ಎ.ಬಿ.ವಿ.ಪಿ ಕಾರ್ಯಕರ್ತರ ಮೇಲೆ ಪೋಲೀಸರ ಲಾಠಿ ಚಾರ್ಜ್

0
1097
copy;eesanje

ಬೆಂಗಳೂರು, ಆ.16- ದೇಶದ್ರೋಹದ ಘೋಷಣೆ ಕೂಗಿದವರ ವಿರುದ್ಧ ಲಾಠಿ ಚಾರ್ಜ್ ಮಾಡಬೇಕಿತ್ತು ಬದಲಿಗೆ ದೇಶ ಪ್ರೇಮಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಇದು ಪ್ರಜಾತಂತ್ರ ಹಕ್ಕು ಪಾಕ್ ಪ್ರೇಮಿಗಳು, ದುಷ್ಕರ್ಮಿಗಳು ಆತಂಕಕಾರಿ ಕೃತ್ಯ ನಡೆಸುತ್ತಿದ್ದಾರೆ.

ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈ ಸಂದರ್ಭ ಪ್ರತಿಭಟನಾಕಾರರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು. ನಂತರ ಕೆಲವು ಎಬಿವಿಪಿ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಆದರೂ ಕೂಡ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆ ನಿಲ್ಲಿಸಲಿಲ್ಲ.ಸ್ಥಳಕ್ಕೆ ಗೃಹ ಸಚಿವರು ಬರಬೇಕು. ನಮ್ಮ ಬೇಡಿಕೆಗೆ ಸ್ಪಂದಿಸಬೇಕು ಎಂದು ಬಿಗಿ ಪಟ್ಟು ಹಿಡಿದರು. ಆಗ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಆಗ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಕಮೀಷನರ್ ಚರಣ್ರೆಡ್ಡಿ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಜೆ.ಸಿ.ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ. ತಪ್ಪಿತಸ್ಥರನ್ನು ಶೀಘ್ರ ಬಂಧಿಸಲಾಗುವುದು ಎಂದು ಹೇಳಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. ಈ ಸಂದರ್ಭದಲ್ಲಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.ವಾಹನ ಸವಾರರು ತೊಂದರೆಗೆ ಒಳಗಾದರು. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರನ್ನು ನೆಹರೂ ತಾರಾಲಯದ ಬಳಿಗೆ ಸ್ಥಳಾಂತರಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

 ದೇಶ ವಿರೋಧಿ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಬೇಕು, ಕಾರ್ಯಕ್ರಮಕ್ಕೆ ಸ್ಥಳಾವಕಾಶ ನೀಡಿದ ಸಂಸ್ಥೆಯ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಮತ್ತು ಆಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಪೊಲೀಸ್ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ಇಂದು ನಡೆದಿದೆ.

ಸರ್ಕಾರ ವಿದ್ಯಾರ್ಥಿಗಳ ಮೇಲೆ ಜಾರ್ಜ್ ಮಾಡಬಾರದಿತ್ತು ಎಂದರು ಸಿಎಂ,

ವಿದ್ಯಾರ್ಥಿಗಳ ಮೇಲಿನ ಲಾಠಿ ಜಾರ್ಜ್ ವಿಚಾರ, ಎಬಿವಿಪಿಯವರು ದೂರು ಕೊಟ್ಟಿದ್ದಾರೆ, ದೂರಿನ ಆಧಾರದ ಮೇಲೆ ಪೋಲೀಸರ ತನಿಖೆ ನಡೆಸ್ತಾ ಇದ್ದಾರೆ ಯಾರು ತಪ್ಪಿಸ್ಥರು ಇದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಾಗುತ್ತದೆ, ಈಗಾಗಲೇ ಎಫ್ ಐ ಆರ್ ಕೂಡ ದಾಖಲೆ ಆಗಿದೆ, ಕಾನೂನಿನಡಿಯಲ್ಲಿ ಸರಿಯಾದ ಕ್ರಮ ಪೋಲೀಸರು  ಕೈಗೊಳ್ಳುತ್ತಾರೆ, ಪೋಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಲಾಠಿ ಜಾರ್ಜ್ ಮಾಡಿದ್ದಾರೆ

  – ಸಿ.ಎಂ.  ಹೇಳಿಕೆ

ಪಾಕ್ ಪ್ರೇಮಿಗಳು, ದುಷ್ಕರ್ಮಿಗಳು ಆತಂಕಕಾರಿ ಕೃತ್ಯ ನಡೆಸುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಇದರ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಕೂಡ ಮಾತನಾಡಿದ್ದಾರೆ. ಆದರೆ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿದವರನ್ನು ಬಂಧಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟಿಸಿದೆ. ಆದ್ರೆ ಪೊಲೀಸರು ಅವರ ಮೇಲೆ ಲಾಠಿ ಪ್ರಹಾರ ಮಾಡಿದ್ದು ಸರಿಯಲ್ಲ. ಇದು ದೇಶ ಪ್ರೇಮಿಗಳ ಮೇಲೆ ಬಲ ಪ್ರಯೋಗವಾಗಿದೆ. ಗೃಹಸಚಿವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಇದು ಪ್ರಜಾತಂತ್ರ ಹಕ್ಕು. ಆ ಹಕ್ಕಿಗಾಗಿ ವಿದ್ಯಾರ್ಥಿ ಪರಿಷತ್ ಹೋರಾಟ ನಡೆಸಿದೆ. ಅಂಥವರ ಮೇಲೆ ಲಾಠಿ ಪ್ರಹಾರ ಸರಿಯಾದದ್ದಲ್ಲ.

– ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿಕೆ