ಬಿಎ, ಬಿ.ಎಡ್ ಮಾಡಿದ ಅಭ್ಯರ್ಥಿಗಳಿಗೆ HAL ನಲ್ಲಿ ಪಿಆರ್‌ಟಿ ಮತ್ತು ಟಿಜಿಟಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
714

ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಪಿಆರ್‌ಟಿ ಮತ್ತು ಟಿಜಿಟಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 10,2019 ರೊಳಗೆ ಅರ್ಜಿ ಸಲ್ಲಿಸಬೇಕು.


Also read: IDBI ಬ್ಯಾಂಕ್ ನೇಮಕಾತಿ 500 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಪಿಆರ್‌ಟಿ ಮತ್ತು ಟಿಜಿಟಿ ಹುದ್ದೆಗಳು
  • ಸಂಸ್ಥೆ (Organisation): ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್
  • ವಿದ್ಯಾರ್ಹತೆ (Educational Qualification): ಹುದ್ದೆಗಳಿಗೆ ಬಿಎ ಜೊತೆಗೆ ಬಿ.ಎಡ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
  • ಉದ್ಯೋಗ ಸ್ಥಳ (Job Location): ಬೆಂಗಳೂರು , ಕರ್ನಾಟಕ
  • ವಯೋಮಿತಿ: ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
    Also read: ಸಿಂಡಿಕೇಟ್ ಬ್ಯಾಂಕ್-ನಲ್ಲಿ ಖಾಲಿಯಿರುವ 129 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..
  • ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
  • ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ/ ಓಬಿಸಿ ಅಭ್ಯರ್ಥಿಗಳು 200/-ರೂ ಅರ್ಜಿಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
  • ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಹೆಚ್‌ಎಎಲ್‌ನ ಅಧಿಕೃತ ವೆಬ್‌ಸೈಟ್‌ ನಲ್ಲಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ. ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.
  • ಕಚೇರಿಯ ವಿಳಾಸ: ಹೆಚ್‌ಎಎಲ್‌ ನ್ಯೂ ಪಬ್ಲಿಕ್ ಸ್ಕೂಲ್, ಸೆಂಟ್ರಲ್ ಟೌನ್‌ಶಿಪ್, ಜವಾಹರ್ ನಗರ, ನಮ್‌ಜೋಶಿ ರೋಡ್, ಮಾರಥಹಳ್ಳಿ ಪೋಸ್ಟ್, ಬೆಂಗಳೂರು-560037