ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 27 ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
268

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 27 ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ ಮೂಲಕ ಅಕ್ಟೋಬರ್ 8,2020 ರೊಳಗೆ ಅರ್ಜಿ ಸಲ್ಲಿಸಬೇಕು.

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ

ಸಂಸ್ಥೆ (Organisation): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)

ಖಾಲಿ ಹುದ್ದೆಗಳ ವಿವರ: ಮ್ಯಾನೇಜರ್ (ಡೆಪ್ಯುಟಿ ಮ್ಯಾನೇಜರ್) – 11 ಹುದ್ದೆಗಳು ಮ್ಯಾನೇಜರ್ – 11 ಹುದ್ದೆಗಳು ಡೆಪ್ಯುಟಿ ಮ್ಯಾನೇಜರ್ (ಸಿಸ್ಟಂ ಆಫೀಸರ್) – 5 ಹುದ್ದೆಗಳು ಒಟ್ಟು – 27 ಹುದ್ದೆಗಳು

ವಿದ್ಯಾರ್ಹತೆ (Educational Qualification): ಹುದ್ದೆಗಳಿಗನುಸಾರ ಬಿ.ಇ/ಬಿ.ಟೆಕ್ ಇನ್ ಕಂಪ್ಯೂಟರ್ ಸೈನ್ಸ್, ಐಟಿ, ಡಾಟಾ ಸೈನ್ಸ್, ಮೆಷಿನ್ ಲರ್ನಿಂಗ್ ಮತ್ತು ಎಐ; ಎಂಬಿಎ/ಪಿಜಿಡಿಎಂ ಜೊತೆಗೆ ಫಿನಾನ್ಸ್ ವಿದ್ಯಾರ್ಹತೆಯನ್ನು ಎಐಸಿಟಿಇ/ಯುಜಿಸಿ ಇಂದ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ (Age): ಆಗಸ್ಟ್ 30,2020ರ ಅನ್ವಯ ಕನಿಷ್ಟ 24 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್‌ಬಿಐ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಎಸ್‌ಬಿಐ ಎಸ್‌ಓ ನೇಮಕಾತಿಯ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು. ನಂತರ ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 750/-ರೂ ಮತ್ತು ಪ.ಜಾ/ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: (Application End Date): ಅಕ್ಟೋಬರ್ 08, 2020

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ https://www.sbi.co.in/web/careers ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 08, 2020 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://sbi.co.in/ ಕ್ಲಿಕ್ ಮಾಡಿ.