ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಮ್ಮತಿ ; ಸುಪ್ರೀಂಗೆ ಕೇರಳ ಸರ್ಕಾರ

0
645

ನವದೆಹಲಿ: ಕೇರಳ ಸರ್ಕಾರ ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನದ ಒಳಗೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಪ್ರವೇಶದ ಅವಕಾಶ ಕಲ್ಪಿಸಿಕೊಡಲು ಸಿದ್ಧ ಎಂದು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಅಭಿಪ್ರಾಯವ್ಯಕ್ತಪಡಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಶಬರಿಮಲೆ ದೇಗುಲ ಪ್ರವೇಶಕ್ಕೆ 10 ರಿಂದ 50 ವಯೋಮಿತಿಯೊಳಗಿನ ಮಹಿಳೆಯರ ಮೇಲೆ ನಿರ್ಬಂಧ ವಿಧಿಸಲಾಗಿತ್ತು.

ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನದ ಒಳಗೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಪ್ರವೇಶದ ಅವಕಾಶ ಕಲ್ಪಿಸಿಕೊಡಲು ಸಿದ್ಧ ಎಂದು ಕೇರಳ ಸರ್ಕಾರ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಅಭಿಪ್ರಾಯವ್ಯಕ್ತಪಡಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಎಲ್ಲಾ ವಯೋಮಾನದ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಸರ್ಕಾರ ಸಿದ್ಧವಿದೆ ಎಂದು ಕೇರಳದ ಎಡರಂಗ ಸರ್ಕಾರ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತಿಳಿಸಿದ್ದು, ಈ ಮೂಲಕ ಮಹಿಳೆಯರ ಪ್ರವೇಶದ ಪರ ಸರ್ಕಾರ ನಿಂತಂತಾಗಿದೆ.

ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಮಹಿಳೆಯರ ಮೇಲಿನ ನಿಷೇಧ ದೇಗುಲದ ಸಂಪ್ರದಾಯ ಹಾಗೂ ಪದ್ಧತಿಯ ಭಾಗವಾಗಿದ್ದು, ಅದು ಮುಂದುವರೆಯಬೇಕು ಎಂದು ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ) ಅಭಿಪ್ರಾಯವ್ಯಕ್ತಪಡಿಸಿತ್ತು.

ಅಲ್ಲದೇ ಹಿಂದಿನ ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರದ ನಿಲುವು ಕೂಡಾ ಮಹಿಳೆಯರಿಗೆ ವ್ಯತಿರಿಕ್ತವಾಗಿತ್ತು.

ಕಾಂಗ್ರೆಸ್ ನೇತೃತ್ವದ ಹಿಂದಿನ ಸರ್ಕಾರ ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ ನೀಡುವುದನ್ನು ವಿರೋಧಿಸಿತ್ತು. ಇದು ನಂಬಿಕೆ ಮತ್ತು ಪರಂಪರೆಯ ಪ್ರಶ್ನೆ ಎಂದು ಹಿಂದಿನ ಸರ್ಕಾರ ಹೇಳಿತ್ತು. ಮಹಿಳೆಯರಿಗೆ ಪ್ರವೇಶ ನೀಡುವುದು ದೇವಾಲಯದ ಆಚರಣೆಗೆ ವಿರುದ್ಧ ವಾಗುತ್ತದೆ ಎಂದು ಫೆಬ್ರುವರಿಯಲ್ಲಿ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಹೇಳಿತ್ತು. 2006-11ರ ಅವಧಿಯಲ್ಲಿ ಅಧಿಕಾರದಲ್ಲಿದ್ದ ಎಲ್ಡಿಎಫ್ ಸರ್ಕಾರ ಎಲ್ಲ ಮಹಿಳೆಯರಿಗೆ ಎಲ್ಲ ದೇವಸ್ಥಾನಗಳಿಗೆ ಪ್ರವೇಶ ನೀಡುವುದರ ಪರವಾಗಿತ್ತು. ಈಗ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ) ಅವಕಾಶ ನೀಡಿದೆ.