ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ AAI ಕಾರ್ಗೊದಲ್ಲಿ 283 ಮಲ್ಟಿಟಾಸ್ಕರ್ ಹುದ್ದೆಗಳ ನೇಮಕಾತಿ.!

0
108

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧೀನಕ್ಕೊಳಪಟ್ಟ ಎಎಐ ಕಾರ್ಗೊ ಲಾಜಿಸ್ಟಿಕ್ ಮತ್ತು ಅಲೈಡ್ ಸೈನ್ಸ್‌ ಸರ್ವೀಸ್ ಕಂಪನಿ ಲಿಮಿಟೆಡ್(AAICLAS), ಭಾರತದೆಲ್ಲೆಡೆ ಖಾಲಿ ಇರುವ 283 ಮಲ್ಟಿಟಾಸ್ಕರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಡಿಸೆಂಬರ್ 9,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಮಲ್ಟಿಟಾಸ್ಕರ್

ಸಂಸ್ಥೆ (Organisation): ಎಎಐ ಕಾರ್ಗೊ ಲಾಜಿಸ್ಟಿಕ್ ಮತ್ತು ಅಲೈಡ್ ಸೈನ್ಸ್‌ ಸರ್ವೀಸ್ ಕಂಪನಿ ಲಿಮಿಟೆಡ್

ವಿದ್ಯಾರ್ಹತೆ (Educational Qualification): 10ನೇ ತರಗತಿ / ಮೆಟ್ರಿಕ್ಯುಲೇಷನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ: ನವೆಂಬರ್ 15,2019ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಎಎಐ ಕಾರ್ಗೊ ಲಾಜಿಸ್ಟಿಕ್ ಮತ್ತು ಅಲೈಡ್ ಸೈನ್ಸ್‌ ಸರ್ವೀಸ್ ಕಂಪನಿ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ https://aaiclas-ecom.org/Live/index.aspx ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಡಿಸೆಂಬರ್ 9,2019ರೊಳಗೆ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ: ಜಂಟಿ ಜನರಲ್ ಮ್ಯಾನೇಜರ್ (ಎಚ್‌ಆರ್), ಎಎಐ ಕಾರ್ಗೋ ಲಾಜಿಸ್ಟಿಕ್ಸ್ & ಅಲೈಡ್ ಸರ್ವೀಸಸ್ ಕಂಪನಿ ಲಿಮಿಟೆಡ್, ಎಎಐಸಿಎಎಲ್‍ಎಸ್ ಕಾಂಪ್ಲೆಕ್ಸ್, ದೆಹಲಿ ಫ್ಲೈಯಿಂಗ್ ಕ್ಲಬ್ ರಸ್ತೆ, ಸಫ್ದರ್ಜಂಗ್ ವಿಮಾನ ನಿಲ್ದಾಣ, ನವದೆಹಲಿ -110 003.