ಪ್ರತಾಪ್, ವಿಶ್ವೇಶ್ವರ್, ಮುತಾಲಿಕ್ ಹತ್ಯೆ ಸಂಚು ರೂಪಿಸಿದವರಿಗೆ ೫ ವರ್ಷ ಜೈಲು

0
534

ಮೈಸೂರಿನ ಸಂಸದ ಪ್ರತಾಪ್ ಸಿಂಹ, ಹಿಂದೂಪರ ಸಂಘಟನೆಯ ಮುಖಂಡ ಪ್ರಮೋದ್ ಮುತಾಲಿಕ್, ಪತ್ರಕರ್ತ ವಿಶ್ವೇಶ್ವರ ಭಟ್ ಮುಂತಾದ ವರ ಹತ್ಯೆಗೆ ಸಂಚು ರೂಪಿಸಿದ್ದ ೧೩ ದೋಷಿಗಳಿಗೆ ೫ ವರ್ಷ ಜೈಲು ಶಿಕ್ಷೆ ಹಾಗೂ ತಲಾ ೭ ಸಾವಿರ ರೂ. ದಂಡ ವಿಧಿಸಲಾಗಿದೆ. ಬೆಂಗಳೂರಿನ 50ನೇ ಸೆಷನ್ಸ್ ನ್ಯಾಯಾಲಯ ಈ ತೀರ್ಪು ನೀಡಿದೆ.

ಆರೋಪಿಗಳು ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಮಾಡಲಾಗಿದೆ ಎಂದು ನ್ಯಾಯಾ ಲಯ ಹೇಳಿದೆ. ಅಲ್ಲದೇ ಅಪರಾಧಿಗಳು ಈಗಾಗಲೇ ಜೈಲಿನಲ್ಲಿ ಕಳೆದಿರುವ ಅವಧಿಯನ್ನು ಕಳೆದು ಉಳಿದ ಅವಧಿಗೆ ಜೈಲು ವಾಸ ಅನುಭವಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಹತ್ಯೆ ಪ್ರಯತ್ನ ನಡೆದ ಸಂದರ್ಭದಲ್ಲಿ ಹಾಲಿ ಸಂಸದ ಪ್ರತಾಪ್ ಸಿಂಹ  ಕನ್ನಡ ಪ್ರಭ ಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ ವಿಶ್ವೇಶ್ವರ ಭಟ್ ಸಂಪಾದಕರಾಗಿ ದ್ದರು. ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವು ಹಿಂದೂ ಮುಖಂಡರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾ ಗಿದ್ದ 13 ಮಂದಿ ಆರೋಪಿಗಳನ್ನು ಗುರುವಾರ ದೋಷಿ ಗಳು ಎಂದು ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು.

ಈ ಪ್ರಕರಣದಲ್ಲಿ ೧4 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬಂಧಿತರಲ್ಲಿ ಕೆಲವರು ದುಬೈ ಹಾಗೂ ಪಾಕಿಸ್ತಾನ ಮೂಲದ ಲಷ್ಕರೆ ಇ ತೋಯ್ಬಾ ಮುಂತಾದ ಉಗ್ರಗಾಮಿ ಸಂಘಟನೆಗಳ ಸಂಪರ್ಕ ಹೊಂದಿದ್ದರು. ಹೈದರಾಬಾದ್, ಆಂಧ್ರಪ್ರದೇಶ, ಮಹಾ ರಾಷ್ಟ್ರಗಳಲ್ಲಿ ವಿಧ್ವಂಸಕ ಕೃತ್ಯದ ಸಂಚು ರೂಪಿಸಿದ್ದರು. ಆದರೆ, ಝಾಕಿರ್ ಎಂಬಾತ ತನಿಖಾಧಿಕಾರಿಗಳ ಕೈಗೆ ಸಿಗದ ಕಾರಣ, 13 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.

ಇವರು ಬೆಂಗಳೂರು ಅಲ್ಲದೇ ಹೈದರಾಬಾದ್, ಶೋಯೆಬ್ ಅಹ್ಮದ್ ಮಿರ್ಜಾ, ಅಬ್ದುಲ್ ಹಕೀಮ್ ಜಮಾದಾರ್, ರಿಯಾಜ್ ಅಹ್ಮದ್ ಬ್ಯಾಹಟ್ಟಿ, ಮೊಹಮದ್ ಅಕ್ರಮ್, ಉಬೇದುಲ್ಲಾ ಬಹದ್ದೂರ್, ವಾಹಿದ್ ಹುಸೇನ್, ಜರ್ ಇಕ್ಬಾಲ್ ಶೋಲಾಪುರ್, ಮೊಹಮದ್ ಸಾಧಿಕ್, ಮೆಹಬೂಬ್ ಬಾಗುಲ್ ಕೋಟ, ಒಬೈದ್ ಉರ್ ರೆಹಮಾನ್, ನಯೀಮ್ ಸಿದ್ಧಿಕಿ, ಇಮ್ರಾನ್ ಅಹ್ಮದ್ ಹಾಗೂ ಸಯ್ಯದ್ ತಾಂಜಿಮ್ ಅಹ್ಮದ್  ಜೈಲುಶಿಕ್ಷೆಗೆ ಗುರಿಯಾಗಿದ್ದಾರೆ.