ನೂಕುನುಗ್ಗುಲು ಆಗುತ್ತದೆ, ದಯವಿಟ್ಟು ನೀವು ಕಾರಿನೊಳಗೆ ಕುಳಿತುಕೊಳ್ಳಿ”, ಎಂದು ಹೇಳಿದ್ದಕ್ಕೆ ಡಿ.ಸಿ.ಪಿ. ಅಣ್ಣಾ ಮಲೈ ಮೇಲೆ ಹರಿಹಾಯ್ದ ನಟಿ ಜಯಪ್ರದಾ!!

0
829

ಕಂಠೀರವ ಸ್ಟುಡಿಯೋದಲ್ಲಿ ಜರುಗಿದ ಅಂಬರೀಶ್ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಅಭಿಮಾನಿಗಳು ಮತ್ತು ಕಲಾವಿದರ ಸೇರಿದ್ದರು ಈ ಸಮಯದಲ್ಲಿ ಯಾವುದೇ ತರಹದ ಘಟನೆಗಳು ಸಂಭವಿಸದಂತೆ ಮುಖ್ಯಮಂತ್ರಿಯವರ ಸೂಚನೆಯಂತೆ ಬಿಗಿಭದ್ರತೆ ವಹಿಸಲಾಯಿತು. ಈ ಅಂತ್ಯಕ್ರಿಯೆಯ ಸಮಯದಲ್ಲಿ ಕೆಲವೊಂದು ಕಲಾವಿದರಿಗೆ ಮತ್ತು ರಾಜಕಾರಣಿಗಳಿಗೆ ಪ್ರವೇಶವನ್ನು ನೀಡಲು ನಿಕಾಕರಿಸಿದ ಪೋಲಿಸ್ ಅಧಿಕಾರಿಗಳ ವಿರುದ್ದ ಮತ್ತು ಡಿಕೆಶಿ ವಿರುದ್ದ ಹಲವಾರು ಮಾತಿನ ಚಕಮಕಿಗಳು ನಡೆದವು ಈ ಸಮಯದಲ್ಲಿ ಮಾಜಿ ಸಂಸದೆ ಜಯಪ್ರದಾ ಅವರು DCP ಅಣ್ಣಾಮಲೈ ವಿರುದ್ದ ಕಿರಿಚಾಡಿದರು.

ಹೌದು ಕರ್ನಾಟಕದ ಜನರ ಜನರ ಮೆಚ್ಚಿನ ನಟ ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆಯ ಸಮಯದಲ್ಲಿ ನಟಿ ಜಯಪ್ರದಾ ಅವರು ಖಡಕ್ ಅಧಿಕಾರಿ ಡಿಸಿಪಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಯುತ್ತಿರುವ. ಸಮಯದಲ್ಲಿ ಜನರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ಆದಕಾರಣ ಯಾವುದೇ ಅಹಿತಕರಘಟನೆಗಳು ಆಗದ ಹಾಗೆ ಬೆಂಗಳೂರು ಪೊಲೀಸರು ಬಿಗಿ ಭದ್ರತೆಯನ್ನು ಒದಗಿಸಿದ್ದರು. ಆಗ ಕಂಠೀರವ ಸ್ಟುಡಿಯೋದ ಗೇಟ್ ಬಳಿ ಜಯಪ್ರದಾ ಅವರು ನಿಂತಿದ್ದರು. ನೂಕುನುಗ್ಗಲು ಉಂಟಾಗುತ್ತಿದ್ದಂತೆ ಅಣ್ಣಾಮಲೈ, ಕಾರಿನಲ್ಲಿ ಕುಳಿತುಕೊಳ್ಳುವಂತೆ ಜಯಪ್ರದಾ ಅವರಿಗೆ ಸೂಚಿಸಿದ್ದಾರೆ.

ಈ ಸಮಯದಲ್ಲಿ ಅವರು ಹೇಳಿದ್ದ ಮಾತನ್ನು ತಪ್ಪಾಗಿ ತಿಳಿದುಕೊಂಡ ನಟಿ ಜಯಪ್ರದಾ, ಸ್ಥಳದಲ್ಲಿಯೇ ಅಣ್ಣಾಮಲೈ ಅವರ ವಿರುದ್ಧ ಕೂಗಾಡಿದ್ದಾರೆ. ಅಣ್ಣಾಮಲೈ ಡಿಸಿಪಿ ಆದರೆ ನಾನು ಮಾಜಿ ಸಂಸದೆಯಾಗಿದ್ದಾನೆ. ಅದರಲ್ಲೂ ನಾನೊಬ್ಬ ಮಹಿಳೆ. ನಮಗೆ ಭದ್ರತೆ ಒದಗಿಸಬೇಕು ಅವರು. ಯಾವುದೇ ತೊಂದರೆಯಾಗದಂತೆ ಭದ್ರತೆ ನೀಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಹೇಳುವ ಮೂಲಕ ಅಣ್ಣಾಮಲೈ ವಿರುದ್ಧ ಜಯಪ್ರದಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಕೆಶಿ ವಿರುದ್ದ ಅಸಮಾಧಾನಗೊಂಡ ಕಲಾವಿದರ ತಂಡ:

ಅಂಬಿಯವರ ಅಂತ್ಯಕ್ರಿಯೆ ವೇಳೆ ಡಿ.ಕೆ ಶಿವಕುಮಾರ್ ಹೆಚ್ಚಿನ ನಿಗಾವಹಿಸಿದರು ಈ ವೇಳೆ ಅಲ್ಲಿ ಬಂದತಹ ಕಲಾವಿದರಿಗೆ ಪ್ರವೇಶವನ್ನು ನಿರಾಕರಿಸಿದರು ಕೆಲವೊಂದು ಹಿರಿಯ ನಟರಿಗೆ ಪ್ರವೇಶವನ್ನು ನಿರಾಕರಿಸಿದ್ದು ಅವಮಾನ ಮಾಡಿದ ಹಾಗೆ ಎಂದು ಡಿಕೆಶಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ರೆಬೆಲ್ ಸ್ಟಾರ್ ಅಂಬರೀಶ್ ನಿಧನದಿಂದ ಹಿಡಿದು ಅಂತ್ಯಕ್ರಿಯೆಯವರೆಗೂ ಅಚ್ಚುಕಟ್ಟಾಗಿ ಬಂದೋಬಸ್ತ್ ಒದಗಿಸಿದ ಪೊಲೀಸ್ ಇಲಾಖೆಯ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮಾತನಾಡಿ ಪೋಲಿಸ್ ಅಧಿಕಾರಿಗಳು ಬಿಗಿಭದ್ರತೆ ವಹಿಸಿದಕ್ಕೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ . ಬೆಂಗಳೂರು ಹಾಗೂ ಮಂಡ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯ ಎಲ್ಲರೂ ಎರಡು ದಿನಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಮಾರ್ಗದರ್ಶನದಲ್ಲಿ ಭದ್ರತೆ ಒದಗಿಸಿದ್ದಾರೆ. ಬಹಳ ಶಾಂತಿಯುತವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.