ಕಾಂಗ್ರೆಸ್ ಮುಕ್ತ ಕರ್ನಾಟಕವನ್ನು ಮಾಡುವ ಸದಾವಕಾಶ ಕನ್ನಡಿಗರಿಗಿದೆ, ಎಂದ ಯು.ಪಿ. ಸಿ.ಎಂ. ಯೋಗಿ ಆದಿತ್ಯನಾಥ್!! ಕನ್ನಡಿಗರು ಯಾರ ಪರ ಇದ್ದಾರೆ??

0
288

Kannada News | Karnataka News

ತಮ್ಮ ಖಡಕ್ ನಡೆಯಿಂದ ಮತ್ತು ನೇರವಾದ ಹೇಳಿಕೆಯಿಂದ ಮನೆಮಾತಾಗಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಯೋಗಿ ಭಾಷಣದಲ್ಲಿ ಏನು ಹೇಳಿದರು ಗೊತ್ತೇ.

ಮಂಗಳೂರಿನಲ್ಲಿ ಜನ ಸುರಕ್ಷಾ ಯಾತ್ರೆಯಲ್ಲಿ ಪಾಲ್ಗೊಳಲು ಬಂದ್ದಿದ ಅವರು, ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷದಿಂದ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ, ಕೋಮು ಹತ್ಯೆಗಳಾಗುತ್ತಿವೆ. ಇತ್ತೀಚಿಗೆ ನಡೆದ ಹಿಂದೂ ಯುವಕರ ಹತ್ಯೆಯೇ ಇದಕ್ಕೆ ಸಾಕ್ಷಿ ಎಂದರು.

ಈಶಾನ್ಯ ರಾಜ್ಯಗಳಲ್ಲಿ ಜನರು ಬಿಜೆಪಿಯನ್ನು ಬೆಂಬಲಿಸಿದ್ದಾರೆ, ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ಧಾರಗಳ ಬಗ್ಗೆ ವಿಶ್ವಾಸವಿದೆ. ಅಲ್ಲಿಯ 3 ರಾಜ್ಯಗಳ ಜನರು ಕಾಂಗ್ರೆಸ್ ಅನ್ನು ಕಿತ್ತೊಗೆದ್ದಿದಾರೆ. ಕಾಂಗ್ರೆಸ್ ಮುಕ್ತ ಭಾರತಕ್ಕೆ ಮೂರು ಹೊಸ ರಾಜ್ಯಗಳು ಸೇರ್ಪಡೆಯಾಗಿವೆ ಎಂದರು.

ಕರ್ನಾಟಕದಲ್ಲಿ ಸಾಮಾನ್ಯ ಜನ ಭಯದಿಂದ ಬದುಕುವ ವಾತಾವರಣ ಸೃಷ್ಟಿಯಾಗಿದೆ. ಕಾರವಳ್ಳಿಯಲ್ಲಿ ನಡೆದ ಸರಣಿ ಹತ್ಯೆಯೇ ಇದಕ್ಕೆ ಸಾಕ್ಷಿ. ಅಲ್ಲದೆ 23 ಬಿಜೆಪಿಯ ಹಿಂದೂ ಕಾರ್ಯಕರ್ತರ ಹತ್ಯೆ ನಡೆದಿದೆ. ಜನರಿಗೆ ಸುರಕ್ಷೆ ನೀಡುವಲ್ಲಿ ಸರಕಾರ ವಿಫಲವಾಗಿದೆ ಎಂದರು.

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನೀವು ಬಿಜೆಪಿಗೆ ಮತ ಹಾಕಿ ಗೆಲ್ಲಿಸಿ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿಸಬೇಕು. ಈಗಾಗಲೇ 29 ರಾಜ್ಯಗಳಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು ಸೇರಿ 22 ರಾಜ್ಯಗಳಲ್ಲಿ ಕಾಂಗ್ರೆಸ್ ಮುಕ್ತವಾಗಿಸಿದ್ದೇವೆ ಎಂದರು.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಕರಾವಳಿ ಜಿಲ್ಲೆಗಳಲ್ಲಿ ಶನಿವಾರದಿಂದ ಬಿಜೆಪಿ ನಾಯಕರು ನಾಲ್ಕು ದಿನದ ಯಾತ್ರೆ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಪಕ್ಷದ ಕಾರ್ಯಕರ್ತರ ಕೊಲೆ ಪ್ರಕರಣದ ನಂತರ, ಜನರ ಮುಂದೆ ಸರ್ಕಾರವನ್ನು ಚೀಮಾರಿ ಹಾಕಲು ಬಿಜೆಪಿಯವರು “ಜನರ ಸುರಕ್ಷತೆ” ಯಾತ್ರೆಯನ್ನು ಮಾಡುತ್ತಿದ್ದಾರೆ.

Also Read: ಪ್ರಪಂಚದ ಅತ್ಯಂತ ಶ್ರೀಮಂತ ವ್ಯಕ್ತಿ ಬಿಲ್ ಗೇಟ್ಸ್-ನ ಕಥೆಗಳು!!!