ಬೆಂಗಳೂರು ನಗರ ಜಿಲ್ಲೆಯಲ್ಲಿ 401 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
504

ಉದ್ಯೋಗ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಸುವರ್ಣಾವಕಾಶ. ಬೆಂಗಳೂರು ನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 401 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಮತ್ತು ಹುದ್ದೆಗಳಿಗೆ ಅರ್ಹರಿರುವ ಅಭ್ಯರ್ಥಿಗಳು ಏಪ್ರಿಲ್ 7.2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ದ್ವಿತೀಯ ಪಿಯುಸಿ ಹಾಗೂ ಪದವಿ ಆದವರಿಗೆ KPTCL ನಲ್ಲಿ ವಿವಿಧ 3646 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು

ಸಂಸ್ಥೆ (Organisation): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಉದ್ಯೋಗ ಸ್ಥಳ (Job Location): ಬೆಂಗಳೂರು ನಗರ (ಕರ್ನಾಟಕ)

ವಿದ್ಯಾರ್ಹತೆ (Educational Qualification): ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಅರ್ಹತೆ: ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗೆ ಇದ್ದರೆ. ಮತ್ತು 3 ಕಿಮೀ ಒಳಗೆ ವಾಸಿಸುತ್ತಿದ್ದರೆ. ಆದ್ಯತೆ ನೀಡಲಾಗುತ್ತೆ. ವಿಧವೆಯರು ಅರ್ಜಿ ಸಲ್ಲಿಸಿದಾಗ ಇತರೆ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೆ ನೇರವಾಗಿ ವಿಧವೆಯರನ್ನೇ ಆಯ್ಕೆ ಮಾಡಲಾಗುತ್ತದೆ. ಆದರೆ ಎಸ್ ಎಸ್ ಎಲ್ ಸಿ ಉತ್ತೀರ್ಣ, ಸ್ಥಳೀಯರು ಮತ್ತು ವಯೋಮಿತಿಯೊಳಗಿರಬೇಕಾಗಿರುವುದು ಕಡ್ಡಾಯ.

ಅಂಗವಿಕಲರಿಗೆ ಆದ್ಯತೆ; ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅಂಗವಿಕಲರು ಅರ್ಜಿ ಸಲ್ಲಿಸಿದಾಗ ಇತರೆ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೆ ನೇರವಾಗಿ ಅಂಗವಿಕಲರನ್ನೇ ಆಯ್ಕೆ ಮಾಡಲಾಗುತ್ತದೆ ಆದರೆ ಅಂಗವಿಕಲ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಉತ್ತೀರ್ಣ, ಸ್ಥಳೀಯರು ಮತ್ತು ವಯೋಮಿತಿಯೊಳಗೆ ಇರಬೇಕಾಗಿರುವುದು ಕಡ್ಡಾಯ.

ಹೆಚ್ಚಿನ ಮಾಹಿತಿಗಾಗಿ: https://anganwadirecruit.kar.nic.in/docs/5481704193.pdf

ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ https://anganwadirecruit.kar.nic.in/ ಕ್ಲಿಕ್ ಮಾಡಿ.