ಸರ್ಕಾರಿ ಶಾಲೆಯಲ್ಲೇ ಆಂಗ್ಲ ಮಾಧ್ಯಮ ಶಿಕ್ಷಣದ ವಿಚಾರದಲ್ಲಿ ಪೋಷಕರು ಸರ್ಕಾರದ ವಿರುದ್ಧ ಯಾಕೆ ಆಕ್ರೋಶಗೊಂಡಿದ್ದಾರೆ ಗೊತ್ತಾ?

0
488

ರಾಜ್ಯದಲ್ಲಿ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎನ್ನುವ ಉದೇಶದಿಂದ, ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ದಾಖಲಾಗುತ್ತಿದ್ದು. ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದ ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ ಆ ಕಾರಣಕ್ಕೆ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯನ್ನು ತೆರೆದು ಸರ್ಕಾರಿ ಶಾಲಾ ಮಕ್ಕಳು ಕೂಡ ಆರಂಭದಿಂದಲೇ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲಿ ಎಂಬ ಆಶಯದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡು. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ ಒಂದು ಸಾವಿರ ಸರ್ಕಾರಿ ಶಾಲೆಗಳನ್ನು ಸರ್ಕಾರ ಆಯ್ಕೆ ಮಾಡಿಕೊಂಡಿತ್ತು, ಈ ಯೋಜನೆಯಿಂದ ಸಂತಸದಲ್ಲಿದ ಪಾಲಕರಿಗೆ ಮತ್ತು ಮಕ್ಕಳಿಗೆ ಬೇಸರದ ಸುದ್ದಿಯನ್ನು ಸರ್ಕಾರ ಹೊರಡಿಸಿದೆ.

ಹೌದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಅದರಂತೆ ಆಯ್ಕೆಯಾಗಿರುವ ಸಾವಿರ ಶಾಲೆಗಳಲ್ಲೂ ಆಂಗ್ಲ ಮಾಧ್ಯಮ ತೆರೆದು, ದಾಖಲಾತಿ ಪ್ರಕ್ರಿಯೆಯನ್ನು ಆರಂಭಿಸಿದ್ದರು. ಅದರಂತೆ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಿದ್ದರಿಂದ ಪಾಲಕ, ಪೋಷಕರು ಉತ್ಸಾಹದಿಂದ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಮುಂದೆ ಬಂದಿದ್ದರು. ಅಷ್ಟೇಅಲ್ಲದೆ. ಬಹಳಷ್ಟು ಜಿಲ್ಲೆಗಳಲ್ಲಿ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗೆ ನಿರೀಕ್ಷೆಗೂ ಅಧಿಕ ಬೇಡಿಕೆ ಬಂದಿತ್ತು. ಅಲ್ಲದೇ, ದಾಖಲಾತಿಗಾಗಿ ಪಾಲಕರು ಸರದಿ ಸಾಲಿನಲ್ಲಿ ನಿಂತಿದ್ದರು.

ಆದರೆ, ಈಗ ಇಲಾಖೆ ಹೊರಡಿಸಿರುವ ಆದೇಶ ಪಾಲಕ, ಪೋಷಕರ ಆಕ್ರೋಶಕ್ಕೆ ಗುರಿಯಾಗಿದ್ದು. ಕೆಲವೊಂದು ಶಾಲೆಗಳಲ್ಲಿ ಈಗಾಗಲೇ 30ಕ್ಕಿಂತ ಅಧಿಕ ವಿದ್ಯಾರ್ಥಿಗಳನ್ನು ದಾಖಲಾತಿ ಕೂಡ ಮಾಡಿಕೊಳ್ಳಲಾಗಿದೆ. ಅಂತಹ ಶಾಲೆಯ ಮುಖ್ಯಶಿಕ್ಷಕರು ಪೇಚಿಗೆ ಸಿಲುಕಿದ್ದಾರೆ. ಏಕೆಂದರೆ ಪ್ರಸಕ್ತ ಸಾಲಿನಿಂದ ಸರ್ಕಾರಿ ಶಾಲೆಯ ಒಂದನೇ ತರಗತಿಯಲ್ಲಿ ಆರಂಭವಾಗುತ್ತಿರುವ ಆಂಗ್ಲ ಮಾಧ್ಯಮ ತರಗತಿಗೆ ಕೇವಲ 30 ಮಕ್ಕಳ ದಾಖಲಾತಿ ಮಾಡಿಕೊಳ್ಳಬೇಕೆಂದು ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಏನಿದು ಸರ್ಕಾರದ ಸುತ್ತೋಲೆ?

30 ಮಕ್ಕಳನ್ನು ಮಾತ್ರ ದಾಖಲಾತಿ ಮಾಡಿಕೊಳ್ಳಬೇಕು. ಎನ್ನುವ ಸರ್ಕಾರದ ಈ ನಡೆಗೆ ರಾಜ್ಯದಲ್ಲೆಡೆ ಅಕ್ರೋಶ ವ್ಯಕ್ತವಾಗಿದ್ದು. ಸರ್ಕಾರಿ ಅಂಗ್ಲ ಮಾಧ್ಯಮಕ್ಕೆ ಶಾಲೆಗೆ ಓರ್ವ ಶಿಕ್ಷಕರನ್ನು ಮಾತ್ರ ನೇಮಕ ಮಾಡುತ್ತಿದ್ದು, ವಿದ್ಯಾರ್ಥಿ, ಶಿಕ್ಷಕರ ಅನುಪಾತವು 30:1ರಲ್ಲೇ ಇರಬೇಕು. ಅದಕ್ಕಿಂತ ಜಾಸ್ತಿ ದಾಖಲಾತಿ ಮಾಡಿಕೊಳ್ಳುವಂತಿಲ್ಲ. ಕನ್ನಡ ಮಾಧ್ಯಮದಲ್ಲೂ ನಲಿಕಲಿ ಇಂಗ್ಲಿಷ್‌ ಬೋಧನೆ ಇರುವುದರಿಂದ ಅಲ್ಲಿಗೆ ಮಕ್ಕಳನ್ನು ಕಳುಹಿಸಲು ಪಾಲಕ, ಪೋಷಕರ ಮನವೊಲಿಸಬೇಕೆಂದು ಉಪನಿರ್ದೇಶಕರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ರಾಜ್ಯ ಯೋಜನಾ ನಿರ್ದೇಶನಾಲಯ ತಿಳಿಸಿದೆ.

ಪಾಲಕರ ಅಭಿಪ್ರಾಯ ಏನು?

ಸರ್ಕಾರ ಮಾಡಿರುವ ಕೆಲಸವನ್ನು ಮೆಚ್ಚಲೇಬೇಕು, ಆದರೆ, ಕೇವಲ 30 ಮಕ್ಕಳನ್ನು ಮಾತ್ರ ದಾಖಲಾತಿ ಮಾಡಿಕೊಳ್ಳಿ ಎಂದು ಷರತ್ತು ವಿಧಿಸುವುದು ಸರಿಯಲ್ಲ. ಸರ್ಕಾರದ ಯೋಜನೆಯಂತೆ ಓರ್ವ ಶಿಕ್ಷಕರನ್ನು ಮಾತ್ರ ನೀಡಲು ಸಾಧ್ಯವಾಗುವುದರಾದರೆ, ಇಷ್ಟೊಂದು ತುರ್ತಾಗಿ ಇಂತಹ ಮಹತ್ವದ ನಿರ್ಧಾರವನ್ನು ಏಕೆ ಕೈಗೊಳ್ಳಬೇಕಿತ್ತು ? ಸರ್ಕಾರಿ ಶಾಲೆಗಳಲ್ಲಿರುವ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಿ, ಅವರನ್ನು ಈ ಕಾರ್ಯಕ್ಕೆ ನಿಯೋಜನೆ ಮಾಡಬಹುದಿತ್ತಲ್ಲವೇ ಎಂದು ಪಾಲಕರು ಸರ್ಕಾರದ ಈ ನಡೆಯನ್ನು ವಿರೋಧಿಸಿವೆ.

Also read: ಇನ್ಮುಂದೆ ಮಕ್ಕಳನ್ನು ನರ್ಸರಿಗೆ ಸೇರಿಸಲು ಚಿಂತೆ ಬೇಡ; ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ ಶುರುವಾಗಳಿವೆ ನರ್ಸರಿ ಸ್ಕೂಲ್-ಗಳು..