಾರ ಬೆಳಗ್ಗೆ ಜಲಾಶಯದಿಂದ 10567 ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಯಬಿಡಲಾಗುತ್ತಿತ್ತು.

ಸೆ.7ರಿಂದ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಲೇ ಇದೆ. ಸೆ.7ರಂದು 93.25 ಇದ್ದರೆ, 8ರಂದು 91.88ಕ್ಕೆ ಕುಸಿದಿತ್ತು. ಬಳಿಕ ಹೇಮಾವತಿಯಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿ ಕೆಆರ್ಎಸ್ನ ಮಟ್ಟ ಕಾಯ್ದುಕೊಳ್ಳುವ ಯತ್ನ ಆರಂಭಿಸಲಾಯಿತು. ಆದರೂ ಸೆ.10ರಂದು 90.57ಗೆ ಕುಸಿಯಿತು. 12ರಂದು 89.05 ಇದ್ದ ಮಟ್ಟ ಹೆಚ್ಚಿನ ಒಳಹರಿವಿನ ಹೊರತಾಗಿಯೂ ಮಂಗಳವಾರ ಕೇವಲ ಒಂದೇ ದಿನದಲ್ಲಿ 88 ಅಡಿಗೆ ಬಂದು ತಲುಪಿದೆ.

ಕಳೆದ ವರ್ಷಕ್ಕೆ ಹೋಲಿಸಿದಾಗ ಸುಮಾರು 16 ಟಿಎಂಸಿಯಷ್ಟು ನೀರು ಕಡಿಮೆಯಾಗಿದೆ. ಕಳೆದ ಬಾರಿ 106.95 ಅಡಿಗಳಷ್ಟು ನೀರು ಕೆಆರ್ ಎಸ್ ನಲ್ಲಿತ್ತು. ಸುಪ್ರೀಂ ತೀರ್ಪಿನಂತೆ ಸೆ.20ರ ವರೆಗೂ ನೀರು ಹರಿಸುವುದು ಅನಿವಾರ್ಯವಾಗಿರುವುದರಿಂದ ಕೆಆರ್ಎಸ್ ಜಲಾಶಯ ಮಳೆಗಾಲ ಕಳೆಯುವ ಮೊದಲೇ ಡೆಡ್ಸ್ಟೋರೇಜ್ (74 ಅಡಿ) ತಲುಪುವ ಸಾಧ್ಯತೆಗಳು ಕಂಡು ಬರುತ್ತಿದೆ.

ಕೆಆರ್ ಎಸ್ ನೀರನ್ನೇ ನಂಬಿರುವ ಅನ್ನದಾತರ ಬದುಕು ಮೂರಾಬಟ್ಟೆಯಾಗಿದೆ. ಕೃಷಿ ಹೊರತುಪಡಿಸಿ ಬೇರೆ ಕಾಯಕವೇ ಮಾಡಲಾಗದ ಸ್ಥಿತಿಯಲ್ಲಿರುವ ರೈತ ಮುಂದೇನು? ಎಂಬ ಚಿಂತೆಯಲ್ಲಿದ್ದಾನೆ. ಅಷ್ಟೇ ಅಲ್ಲದೆ, ಕುಡಿಯಲು ಇದೇ ನೀರನ್ನು ನಂಬಿ ಬೆಂಗಳೂರು, ಮೈಸೂರು ಜನರೂ ಇದ್ದಾರೆ. ಮುಂದೆ ಏನೆಲ್ಲ ಆಗುತ್ತದೆ ಎಂಬುದನ್ನು ಕಾಲವೇ ಹೇಳಬೇಕಿದೆ.

ಕಾವೇರಿ ನದಿ ನೀರಿನ ವಿವಾದದ ಸಂದರ್ಭದಲ್ಲಿ ಜನರು ರಾಜ್ಯದ ನೀತಿಯನ್ನು ಕುರಿತು ಸರ್ಕಾರದ ಜೊತೆಗಿದ್ದು, ನದಿ ಪಾತ್ರದಲ್ಲಿ ಬತ್ತಿ ಹೋಗುತ್ತಿರುವ ಕೆರೆಗಳ ಪುನರುಜ್ಜೀವನಕ್ಕಾಗಿ ಹೋರಾಟ ಮತ್ತು ಕೆರೆಗಳ ಪುನರುಜ್ಜೀವನ ಕಾರ್ಯದಲ್ಲಿ ಯಾಕೆ ಮುಂದುವರಿಸಬಾರು.