ಬೆಂಗಳೂರಿನಲ್ಲಿ ಮತ್ತೆ ಬೀದಿ ನಾಯಿಗಳಿಗೆ ಬಾಲಕ ಬಲಿ; ಪಾಲಕರೇ ಮಕ್ಕಳನ್ನು ಹೊರಗೆ ಕಳುಹಿಸುವಾಗ ಎಚ್ಚರ..

0
285

ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಐದು ವರ್ಷದ ಬಾಲಕ ಬಲಿಯಾಗಿರುವ ಘಟನೆ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಮೂಲತಃ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನವರಾಗಿರುವ ಮಲ್ಲಪ್ಪ ಹಾಗೂ ಅನಿತಾ ದಂಪತಿಯ ಮೂರನೇ ಮಗ ದುರ್ಗೇಶ್ ಎಂದು ತಿಳಿದಿದೆ. ದುರ್ಗೇಶ್ ತಂದೆ ಕಟ್ಟಡ ನಿರ್ಮಾಣ ಕೂಲಿ ಕೆಲಸ ಮಾಡುತ್ತಿದ್ದರು. ಪ್ರತಿನಿತ್ಯ ಬಾಲಕ ತಂದೆ-ತಾಯಿಯೊಂದಿಗೆ ಹೋಗುತ್ತಿದ್ದ. ಅದರಂತೆ ಇಂದು ಕೂಡ ತಾಯಿ ಜೊತೆಗೆ ಬಾಲಕ ಹೋಗಿ ಆಟವಾಡುವಾಗ ಬಾಲಕ ಸಮೀಪದ ತೋಪಿನ ಬಳಿ ಹೋದಾಗ ಏಳೆಂಟು ಬೀದಿ ನಾಯಿಗಳು ದಾಳಿ ನಡೆಸಿವೆ. ಬಾಲಕನನ್ನು ಕೊಂದು ಹಾಕಿವೆ.

Also read: ಬಾಲಾಕೋಟ್ ದಾಳಿಯಲ್ಲಿ ಪಾಕ್ ಗಡಿಯೊಳಗೆ ನುಗ್ಗಿ ಉಗ್ರರನ್ನು ದ್ವಂಶ ಮಾಡಿದ ಇಬ್ಬರು ಪೈಲಟ್-ಗಳು ಬಿಚ್ಚಿಟ್ಟ ರೋಚಕ ಕ್ಷಣಗಳು..

ಹೌದು ನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತ ಹೆಚ್ಚಿದ್ದು, ಚಿಕ್ಕ ಮಕ್ಕಳು ಓಡಾಡುವಂತೆಯೇ ಇಲ್ಲವಾಗಿದೆ. ಮಕ್ಕಳು, ಮಹಿಳೆಯರು ಹಾಗೂ ಹಿರಿಯ ನಾಗರಿಕರ ಮೇಲೆ ರೌಡಿ ನಾಯಿಗಳು ದಾಳಿ ನಡೆಸುವುದು ಮಾಮೂಲಿಯಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾತ್ರ ಇದಕ್ಕೂ ತಮಗೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಇದರಿಂದಲೇ ಮತ್ತೊಂದು ಬಾಲಕ ಮೃತ ಪಟ್ಟಿದ್ದಾನೆ ಎನ್ನಲಾಗಿದೆ.

ಏನಿದು ಘಟನೆ?

ಕೆಲಸ ಅರಸಿ ಬೆಂಗಳೂರಿಗೆ ಬಂದ ದಂಪತಿ ಸಾಸ್ವೆಘಟ್ಟ ಗ್ರಾಮದಲ್ಲಿ ನೆಲೆಸಿದ್ದರು. ಕಳೆದ ಮೂರ್ನಾಲ್ಕು ವರ್ಷದಿಂದ ಬೆಂಗಳೂರಿನಲ್ಲಿ ಕಟ್ಟಡದ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ದುರ್ಗೇಶ್‍ನ ತಾಯಿ ಗರ್ಭಿಣಿಯಾಗಿದ್ದು, ಅವರು ಮನೆಯಲ್ಲಿಯೇ ಇದ್ದರು. ಆದರೆ ಕೆಲಸಕ್ಕೆ ಹೋಗಿದ್ದ ತಂದೆಗೆ ಭೇಟಿಯಾಗಲು ದುರ್ಗೇಶ್ ಹೋಗುತ್ತಿದ್ದಾಗ ಆತನ ಮೇಲೆ 8-10 ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿವೆ. ಪರಿಣಾಮ ಬಾಲಕ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದೇ ವ್ಯಾಪ್ತಿಯಲ್ಲಿ ನಡೆದ ಮೂರನೇ ಪ್ರಕರಣ ಇದಾಗಿದ್ದು, ಕಳೆದ ವಾರ ಬಾಲಕಿ ನಾಯಿ ದಾಳಿಗೆ ಸಾವನ್ನಪ್ಪಿದ್ದಳು. ಈ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಇರುವುದೇ ಸಾವುಗಳಿಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Also read: ಗ್ರಾಮ ವಾಸ್ತವ್ಯ ನಡೆಸಿರುವ ಸಿಎಂ ಅವರ ಒಂದು ದಿನದ ವಾಸ್ತವ್ಯಕ್ಕೆ ಖರ್ಚಾದ ಹಣ ಕೋಟಿ ರೂ ಅಂತೆ, ಇದೇನಾ ದುಂದು ವೆಚ್ಚವಿಲ್ಲದೆ ಗ್ರಾಮ ವಾಸ್ತವ್ಯ??

ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯ್ತಿ ಪಿಡಿಓ ವಿಚಾರಿಸಿದರೆ ಬಿಬಿಎಂಪಿ ತೋರಿಸುತ್ತಿದ್ದಾರೆ, ಬಿಬಿಎಂಪಿ ಅವರು ಹಾಗೂ ಇಲ್ಲಿ ಸುತ್ತಮುತ್ತಲ ಜನರು ಸೋಲದೇವನಹಳ್ಳಿ ಬಳಿ ಕಸ, ತ್ಯಾಜ್ಯಗಳನ್ನು ಎಸೆದು ಹೋಗುತ್ತಾರೆ. ಅಲ್ಲದೆ ಬಿಬಿಎಂಪಿ ಅವರು ನಗರದಲ್ಲಿದ್ದ ಬೀದಿ ನಾಯಿಗಳನ್ನು ಹಿಡಿದು ಇಲ್ಲಿ ತಂದು ಬಿಡುತ್ತಾರೆ ಎನ್ನುತ್ತಿದ್ದಾರೆ. ಯಲಹಂಕ ಶಾಸಕ ಎಸ್‍ಆರ್ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು, ಈ ಘಟನೆ ಬಗ್ಗೆ ಮಾತ್ರ ನನಗೆ ಮಾಹಿತಿ ಇದೆ. ಉಳಿದ ಎರಡು ಪ್ರಕರಣದ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಬೀದಿ ನಾಯಿಗಳನ್ನು ಕೊಲ್ಲಲು ಹೋದರೆ ಪ್ರಾಣಿ ದಯಾ ಸಂಘದವರು ಅಡ್ಡಿ ಪಡಿಸುತ್ತಾರೆ. ಅದನ್ನು ಬೇರೆ ಕಡೆಗೆ ಬಿಟ್ಟು ಬರಲು ಕೂಡ ಅನುಮತಿ ಇಲ್ಲ, ಎಂದು ಹೇಳಿದ್ದಾರೆ. ಹೀಗೆ ಒಂದಕ್ಕೊಂದು ಕಾರಣವನ್ನು ಪೋಣಿಸುತ್ತಾ ಹೋದರೆ ನಾಯಿಗಳಿಗೆ ಬಲಿಯಾಗುವ ಮಕ್ಕಳು ಮಹಿಳೆಯರು ರಸ್ತೆಯಲ್ಲಿ ಹೋಗುವುದೇ ಕಷ್ಟವಾಗುವುದರಲ್ಲಿ ಅನುಮಾನವೇ ಇಲ್ಲ.