2019 ಮಾರ್ಚ್ 1 ರಿಂದ 18 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ; ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿದ ವೇಳಾಪಟ್ಟಿ ವಿವರ ಇಲ್ಲಿದೆ ನೋಡಿ..

0
678

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ 2019ರ ಮಾರ್ಚ್ 1 ರಿಂದ 18 ರ ವರೆಗೆ ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ.


Also read: ಪತ್ನಿಗೆ ಜೀವನಾಂಶ ನೀಡುವಾಗ ಮದುವೆ ಆಗಿದೆ ಎಂಬುದಕ್ಕೆ ಪಕ್ಕಾ ಸಾಕ್ಷ್ಯ ನೀಡುವ ಅಗತ್ಯವಿಲ್ಲ; ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು..

ಈ ಸಂಬಂಧ ಆಕ್ಷೇಪಗಳಿದ್ದಲ್ಲಿ ನವೆಂಬರ್ 28ರೊಳಗೆ ಜಂಟಿ ನಿರ್ದೇಶಕರು (ಪರೀಕ್ಷೆ), ಪದವಿಪೂರ್ವ ಶಿಕ್ಷಣ ಇಲಾಖೆ, ಸಂಪಿಗೆ ರಸ್ತೆ, 18ನೇ ಅಡ್ಡ ರಸ್ತೆ, ಮಲ್ಲೇಶ್ವರ, ಬೆಂಗಳೂರು-12 ಇಲ್ಲಿಗೆ ಸಲ್ಲಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಗದಿತ ದಿನಾಂಕದೊಳಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ನಿರ್ದೇಶಕರು ಹೇಳಿದ್ದಾರೆ.
2019 ರ ವೆಳಾಪಟ್ಟಿ ಹೀಗಿದೆ.


Also read: ನವೆಂಬರ್-ನಲ್ಲಿ ಬ್ಯಾಂಕ್-ಗಳು 11 ದಿನ ರಜೆಯಲ್ಲಿ ಇರುತ್ತವೆ, ಈ ರೀತಿಯಾಗಿ ನೀವು ಪ್ಲಾನ್ ಮಾಡಲಿಲ್ಲ ಅಂದ್ರೆ ಪಜೀತಿ ಅನುಭವಿಸುತ್ತೀರ!!

ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ.

  • March​ 1: ಇತಿಹಾಸ, ಭೌತಶಾಸ್ತ್ರ, ಬೇಸಿಕ್​ ಮ್ಯಾಥ್ಸ್​.
  • March​ 2: ಮಾಹಿತಿ ತಂತ್ರಜ್ಞಾನ, ರೀಟೆಲ್, ಆಟೋಮೊಬೈಲ್, ಹೆಲ್ತ್​ಕೇರ್, ಬ್ಯೂಟಿ ಮತ್ತು ವೆಲ್​ನೆಸ್​.
  • March​​ 5: ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್.
  • March​ 6: ತರ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ.
  • March​ 7: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ ಗಣಿತ.
  • March​​ 8: ಉರ್ದು, ಸಂಸ್ಕೃತ.
  • March​ 9: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
  • March​​ 11: ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಸಾಯನ ಶಾಸ್ತ್ರ.
  • March​​ 12; ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ.
  • March​ 13: ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ.
  • March​​ 14: ಅರ್ಥಶಾಸ್ತ್ರ, ಜೀವಶಾಸ್ತ್ರ.
  • March​​ 15; ಹಿಂದಿ.
  • March​ 16: ಕನ್ನಡ.
  • March​​ 18; ಇಂಗ್ಲಿಷ್.