ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಸುಟ್ಟು ಹಾಕಿದ ನಾಲ್ವರು ಆರೋಪಿಗಳು ಎನ್​ಕೌಂಟರ್; ಪೊಲೀಸರ ಕ್ರಮಕ್ಕೆ ದೇಶವೇ ಮೆಚ್ಚುಗೆ.!

0
458

ಇಡಿ ದೇಶವನ್ನೇ ಬೆಚ್ಚಿಬಿಲಿಸಿದ ತೆಲಂಗಾಣ ಪಶುವೈದ್ಯೆ ಅತ್ಯಾಚಾರ-ಕೊಲೆ ಮಾಡಿದ ನಾಲ್ವರು ಪಾಪಿಗಳ ಹುಟ್ಟಡಗಿಸಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ. ಪ್ರಕರಣ ನಡೆದ ದಿನದಿಂದ ಆರೋಪಿಗಳನ್ನು ಗಲ್ಲಿಗೇರಿಸಿ ಎನ್ನುವ ಕೂಗು ಕೇಳಿಬರುತ್ತಿತ್ತು, ಅದಕ್ಕೂ ಮೀರಿ ಎನ್​ಕೌಂಟರ್ ಮಾಡಿದ ಪೊಲೀಸರ ಕ್ರಮಕ್ಕೆ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿದೆ.

ನಾಲ್ಕು ಅತ್ಯಾಚಾರಿಗಳ ಎನ್​ಕೌಂಟರ್?

ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ. ಆರೋಪಿಗಳಾದ ಆರೀಫ್, ಶಿವ, ಚನ್ನಕೇಶವಲು ಹಾಗೂ ನವೀನ್‌ನನ್ನು ಪೊಲೀಸರು ಪ್ರಕರಣ ಸಂಬಂಧ ತೀವ್ರ ವಿಚಾರಣೆಗೊಳಪಡಿಸಿದ್ದರು. ಈ ವೇಳೆ ಆರೋಪಿಗಳು ಘಟನೆಯ ಇಂಚಿಂಚು ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೆ ಇಂದು ಮುಂಜಾನೆ ಆರೋಪಿಗಳನ್ನು ಕೊಲೆ ನಡೆದ ಸ್ಥಳದ ಮಹಜರಿಗಾಗಿ ಪೊಲೀಸರು ಕರೆದೋಯ್ದಿದ್ದರು. ಶಾದ್‌ನಗರದ ಚಟಾನ್‌ಪಲ್ಲಿ ಬ್ರಿಡ್ಜ್‌ ಮೇಲೆ ಆರೋಪಿಗಳು ಪರಾರಿಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ನಾಲ್ವರು ಅತ್ಯಾಚಾರಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ತೀವ್ರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನ್ಯಾಷನಲ್​ ಹೈವೇ 44ನಲ್ಲಿ ಘಟನೆ ನಡೆದಿದೆ. ಬೆಳಗ್ಗಿನ ಜಾವ 3.30ಕ್ಕೆ ನಾಲ್ವರು ಅತ್ಯಾಚಾರಿಗಳ ಎನ್​ಕೌಂಟರ್​ ಮಾಡಲಾಗಿದೆ.

ಏನಿದು ಪ್ರಕರಣ?

ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈ ಕೃತ್ಯಕ್ಕೆ ಇವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.

ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳನ್ನು ಬಹಿರಂಗಪಡಿಸಿದ್ದರು. ಸಾಮೂಹಿಕ ಅತ್ಯಾಚಾರದ ಬಳಿಕ ಪಶುವೈದ್ಯೆ ಓಡಿಹೋಗಬಾರದು ಎನ್ನುವ ಉದ್ದೇಶದಿಂದ ಅವಳ ಕೈ ಕಾಲುಗಳನ್ನು ಕಟ್ಟಿದ್ದೆವು. ಅತ್ಯಾಚಾರದ ನಂತರವೂ ಸಂತ್ರಸ್ತೆಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದೆವು. ಸಂತ್ರಸ್ತೆ ಪ್ರಜ್ಞೆ ತಪ್ಪಿದಾಗ ಆಕೆಯನ್ನು ಸೇತುವೆಯ ಕೆಳಗೆ ಸಾಗಿಸಲಾಗಿತ್ತು. ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ವಿ ಎಂದು ಮುಖ್ಯ ಆರೋಪಿ ಮೊಹಮ್ಮದ್ ಪಾಷಾ, ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡು. ಬೆಂಕಿ ಹಚ್ಚುವುದಕ್ಕೂ ಮುನ್ನ ಪಶುವೈದ್ಯೆ ಮೃತಪಟ್ಟಿದ್ದಾಳೆ ಎಂದು ಭಾವಿಸಿದ್ದೇವು. ಆದರೆ ಬೆಂಕಿಯ ಹಚ್ಚಿದಾಗ ಅವಳು ಕಿರುಚಲು ಪ್ರಾರಂಭಿಸಿದಳು. ಹೀಗಾಗಿ ಸಂತ್ರಸ್ತೆ ಸಾಯುವವರೆಗೂ ನೋಡುತ್ತಲೇ ಇದ್ದೆವು. ಎಂದು ಹೇಳಿದರು ಈಗ ಪಾಪಿಗಳನ್ನು ಅದೇ ಸ್ಥಳದಲ್ಲಿ ಸುಟ್ಟು ಹಾಕಲಾಗಿದೆ.