ಬಿಜೆಪಿ ನಾಯಕ ಗಿರೀಶ್ ಮಟ್ಟಣ್ಣವರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ.

0
877

ಬಿಜೆಪಿ ನಾಯಕ ಗಿರೀಶ್ ಮಟ್ಟಣ್ಣವರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತಿದ್ದಾರೆ. ಮಹಾದಾಯಿ ನದಿ ವಿಚಾರದಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಮಟ್ಟಣ್ಣವರ್ ದಿಕ್ಕು ತಪ್ಪಿಸುತ್ತಿದ್ದಾರೆ ಮತ್ತು ಗೋವಾ ಮಹಾರಾಷ್ಟ್ರಗಳಿಗೆ ಅನುಕೂಲ ಮಾಡಿಕೊಡಲು ಕಳಸಾ ನಾಳೆ ತಡೆಗೋಡೆ ದ್ವಂಸಗೊಳಿಸಲಾಗಿದೆ ಎಂಬ ಸುಳ್ಳು ಸುದ್ದಿ ಹರಡಿದ್ದಾರೆ.

photos

ಈ ಕಾರಣದಿಂದ ಇಂಥ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಬೆಂಗಳೂರಿನ ಆನಂದ್ ರಾವ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಸುತಿದ್ದಾರೆ.

 ಬಿಜೆಪಿ ನಾಯಕ ಗಿರೀಶ್ ಮಟ್ಟಣ್ಣವರ್ ವಿರುದ್ಧಹೋರಾಟದ ವಿರೋದವಾಗಿ ಯುವಕಾಂಗ್ರೆಸ್ ಮುಖಂಡ ಮನೋಹರ್ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಗಿರೀಶ್ ಮಟ್ಟಣ್ಣವರ್ ಹುಸಿ ನಾಯಕ, ಮಹದಾಯಿ ವಿಚಾರದಲ್ಲಿ ರಾಜ್ಯದ ರೈತರ ಹೋರಾಟ ಹೈಜಾಕ್ ಮಾಡಲು ಯತ್ನಿಸಿದ್ದಾರೆ. ಕಳಸಾ ಬಂಡೂರಿ ಯೋಜನೆ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ಪ್ರಧಾನಿ ಮದ್ಯ ಪ್ರವೇಶಕ್ಕೆ ಯತ್ನಿಸುತ್ತಿದು. ಇಂಥ ಸಂದರ್ಭದಲ್ಲಿ ಸರ್ಕಾರ ಹಾಗೂ ಹೋರಾಟಗಾರರನ್ನು ದಿಕ್ಕು ತಪ್ಪಿಸಲು ಮಟ್ಟಣ್ಣವರ್ ಯತ್ನಿಸುತ್ತಿದ್ಧಾರೆ.ಆದ್ದರಿಂದ ಹಿಂದೆ ಕೂಡ ಅವರು ಶಾಸಕರ ಭವನಕ್ಕೆ ಹುಸಿಬಾಂಬ್ ಕರೆ ಮಾಡಿ ಕುಖ್ಯಾತಿ ಗಳಿಸಿದ್ದರು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು.
– ಯುವಕಾಂಗ್ರೆಸ್ ಮುಖಂಡ ಮನೋಹರ್ ಮಾದ್ಯಮಗಳಿಗೆ ಹೇಳಿಕೆ