ಏರ್‌ ಇಂಡಿಯಾ ಲಿಮಿಟೆಡ್ ಅಕೌಂಟ್ಸ್ ಎಕ್ಸಿಕ್ಯುಟಿವ್ ಮತ್ತು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
437

ಉದ್ಯೋಗದ ನೀರಿಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಏರ್‌ ಇಂಡಿಯಾ ಲಿಮಿಟೆಡ್ ಅಕೌಂಟ್ಸ್ ಎಕ್ಸಿಕ್ಯುಟಿವ್ ಮತ್ತು ಅಕೌಂಟ್ಸ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌-ನಲ್ಲಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮೇ 10,11 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ12:30ರ ವರೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

Also read: ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಕೌಂಟ್ಸ್ ಎಕ್ಸಿಕ್ಯುಟಿವ್ ಮತ್ತು ಅಕೌಂಟ್ಸ್ ಕ್ಲರ್ಕ್

ಸಂಸ್ಥೆ (Organisation): ಏರ್‌ ಇಂಡಿಯಾ ಲಿಮಿಟೆಡ್

ವಿದ್ಯಾರ್ಹತೆ (Educational Qualification): ಅಕೌಂಟ್ಸ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಸಿಎ/ಐಸಿಡಬ್ಲ್ಯೂಎ/ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರುವುದರ ಜೊತೆಗೆ 2 ವರ್ಷದ ಅನುಭವ ಮತ್ತು ಅಕೌಂಟ್ಸ್ ಕ್ಲರ್ಕ್ ಹುದ್ದೆಗಳಿಗೆ ಸಿಎ ಇಂಟರ್/ ಐಸಿಡಬ್ಲ್ಯೂಎ ಇಂಟರ್ / ಬಿ.ಕಾಂ ಜೊತೆಗೆ 2 ವರ್ಷದ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು 1,000/-ರೂ ಅರ್ಜಿ ಶುಲ್ಕ ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಏರ್‌ ಇಂಡಿಯಾ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್‌ http://www.airindia.in./ ರಲ್ಲಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ ಅಗತ್ಯ ದಾಖಲೆಗಳೊಂದಿಗೆ ದೆಹಲಿ ಮತ್ತು ಮುಂಬೈ ನಲ್ಲಿ ಮೇ 3,4 ಮತ್ತು ಮೇ 10,11 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ12:30ರ ವರೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ: http://www.airindia.in/writereaddata/Portal/career/743_1_Recruitment-of-Accts-Executive-Asst-Clerk.pdf ಕ್ಲಿಕ್ ಮಾಡಿ.