ದೇಶದಾದ್ಯಂತ ಎನ್.ಆರ್.ಸಿ. ಜಾರಿಯಾಗುತ್ತೆ: ಅಮಿತ್ ಶಾ; ಕರ್ನಾಟಕದಲ್ಲೂ ಬಾಂಗ್ಲಾ ವಲಸಿಗರು ಇದ್ದಾರೆ ಅನ್ನೋ ಮಾತಿದೆ, ಇದು ಒಳ್ಳೆಯ ಬೆಳವಣಿಗೆ ಅಂತ ಹೇಳಬಹುದಾ?

0
266

ಭಾರತದ ಎಲ್ಲ ನಾಗರಿಕರು, ಧರ್ಮವನ್ನು ಲೆಕ್ಕಿಸದೆ ಎನ್ಆರ್‌ಸಿ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳುತ್ತಾರೆ ದೇಶಾದ್ಯಂತ ಎನ್ಆರ್​ಸಿ ಆಗುತ್ತದೆ ಅಮಿತ್ ಶಾ ಹೇಳಿಕೆ.!
ಕೇಂದ್ರ ಸರ್ಕಾರ ದೇಶದಲ್ಲಿ ಅತೀ ಮುಖ್ಯವಾದ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳುತ್ತಿರುವುದು ಎಲ್ಲರಿಂದಲೂ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಅದರಂತೆ ಅಸ್ಸಾಮ್ ರಾಜ್ಯದಲ್ಲಿ ಅನುಷ್ಢಾನಕ್ಕೆ ಬಂದಿರುವ ರಾಷ್ಟ್ರೀಯ ಪೌರತ್ವ ನೊಂದಣಿ (ಎನ್​ಆರ್​ಸಿ) ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲಾಗುವುದು ಎಂದು ಅಮಿತ್ ಶಾ ತಿಳಿಸಿದ್ದು, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಲ್ಲಿ ಧಾರ್ಮಿಕ ದೌರ್ಜನ್ಯಕ್ಕೊಳಗಾಗಿ ದೇಶ ಬಿಟ್ಟು ವಲಸೆ ಬಂದ ಹಿಂದೂ, ಬೌದ್ಧ, ಜೈನ, ಸಿಖ್ ಮತ್ತು ಪಾರ್ಸಿ ಜನಾಂಗೀಯರಿಗೆ ಭಾರತೀಯ ಪೌರತ್ವವನ್ನು ಕಲ್ಪಿಸಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ.

ಹೌದು ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶಾದ್ಯಂತ ವಿಸ್ತರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ರಾಜ್ಯಸಭೆಯಲ್ಲಿ ಬುಧವಾರ ಎನ್ಆರ್‌ಸಿ ಕುರಿತ ಚರ್ಚೆಯ ಸಂದರ್ಭದಲ್ಲಿ ಇದನ್ನು ಘೋಷಿಸಿದ್ದು, ಎನ್ಆರ್‌ಸಿಯನ್ನು ರಾಷ್ಟ್ರವ್ಯಾಪಿ ನಡೆಸಲಾಗುವುದು. ಯಾವುದೇ ಧರ್ಮವನ್ನು ಲೆಕ್ಕಿಸದೆ ಎಲ್ಲ ನಾಗರಿಕರು ಈ ಪ್ರಕ್ರಿಯೆಯ ಭಾಗವಾಗಲಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆಗಿಂತ ಇದು ಭಿನ್ನವಾಗಿದೆ. ಹೀಗಾಗಿ ರಾಷ್ಟ್ರಾದ್ಯಂತ ಎನ್ಆರ್‌ಸಿಯನ್ನು ವಿಸ್ತರಿಸಲಾಗುವುದು ದೇಶಾದ್ಯಂತ ಎನ್​ಆರ್​ಸಿ ಯೋಜನೆ ಜಾರಿಗೊಳಿಸಲಾಗುವುದು. ಯಾವುದೇ ಧರ್ಮದವರೂ ಕಳವಳಪಡುವ ಅಗತ್ಯವಿಲ್ಲ. ಪ್ರತಿಯೊಬ್ಬರನ್ನೂ ಎನ್​ಆರ್​ಸಿ ವ್ಯಾಪ್ತಿಗೆ ತರುವುದೇ ಇದರ ಉದ್ದೇಶ” ಎಂದು ಅಮಿತ್ ಶಾ ಹೇಳಿದರು.

ಎನ್ಆರ್‌ಸಿಗೆ ಯಾವುದೇ ನಿಬಂಧನೆಗಳಿಲ್ಲ, ಎನ್ಆರ್‌ಸಿ ಅಡಿಯಲ್ಲಿ ಯಾವುದೇ ಧರ್ಮಗಳು ಬರುವುದಿಲ್ಲ. ಭಾರತದ ಎಲ್ಲ ನಾಗರಿಕರು, ಧರ್ಮವನ್ನು ಲೆಕ್ಕಿಸದೆ ಎನ್ಆರ್‌ಸಿ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳುತ್ತಾರೆ. ಪೌರತ್ವ ತಿದ್ದುಪಡಿ ಮಸೂದೆಗಿಂತ ಇದು ಭಿನ್ನವಾಗಿದೆ ಎಂದು ಅಮಿತ್ ಶಾ ಸಂಸತ್‍ನಲ್ಲಿ ಸ್ಪಷ್ಟಪಡಿಸಿದರು. ಕರಡು ಪಟ್ಟಿಯಲ್ಲಿ ಯಾರ ಹೆಸರು ಕಾಣಿಸಿಕೊಂಡಿಲ್ಲವೋ ಅವರು ನ್ಯಾಯಮಂಡಳಿಗೆ ಹೋಗುವ ಹಕ್ಕನ್ನು ಹೊಂದಿದ್ದಾರೆ ಎಂದು ಇದೇ ವೇಳೆ ಶಾ ಮನವರಿಕೆ ಮಾಡಿದರು. ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿರುವವರನ್ನು ಗುರುತಿಸುವುದು ಎನ್​ಆರ್​ಸಿ ಯೋಜನೆಯಾಗಿದೆ.

ಹಾಗೆಯೆ, ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಮೂಲಕ ಅಕ್ರಮ ಮುಸ್ಲಿಮ್ ವಲಸಿಗರನ್ನು ಪ್ರತ್ಯೇಕಿಸುವುದು ಈ ಯೋಜನೆಯ ಆಶಯವಾಗಿದೆ. ಭಾರತೀಯ ಪೌರತ್ವ ಹೊಂದಿರುವವರನ್ನು ಎನ್​ಆರ್​ಸಿ ಪಟ್ಟಿಗೆ ಸೇರಿಸಲಾಗುತ್ತದೆ. ಈ ಪಟ್ಟಿಯಲ್ಲಿ ಇಲ್ಲದವರನ್ನು ಅಕ್ರಮ ನಿವಾಸಿಗಳೆಂದು ಪರಿಗಣಿಸಲಾಗುತ್ತದೆ. ಇಂಥವರಿಗೆಂದೇ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲೂ ಡಿಟೆನ್ಷನ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಅಸ್ಸಾಮ್ ರಾಜ್ಯದಲ್ಲಿ ಈಗಾಗಲೇ ಎನ್​ಆರ್​ಸಿ ಯೋಜನೆ ಜಾರಿಯಲ್ಲಿದೆ. ಇಲ್ಲಿ ಅಂತಿಮ ಎನ್​ಆರ್​ಸಿ ಪಟ್ಟಿ ಪ್ರಕಟವಾಗಿದೆ. ಆದರೆ, ಪಟ್ಟಿಯಲ್ಲಿ ಅಕ್ರಮ ವಲಸಿಗರ ಹೆಸರುಗಳಿವೆ, ಸ್ಥಳೀಯ ನಿವಾಸಿಗಳ ಹೆಸರು ಇಲ್ಲ ಎಂಬ ಟೀಕೆಗಳು ಕೇಳಿಬರುತ್ತಿವೆ. ಒಟ್ಟಾರೆಯಾಗಿ ಅಕ್ರಮವಾಗಿ ವಲಸೆ ಬಂದವರನ್ನು ಪ್ರಮುಖವಾಗಿ ಮಾರ್ಚ್ 25, 1971ರಂದು ಬಾಂಗ್ಲಾದೇಶದಿಂದ ಅಸ್ಸಾಂಗೆ ಪ್ರವೇಶಿಸಿ, ಇಲ್ಲಿಯೇ ನೆಲೆಸಿದ್ದಾರೆ. ಅಂತಹವರನ್ನು ಅವರ ದೇಶಕ್ಕೆ ಗಡಿಪಾರು ಮಾಡುವ ಉದ್ದೇಶ ಎನ್ಆರ್​ಸಿ ಆಗಿದೆ.