ಮಾಜಿ ಮುಖ್ಯಮಂತ್ರಿ ದಿ. ನಿಜಲಿಂಗಪ್ಪ ಅವರ 15 ನೇ ಪುಣ್ಯ ತಿಥಿ.

0
957

 

ಆಗಸ್ಟ್ 8ರಂದು ಮಾಜಿ ಮುಖ್ಯಮಂತ್ರಿ ದಿ. ನಿಜಲಿಂಗಪ್ಪ ಅವರ 15 ನೇ ಪುಣ್ಯ ತಿಥಿಯ ಸಂದರ್ಭದಲ್ಲಿ ಶನಿವಾರ, ಆ. 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಜಲಿಂಗಪ್ಪನವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ರಾಜ್ಯದ ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪನವರ 15ನೇ ಪುಣ್ಯತಿಥಿ ಅಂಗವಾಗಿ ದಿವಂಗತರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಕರ್ನಾಟಕದ ಏಕೀಕರಣದಲ್ಲಿ ದಿ.ನಿಜಲಿಂಗಪ್ಪನವರ ಪಾತ್ರ ಅತ್ಯಂತ ಮಹತ್ವದು.

ಅವರು ಮೂರು ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದು, ಅವರ ಅಧಿಕಾರಾವಧಿಯಲ್ಲಿ ನೀರಾವರಿ ಹಾಗೂ ವಿದ್ಯುತ್ ಉತ್ಪಾದನೆ ಮತ್ತು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಪ್ರಮುಖ ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಎಂದು ತಿಳಿಸಿದರು.

ನಿಜಲಿಂಗಪ್ಪ ಅವರು ಕರ್ನಾಟಕ ಕಂಡ ಮುತ್ಸದ್ದಿ ರಾಜಕಾರಣಿ. ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು. ಮೂರು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅವರ ಅವಧಿ ಅಭಿವೃದ್ಧಿ ಪರ್ವವಾಗಿತ್ತು. ನೀರಾವರಿಗೆ ಹೆಚ್ಚಿನ ಆದ್ಯತೆಯನ್ನು ಅವರ ನೀಡಿದ್ದರು. ಈ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಆಗಬೇಕು ಎಂಬ ಕನಸು ಕಂಡಿದ್ದರು. ಕರ್ನಾಟಕದ ಏಕೀಕರಣಕ್ಕೂ ಹೋರಾಟ ಮಾಡಿದ್ದವರು.