ಎಲ್ಲಾ ನೌಕರರಿಗೆ ಸಿಹಿ ಸುದ್ದಿ, ಪ್ರತಿ ತಿಂಗಳು ನೀಮ್ಮ ಸಂಬಳದಲ್ಲಿ ಕಟ್ ಆಗೋ ಪಿ.ಎಫ್. ಗೆ ಇನ್ಮೇಲಿಂದ ಜಾಸ್ತಿ ಬಡ್ಡಿ ಬರುತ್ತೆ, ಇದು ಮೋದಿ ಗಿಫ್ಟ್!!!

0
1966

2016ರ ಬಳಿಕ ಇದೇ ಮೊದಲ ಬಾರಿಗೆ ನೌಕರರ ಭವಿಷ್ಯ ನಿಧಿಯ ಬಡ್ಡಿದರದಲ್ಲಿ ಏರಿಕೆ ಮಾಡಲಾಗಿದೆ. ಇದುವರೆಗೂ ಶೇ 8.55ರಷ್ಟಿದ್ದ ಇಪಿಎಫ್ ಬಡ್ಡಿದರವು ಶೇ 8.65ಕ್ಕೆ ಹೆಚ್ಚಳವಾಗಲಿದೆ. ಈ ನಿರ್ಧಾರವು 2018-19ರ ಹಣಕಾಸು ವರ್ಷದಿಂದಲೇ ಜಾರಿಗೆ ಬರುವ ಮೂಲಕ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ತನ್ನ ಆರು ಕೋಟಿ ಚಂದಾದಾರರಿಗೆ ಸಿಹಿಸುದ್ದಿ ನೀಡಿದೆ.

Also read: ಪಿ.ಎಫ್. ವಿತ್-ಡ್ರಾ ಮಾಡಬೇಕಾದರೆ ಈ ವಿಷಯ ಗಮನದಲ್ಲಿ ಇಲ್ಲ ಅಂದ್ರೆ ಹಣ ಕಳೆದುಕೊಳ್ಳುತ್ತೀರಿ!!

ಹೌದು ಆದಾಯ ತೆರಿಗೆ ಮೇಲಿನ ವಿನಾಯಿತಿಯ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಮಧ್ಯಮ ವರ್ಗದ ನೌಕರರಿಗೆ ಖುಷಿ ನೀಡಿದ್ದ ಕೇಂದ್ರ ಸರ್ಕಾರ, ಮತ್ತೊಂದು ಸಿಹಿ ಸುದ್ದಿ ನೀಡಿದೆ. 2018-19ರಲ್ಲಿ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ)ಯ ಸಿಬಿಟಿ ಮಂಡಳಿಯು ಇಪಿಎಫ್ ಬಡ್ಡಿದರವನ್ನು ಶೇ. 8.55 ರಿಂದ ಶೇ. 8.65ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಿತ್ತು. ಇದೀಗ ಹಣಕಾಸು ಸಚಿವಾಲಯ ಸಿಬಿಟಿಯ ಶಿಪಾರಸ್ಸನ್ನು ಅನುಮೋದಿಸಿದ್ದು, ಈ ನಿರ್ಧಾರದಿಂದ ಆರು ಕೋಟಿ ಗ್ರಾಹಕರಿಗೆ ಪ್ರಯೋಜನವಾಗಲಿದ್ದು, ಕೇಂದ್ರ ಸರ್ಕಾರಕ್ಕೆ ರೂ. 151 ಕೋಟಿ ಹೆಚ್ಚುವರಿ ಹೊರೆಯಾಗಲಿದೆ.

ಇಪಿಎಫ್ ಬಡ್ಡಿದರ ಹೆಚ್ಚಳ;

Also read: ಇ.ಪಿ.ಎಫ್.ನ ಈ ನಿಯಮಗಳನ್ನು ತಿಳಿದುಕೊಂಡಿರಿ, ಬೇಕಾದ ಸಮಯಕ್ಕೆ ತುಂಬಾ ಸಹಾಯಕ್ಕೆ ಬರುತ್ತದೆ..

ಇಪಿಎಫ್‌ಒ ಸಭೆಯಲ್ಲಿ ಪಿಎಫ್‌ ಮೇಲಿನ ಬಡ್ಡಿದರ ಹೆಚ್ಚಳ ಮಾಡುವ ನಿರ್ಧಾರಕ್ಕೆ ಎಲ್ಲ ಸದಸ್ಯರು ಬೆಂಬಲ ನೀಡಿದರು ಎಂದು ಸಚಿವ ಗಂಗ್ವಾರ್‌ ಹೇಳಿದರು. ಅನುಮೋದನೆ ಪಡೆಯಲು ಈ ಪ್ರಸ್ತಾಪನೆಯನ್ನು ಕೇಂದ್ರ ವಿತ್ತ ಸಚಿವಾಲಯಕ್ಕೆ ರವಾನಿಸಲಾಗುತ್ತದೆ. ವಿತ್ತ ಸಚಿವಾಲಯದ ಅನುಮೋದನೆ ಸಿಕ್ಕ ಬಳಿಕ, ಚಂದಾದಾರರ ಪಿಎಫ್‌ ಹಣಕ್ಕೆ ಹೆಚ್ಚಿನ ಬಡ್ಡಿ ಲಭ್ಯವಾಗಲಿದೆ. ಕೇಂದ್ರ ಕಾರ್ಮಿಕ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶೇ. 8.65 ಬಡ್ಡಿದರವು ಸರ್ಕಾರ ಸಣ್ಣ ಉಳಿತಾಯ ಯೋಜನೆಗಳ ಮೇಲೆ ನಿಡುವ ಬಡ್ಡಿದರಕ್ಕಿಂತ ಹೆಚ್ಚಿದೆ. ಇಪಿಎಫ್ ಬಡ್ಡಿದರ 2016ರ ಬಳಿಕ ಇದೇ ಮೊದಲ ಬಾರಿಗೆ ಏರಿಕೆ ಮಾಡಲಾಗಿದೆ. ಇದುವರೆಗೂ ಶೇ 8.55ರಷ್ಟಿದ್ದ ಇಪಿಎಫ್ ಬಡ್ಡಿದರವು

ಶೇ 8.65ಕ್ಕೆ ಹೆಚ್ಚಳವಾಗಲಿದೆ.

ಈ ಹಿಂದೆ ನೌಕರರ ಭವಿಷ್ಯನಿಧಿ ಸಂಸ್ಥೆಯ (ಇಪಿಎಫ್‌ಒ) ಮಂಡಳಿಯು ಇಪಿಎಫ್ ಬಡ್ಡಿದರ ಹೆಚ್ಚಳಕ್ಕೆ ಹಣಕಾಸು ಸಚಿವಾಲಯಕ್ಕೆ ಶಿಫಾರಸು ಮಾಡಿತ್ತು. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಇಪಿಎಫ್ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ ಎನ್ನಲಾಗಿತ್ತು. ಕಾರ್ಮಿಕ ಸಚಿವರ ನೇತೃತ್ವದ ಕೇಂದ್ರ ಟ್ರಸ್ಟಿಗಳ ಮಂಡಳಿಯು ಪ್ರಸಕ್ತ ಹಣಕಾಸು ವರ್ಷದ ಇಪಿಎಫ್‌ ಬಡ್ಡಿದರದ ನಿರ್ಧಾರ ತೆಗೆದುಕೊಂಡಿದೆ. ಈ ನಿರ್ಧಾರದಿಂದ ಆರು ಕೋಟಿ ಗ್ರಾಹಕರಿಗೆ ಅನುಕೂಲವಾಗಲಿದ್ದು, ಕೇಂದ್ರ ಸರ್ಕಾರಕ್ಕೆ 151 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ. ಪಿಂಚಣಿಗೆ ಸಂಬಂಧಿಸಿದ ಪ್ರಸ್ತಾವಗಳ ಕುರಿತು ಚರ್ಚಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದ್ದಾರೆ.

ತುಟ್ಟಿ ಭತ್ಯೆ ಏರಿಕೆ?

Also read: ನಿಮಗೂ ಹುತಾತ್ಮ ಸೈನಿಕರ ಕುಟುಂಬಗಳಿಗೆ ಧನ ಸಹಾಯ ಮಾಡುವ ಇಚ್ಛೆ ಇದ್ರೆ ಈ ಆ್ಯಪ್​ ಮೂಲಕ ಹುತಾತ್ಮ ಸೈನಿಕರ ಕುಟುಂಬಕ್ಕೆ ನೆರವಾಗಿ..

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ನೌಕರರ ತುಟ್ಟಿ ಭತ್ಯೆ ಏರಿಕೆಗೆ ಒಪ್ಪಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ (ಡಿಎ) ಶೇ. 3ರಷ್ಟು ಏರಿಕೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಮಂಗಳವಾರ ಒಪ್ಪಿಗೆ ನೀಡಿದೆ. ಡಿಎ ಹೆಚ್ಚಳದಿಂದ ಸುಮಾರು 1.1 ಕೋಟಿ ಕೇಂದ್ರ ಸರ್ಕಾರಿ ನೌಕರರು ಹಾಗು ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ. ಜನವರಿ 1, 2019ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆ ಏರಿಕೆಯನ್ನು ಜಾರಿ ತರಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರು ಶೇ. 9ರಷ್ಟು ತುಟ್ಟಿ ಭತ್ಯೆ ಪಡೆಯುತ್ತಿದ್ದು, ಇದೀಗ ಶೇ. 3ರಷ್ಟು ಏರಿಕೆಯೊಂದಿಗೆ ಶೇ. 12ಕ್ಕೆ ತಲುಪಿದೆ. ಈ ಸಂಬಧ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ತಿಳಿಸಿದ್ದಾರೆ.