ಡಿಪ್ಲೋಮ ಮಾಡಿದ ಅಭ್ಯರ್ಥಿಗಳಿಗೆ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಉದ್ಯೋಗ ಅವಕಾಶ..!!

0
81

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯು 6 ಭಾಷಣ ಮತ್ತು ಶ್ರವಣ ತಂತ್ರಜ್ಞ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ನವೆಂಬರ್ 11,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Also read: ಕೆಎಪಿಎಲ್‌ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ; ನವೆಂಬರ್ 19 ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಭಾಷಣ ಮತ್ತು ಶ್ರವಣ ತಂತ್ರಜ್ಞ

ಸಂಸ್ಥೆ (Organisation): ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಿದ್ಯಾರ್ಹತೆ (Educational Qualification): ಡಿಪ್ಲೋಮಾ

ವಯೋಮಿತಿ: ಭಾಷಣ ಮತ್ತು ಶ್ರವಣ ತಂತ್ರಜ್ಞ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿದಾರರು ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 100/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 40/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು. ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕವಿನಾಯಿತಿಯನ್ನು ಹೊಂದಿರುತ್ತಾರೆ

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ