ವಿಚಾರಣೆ ಮಾಡುತ್ತಿರುವಾಗ ನ್ಯಾಯಮೂರ್ತಿಗಳಿಗೆ ಚಾಕುವಿನಿಂದ ಇರಿದ ವ್ಯಕ್ತಿ ಮುಂದೇನಾಯಿತು ಗೊತ್ತೇ?

0
402

Kannada News | Karnataka News

ರಾಜ್ಯದಲ್ಲಿ ರಕ್ಷಣಾ ವ್ಯವಸ್ಥೆ ಎಷ್ಟರ ಮಟ್ಟಿಗಿದೆ ಎಂಬುದನ್ನು ಈ ಘಟನೆಯ ಮೂಲಕ ತಿಳಿಯುತ್ತದೆ. ಪೊಲೀಸರೆಂದರೆ ಹೆದರಿ ಓಡುವ ಕಾಲ ಇದಲ್ಲ. ಈಗ ಪೊಲೀಸರನ್ನು ಕಂಡರೆ, ನ್ಯಾಯಾಂಗ ವ್ಯವಸ್ಥೆ, ಕಾನೂನಿನ ಮೇಲೆ ಯಾವುದೇ ಭಯವಿಲ್ಲ ಎಂಬುದಕ್ಕೆ ಈ ಘಟನೆಯೇ ಹಿಡಿದ ಕನ್ನಡಿ.

ಅಷ್ಟಕ್ಕೂ ಏನು ನಡೆದಿದೆ ಗೊತ್ತೇ. ವ್ಯಕ್ತಿಯೊಬ್ಬ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ನ್ಯಾಯಾಧೀಶರ ಮೇಲೆಯೇ ಹಲ್ಲೆ ಮಾಡಿದ್ದಾನೆ. ಅಚ್ಚರಿಯಾದರೂ ಇದೆ ನಿಜ. ವ್ಯಕ್ತಿಯೊಬ್ಬ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ಈ ಘಟನೆ ನಡೆದಿದೆ. ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ತೇಜಸ್ ಶರ್ಮಾ ಎಂಬ ವ್ಯಕ್ತಿ ಏಕಾಏಕಿ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಅವರ ಮೇಲೆ ದಾಳಿ ಮಾಡಿ ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯನ್ನು ವಿಧಾನ ಸೌಧ ಪೊಲೀಸರು ಬಂಧಿಸಿದ್ದಾರೆ.

ಇನ್ನು ಹಲ್ಲೆಗೊಳಗಾಗಿ ರಕ್ತ ಸ್ರಾವದಿಂದ ಬಿದ್ದಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಲೋಕಾಯುಕ್ತ ಕಚೇರಿಯಲ್ಲಿ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಗೆ ಚಾಕು ಇರಿದಿರುವುದು ದೇಶಾದ್ಯಂತ ಸಂಚಲನ ಮೂಡಿಸಿದೆ.

Also read: ಮದುವೆ ಪ್ರಮಾಣಪತ್ರ ಪಡೆದುಕೊಳ್ಳುವುದು ಹೇಗೆ??