ಬಾಲಗಂಗಾಧರ ತಿಲಕ್ ಜನುಮ ದಿನ

0
2128

ಇಂದು ಲೋಕಮಾನ್ಯ ಬಾಲ ಗಂಗಾಧರ ತಿಲಕ ರವರ ಜನುಮ ದಿನ

ದೇಶ ಕಂಡ ಮಹಾನ್ ನಾಯಕರಲ್ಲಿ ಲೋಕಮಾನ್ಯ ತಿಲಕ್‌ರು ಒಬ್ಬರು. ಸ್ವಾತಂತ್ರ್ಯ ಹೋರಾಟಗಾರ, ಪತ್ರಕರ್ತ, ಸಮಾಜ ಸುಧಾರಕ. ಭಾರತದ ಸ್ವಾತಂತ್ರ್ಯ ಹೋರಾಟದ ಚಳುವಳಿಯ ಮೊದಲನೇ ಜನಪ್ರಿಯ ನಾಯಕ ಲೋಕಮಾನ್ಯ ಬಾಲ ಗಂಗಾಧರ ತಿಲಕ.

ತಿಲಕರು ಹುಟ್ಟಿದ್ದು ೧೮೫೬ರ ಜುಲೈ ೨೩ರಂದು ಮಹಾರಾಷ್ತ್ರದ ರತ್ನಾಗಿರಿಯ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ. ಪಾಶ್ಚಿಮಾತ್ಯ ಶಿಕ್ಷಣ ಪಧ್ಧತಿಯು ಭಾರತೀಯ ಪರಂಪರೆಯನ್ನು ಅವಹೇಳಿಸುವಂಥಾದ್ದೂ ಹಾಗೂ ಭಾರತದ ವಿದ್ಯಾರ್ಥಿಗಳನ್ನು ಕೀಳುಗಳೆಯುವಂಥಾ ಪಧ್ಧತಿಯ ತೀವ್ರ ಟೀಕಾಕಾರರಾದರು. ವಿದ್ಯಾರ್ಥಿಗಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಪುಣೆಯಲ್ಲಿ ಡೆಕ್ಕನ್ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು. ತಿಲಕರ “ಗೀತಾರಹಸ್ಯ ಅಥವಾ ಜೀವನಧರ್ಮ ಯೋಗ” ಎಂಬ ಭಗವದ್ಗೀತೆಯ ತಾತ್ಪರ್ಯವು ಬಹಳ ಪ್ರಸಿಧ್ಧವಾದ ಕೃತಿ.

‘ಲೋಕಮಾನ್ಯ’ ಜನರೇ ನೀಡಿದ್ದ ಬಿರುದು. ಜನಸಾಮಾನ್ಯರ ಮನೆಮಾತಾದ “ಕೇಸರಿ” ಮರಾಠಿ ಪತ್ರಿಕೆ ಯ ಸ್ಥಾಪನೆ ಮಾಡಿದರು. ಭಾರತೀಯರ ಪ್ರಜ್ಙೆಯಲ್ಲಿ ಸಂಪೂರ್ಣ ಸ್ವರಾಜ್ಯದ ಕಿಚ್ಚು ಹಚ್ಚಿದ ತಿಲಕರು ಹಿಂದೂ ರಾಷ್ತ್ರೀಯತಾವಾದದ ಪಿತಾಮಹ ಎಂದೂ ಹೆಸರಾಗಿದ್ದಾರೆ.

56_2-BB
© kanaja

“ಸ್ವರಾಜ್ಯ ನಮ್ಮ ಜನ್ಮಸಿಧ್ಧ ಹಕ್ಕು” ಅದನ್ನು ನಾನು ಪಡೆದೇ ತೀರುತ್ತೇನೆ ಎಂಬ ಇವರ ಘರ್ಜನೆ ಅಂದು ಜನಪ್ರಿಯವಾದದ್ದಷ್ತೇ ಅಲ್ಲ, ಇಂದಿಗೂ ಜನ ಸಾಮಾನ್ಯರ ನೆನಪಿನಲ್ಲಿ ಹಸುರಾಗಿದೆ.