ಬಿಪಿಎಲ್ ಕುಟುಂಬಕ್ಕೆ ಬಂಪರ್ ಕೋಡುಗೆ

0
4317

ನವದೆಹಲಿ: ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್‌) ಕುಟುಂಬಗಳ 1 ಲಕ್ಷ ವರೆಗಿನ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಹಾಗೆಯೇ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ಶೇ 20ರಷ್ಟು ಏರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಬಡತನ ರೇಖೆಗಿಂತ ಕೆಳಗಿನ ಹಾಗೂ ಮೇಲಿರುವ ಕುಟುಂಬಗಳನ್ನು ವಾರ್ಷಿಕ ಆದಾಯದ ಆಧಾರದಲ್ಲಿ ಗುರುತಿಸಲಾಗುತ್ತದೆ. ಚಾಲ್ತಿಯಲ್ಲಿರುವಂತೆ ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ ಆದಾಯ ರೂ. 12,000ಕ್ಕಿಂತ ಕಡಿಮೆ ಇರುವ ಕುಟುಂಬಗಳು ಬಿಪಿಎಲ್‌ ಅಡಿ ಬರುತ್ತವೆ. ಹಾಗೆ ನಗರದಲ್ಲಿ ಆದಾಯದ ಮಿತಿ ರೂ. 17,000. ಇದಕ್ಕಿಂತ ಕಡಿಮೆ ಇರುವವರು ಮಾತ್ರ ಬಿಪಿಎಲ್‌ ವರ್ಗ.

ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್) ಕುಟುಂಬಗಳ 1 ಲಕ್ಷ ವರೆಗಿನ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಹಾಗೆಯೇ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ಶೇ 20ರಷ್ಟು ಏರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್) ಕುಟುಂಬಗಳ 1 ಲಕ್ಷ ವರೆಗಿನ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಹಾಗೆಯೇ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ಶೇ 20ರಷ್ಟು ಏರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.70ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಕೆಂಪುಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು ಈ ಘೋಷಣೆ ಮಾಡಿದರು.

‘ಸ್ವಾತಂತ್ರ್ಯ ಹೋರಾಟಗಾರರು ಈಗ 25 ಸಾವಿರ ಪಿಂಚಣಿ ಪಡೆಯುತ್ತಿದ್ದಾರೆ. ಅದನ್ನು 30 ಸಾವಿರಕ್ಕೆ ಏರಿಸಲಾಗುವುದು’ ಎಂದು ತಿಳಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಕೆಲವು ಜನರ ಪಾತ್ರದ ಬಗ್ಗೆ ಅಗತ್ಯಕ್ಕಿಂತ ಹೆಚ್ಚಿನ ಚರ್ಚೆ ನಡೆದಿದೆ. ಆದರೆ ಬುಡಕಟ್ಟು ಜನರು ನಡೆಸಿದ ಹೋರಾಟಕ್ಕೆ ಗಮನವನ್ನೇ ನೀಡಲಾಗಿಲ್ಲ. ಹಾಗಾಗಿ ಹೆಚ್ಚು ಪ್ರಚಾರ ಪಡೆಯದ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಮುಂದಿನ ಜನಾಂಗಕ್ಕೆ ತಿಳಿಸುವುದಕ್ಕಾಗಿ ಹಲವು ರಾಜ್ಯಗಳಲ್ಲಿ ವಸ್ತುಸಂಗ್ರಹಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.