ಶ್ರೀ ಜ್ಯೋತಿರ್ಭೀಮೇಶ್ವರ ವ್ರತ (ಭೀಮನ ಅಮಾವಾಸ್ಯೆ)

0
4625

ಭೀಮನ ಅಮಾವಾಸ್ಯೆ ಹಬ್ಬಕ್ಕೆ ಪತಿ ಸಂಜೀವಿನಿ ವ್ರತ ಅಥವಾ ಜ್ಯೋತಿ ಭೀಮೇಶ್ವರ ವ್ರತ ಎಂದೂ ಕರೆಯುತ್ತಾರೆ.

download

ಸಾಮಾನ್ಯವಾಗಿ ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲವಾದರೂ, ಆಷಾಢದ ಅಮಾವಾಸ್ಯೆಯ ದಿನ ಭೀಮನ ಅಮಾವಾಸ್ಯೆ ವ್ರತ ಎಂದು ಸಡಗರದಿಂದ ಹಬ್ಬವನ್ನು ಆಚರಿಸುತ್ತಾರೆ. ಪತಿಗೆ ದೀರ್ಘಾಯುಷ್ಯವನ್ನು ಕರುಣಿಸುವಂತೆ, ತಮ್ಮನ್ನು ದೀರ್ಘ ಸುಮಂಗಲಿಯಾಗಿ ಹರಸುವಂತೆ ಕೋರಿ ಶಿವನನ್ನು ಪೂಜಿಸುವ ಹಬ್ಬವೇ ಭೀಮನ ಅಮಾವಾಸ್ಯೆ.

ಅವಿವಾಹಿತ ಹೆಣ್ಣು ಮಕ್ಕಳು, ವಿವಾಹಿತ ನವ ವಧು ಈ ವ್ರತ ಮಾಡುವ ಪದ್ಧತಿ ಇದೆ. ಒಮ್ಮೆ ವ್ರತ ಕೈಗೊಂಡರೆ ಐದು, ಒಂಭತ್ತು ಅಥವಾ ಹದಿನಾರು ವರ್ಷ ಸಂಪೂರ್ಣಗೊಳಿಸಿ ಉದ್ಯಾಪನೆ ಮಾಡಿಬೇಕು ಎಂದು ಹಿಂದೂ ಪುರಾಣಗಳು ಹೇಳುತ್ತವೆ.

ಭೀಮನ ಅಮಾವಾಸ್ಯೆ (ಜ್ಯೋತಿರ್ಭೀಮೇಶ್ವರ) ವ್ರತ ಮಾಡುವ ವಿಧಾನ

ಒಂದು ತಟ್ಟೆಯಲ್ಲಿ ಧಾನ್ಯ ರಾಶಿ (ಅಕ್ಕಿ) ಹಾಕಿ , ಅದರ ಮೇಲೆ 2 ದೀಪದ ಕಂಭ ಇಡಬೇಕು. ತುಪ್ಪ ಹಾಕಿ ದೀಪ ಹಚ್ಚಬೇಕು . ಈ ದೀಪಸ್ತಂಭದಲ್ಲಿ ಈಶ್ವರ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಮಾಡಬೇಕು. ಸಾಮನ್ಯವಾಗಿ ಉಪಯೋಗಿಸುವ ಪೂಜಾ ಸಾಮಗ್ರಿಗಳ ಜೊತೆಗೆ, 9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಬೇಕು, ಪೂಜೆ ನಂತರ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ಮಾಡಿ ನಂತರ ಭೀಮೆಶ್ವರನ ಪೂಜೆ ಮಾಡಬೇಕು. ನೈವೇದ್ಯಕ್ಕೆ 9 ಕರಿಗಡುಬು ಮಾಡಿಕೊಳ್ಳಬೇಕು.

ಕ್ರಮವಾಗಿ ಪೂಜೆ ಮಾಡಿ ನಂತರ ವ್ರತ ಕಥಾ ಶ್ರವಣ ಮಾಡಬೇಕು. ವ್ರತ ಕಥಾ ಸಾರಾಂಶ ಕೆಳಗಿದೆ

vratakathe1
© poojavidhana.blogspot
vratakathe2
© poojavidhana.blogspot

ಈ ಹಬ್ಬದ ಇನ್ನೊಂದು ವಿಶೇಷತೆ ಭಂಡಾರ

bhandara2

ಕೆಲೆವೆಡೆ ಈ ಹಬ್ಬದಲ್ಲಿ ಸೋದರಿಯರು ಸೋದರರ ಕೈಯಿಂದ ಭಂಡಾರ ಒಡೆಸುತ್ತಾರೆ. ಭಂಡಾರ (ಸಿಹಿ ಇಲ್ಲದ ಕಡಬು), ಆದರೆ ಅದರೊಳಗೆ ಲಕ್ಷ್ಮೀ ಸ್ವರೂಪಿ ನಾಣ್ಯವನ್ನು ಇಟ್ಟು ಕರೆದಿರುತ್ತಾರೆ. ಅಂತಹ ಕಡುಬನ್ನು ಮುಂಬಾಗಿಲ ಹೊಸಿಲಲ್ಲಿಟ್ಟು ಸೋದರ ಹೊಸಿಲ ಮೇಲೆ ಕೂತು ತನ್ನ ಮೊಣಕೈಯಿಂದ ಅದನ್ನು ತುಂಡರಿಸುತ್ತಾನೆ. ನಂತರ ಅಣ್ಣನ ಆಶೀರ್ವಾದ ಬೇಡುವ ಸೋದರಿ, ಫಲ ತಾಂಬೂಲ ನೀಡುತ್ತಾಳೆ. ಒಂದು ರೀತಿ ರಕ್ಷಾ ಬಂಧನದ ಇನ್ನೊಂದು ಪದ್ದಂತಿರುತ್ತದೆ ಈ ಆಚರಣೆ.