ಮೈತ್ರಿ ಸರ್ಕಾರದಿಂದ ಪೊಲೀಸರಿಗೆ ಸಿಹಿಸುದ್ದಿ; ಅತಂತ್ರ ಸ್ಥಿತಿಯಲ್ಲೂ ಪೊಲೀಸರಿಗೆ 12.5 ರಷ್ಟು ವೇತನ ಹೆಚ್ಚಳ..

0
238

ಕತ್ತಿಯ ತುದಿಯಲ್ಲಿರುವ ಮೈತ್ರಿ ಸರ್ಕಾರ ಪೊಲೀಸರಿಗೆ ಸಿಹಿಸುದ್ದಿ ನೀಡಿದ್ದು, ಬಹುದಿನಗಳ ಬೇಡಿಕೆಯಾದ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಔರಾದ್ಕರ್ ವರದಿ ಜಾರಿಗೆ ಸಮ್ಮತಿ ಸೂಚಿಸಿದ್ದು, ಪೊಲೀಸರ ವೇತನ ಪರಿಷ್ಕರಣೆ ಕುರಿತು ನೀಡಲಾಗಿರುವ ವರದಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಗಳವಾರ ಅಂಕಿತ ಹಾಕಿದ್ದು, ಇಂದು ಸಂಜೆ ಅಧಿಕೃತ ಆದೇಶ ಹೊರಬೀಳಲಿದೆ. ಶೇ. 30ಕ್ಕೆ ಬದಲಾಗಿ ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ವರದಿ ಜಾರಿಯಿಂದ ಸರ್ಕಾರದ ಮೇಲೆ 630 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದ್ದು, ಆರ್ಥಿಕ ಹೊರೆಯನ್ನು ತಪ್ಪಿಸಲು ಮೂಲವರದಿಯಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಲಾಗಿದೆ.

Also read: ಕೇಂದ್ರ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಬಂಪರ್; ಜುಲೈ ಅಂತ್ಯಕ್ಕೆ ಸಿಗಲಿದೆ ನಿರೀಕ್ಷೆಗಿಂತ ಹೆಚ್ಚಿನ ವೇತನ..

ಹೌದು ಕರ್ನಾಟಕ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡಿದೆ. 2016ರ ಸೆ.27ರಂದು ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ಸಲ್ಲಿಸಿದ್ದ ವರದಿಯನ್ನು ಜಾರಿಗೆ ತರಲು ಒಪ್ಪಿಗೆ ನೀಡಲಾಗಿದೆ. ಆಗಸ್ಟ್‌ 1ರಿಂದ ಪೊಲೀಸರ ವೇತನ ಹೆಚ್ಚಳವಾಗಲಿದೆ. ರಾಘವೇಂದ್ರ ಔರಾದ್ಕರ್ ವರದಿ ಅನ್ವಯ ಕಾನೂನು ಸುವ್ಯವಸ್ಥೆ, ಬಂದೋಬಸ್ತ್‌, ಅಪರಾಧ, ಗುಪ್ತದಳ, ಸಿಐಡಿ ಆಂತರಿಕ ಭದ್ರತೆ, ಜಿಲ್ಲಾ ವಿಶೇಷ ಘಟಕ, ವೈರ್‌ಲೆಸ್‌ ವಿಭಾಗ, ಕಂಪ್ಯೂಟರ್ ವಿಭಾಗ, ಅರಣ್ಯ ಘಟಕ, ಲೋಕಾಯುಕ್ತ ಹೀಗೆ ವಿವಿಧ ಘಟಕಗಳ 86 ಸಾವಿರ ಪೊಲೀಸರ ವೇತನ ಏರಿಕೆಯಾಗಲಿದೆ.

ಔರಾದ್ಕರ್ ವರದಿ ಜಾರಿಗೊಳಿಸುವಂತೆ ಪೊಲೀಸರು ಹಲವು ದಿನದಿಂದ ಒತ್ತಾಯಿಸುತ್ತಿದ್ದರು. ವರದಿ ಜಾರಿಯಾದರೆ ಪೊಲೀಸರ ಮೂಲ ವೇತನ ಹೆಚ್ಚಳವಾಗಲಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಔರಾದ್ಕರ್ ವರದಿ ಜಾರಿಗೆ ಒಪ್ಪಿಗೆ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಔರಾದ್ಕರ್ ವರದಿಯಲ್ಲಿ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಪೊಲೀಸರ ವೇತನ ಕಡಿಮೆ ಇದೆ. ಆದ್ದರಿಂದ, ರಾಜ್ಯದಲ್ಲಿ ವೇತನ ಹೆಚ್ಚಳ ಮಾಡಬೇಕು ಎಂದು ಶಿಫಾರಸು ಮಾಡಲಾಗಿತ್ತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಪೊಲೀಸರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆಗ ವೇತನ ಹೆಚ್ಚಳದ ಬಗ್ಗೆ ವರದಿ ನೀಡಲು ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು.

Also read: ರಾಜ್ಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡಿದವರು ಕಡ್ಡಾಯವಾಗಿ ಗ್ರಾಮೀಣ ಸೇವೆಯನ್ನು ಮಾಡಲೇಬೇಕು ಇಲ್ಲದಿದ್ದರೆ ಬಿಳ್ಳಲಿದೆ ಬಾರಿ ದಂಡ..

ಕೇರಳ, ಆಂಧ‍್ರಪ್ರದೇಶ ಹಾಗೂ ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆಯ ವೇತನ ಆಧರಿಸಿ ರಾಜ್ಯ ಪೊಲೀಸರಿಗೆ ಶೇ.30 ರಷ್ಟು ವೇತನ ಹೆಚ್ಚಿಸುವಂತೆ ಗೃಹ ಸಚಿವರಾಗಿದ್ದ ಡಾ.ಪರಮೇಶ್ವರ್ ಅವರಿಗೆ ಸಮಿತಿ ವರದಿ ಸಲ್ಲಿಸಿತ್ತು. ಸಮಿತಿ ರಚನೆಯಾದ ಮೂರೇ ತಿಂಗಳಿನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತಾದರೂ ಇದೂವರೆಗೂ ಜಾರಿಯಾಗಿರಲಿಲ್ಲ. ಸರ್ಕಾರಕ್ಕೆ ಆರ್ಥಿಕವಾಗಿ ಹೊಣೆ ಹೆಚ್ಚಾಗುವ ಕಾರಣ ಹಣಕಾಸು ಇಲಾಖೆ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಎಂ.ಬಿ.ಪಾಟೀಲ್ ಅವರು ಮೈತ್ರಿ ಸರ್ಕಾರದಲ್ಲಿ ಗೃಹಮಂತ್ರಿಯಾದ ಬಳಿಕ ಔರಾದ್ಕರ್ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದರು. ಈಗ ಮುಖ್ಯಮಂತ್ರಿಗಳೇ ಪೊಲೀಸರ ಬೇಡಿಕೆ ಸ್ಪಧಿಸಿ ಸಿಹಿಸುದ್ದಿ ನೀಡಿದ್ದಾರೆ.