ಸುಮಲತಾ ಅವರಿಗೆ ವೋಟ್ ಹಾಕಲ್ಲ, ಮಂಡ್ಯದಲ್ಲಿ ಮುಸ್ಲಿಮರಿಂದ ಬಹಿರಂಗ ಹೇಳಿಕೆ; ಮೋದಿ ಆಶೀರ್ವಾದ ಸುಮಲತಾಗೆ ಮುಳುವಾಯಿತೆ??

0
524

ಮಂಡ್ಯ ರಾಜಕೀಯದಲ್ಲಿ ಮತ್ತೊಂದು ಅಲೆ ಎದಿದ್ದೆ, ಸುಮಲತಾಗೆ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲ ಸೂಚಿಸಿತ್ತು. ಅದರಿಂದಲ್ಲೇ ಬಿಜೆಪಿಯ ಅಭ್ಯರ್ಥಿಗಳು ಸ್ಪರ್ಧೆಗೆ ಇಳಿಯಲಿಲ್ಲ, ಇದು ಒಂದುಕಡೆ ಸುಮಲತಾಗೆ ಲಾಭವಾದರೆ ಇನ್ನೊಂದು ಕಡೆ ಕಾಂಗ್ರೆಸ್ -ನಲ್ಲಿ ಹೊಗೆಯಾಡಲು ಶುರುವಾಗಿ ಪಕ್ಷೇತರ ಅಭ್ಯರ್ಥಿಗೆ ಮತ ಎಂದು ಅಧಿಕೃತವಾಗಿ ಪ್ರಚಾರಕ್ಕೆ ಇಳಿದರು. ಈ ಎರಡು ಪಕ್ಷಗಳು ಒಟ್ಟಾಗಿ ಸುಮಲತಾ ಬೆಂಬಲಕ್ಕೆ ನಿಂತು ಇತಿಹಾಸ ಬರೆಯುವ ಲಕ್ಷಣಗಳು ಕಂಡು ಬಂದಿದವು. ಆದರೆ ಮೋದಿಯವರು ಸುಮಲತಾ ಅವರಿಗೆ ಆಶೀರ್ವಾದ ಮಾಡಿ. ಪರೋಕ್ಷೆವಾಗಿ ಬೆಂಬಲ ಸೂಚಿಸಿದ್ದಾರೆ ಇದರಿಂದ ಮುಸ್ಲಿಂ ವೋಟ್ ಸುಮಲತಾ ಅವರಿಗೆ ಇಲ್ಲ ಎನ್ನುವ ಬಹಿರಂಗ ಮಾತುಗಳು ಕೇಳಿಬರುತ್ತಿವೆ.

ಹೌದು ಪ್ರಧಾನಿ ನರೇಂದ್ರ ಮೋದಿ ಮೈಸೂರಿನ ಸಮಾವೇಶಲ್ಲಿ ಭಾಷಣ ಮಾಡುತ್ತ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ. ಹಾಗಾದರೆ ಇದು ಯಾವ ಸೂಚನೆ ನೀಡುತ್ತಿದೆ? ಬಿಜೆಪಿಯ ಈ ನಡೆ ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ವಿಶೇಷವಾಗಿ ಮಂಡ್ಯ ರಾಜಕಾರಣದ ಮೇಲೆ ಯಾವ ಪರಿಣಾಮ ಬೀರಲಿದೆ ಎಂಬ ಚರ್ಚೆ ಆರಂಭವಾಗಿದೆ. ಸುಮಲತಾ ಪಕ್ಷೇತರ ಆದ್ರೂ ನರೇಂದ್ರ ಮೋದಿಯವರೇ ಆಶೀರ್ವಾದ ಮಾಡಿದ್ದಾರೆ. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸುಮಲತಾ ಬಿಜೆಪಿ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ. ಎನ್ನುವ ಸುದ್ದಿಹರಿದಾಡುತ್ತಿದೆ.

ಮೋದಿ ಸುಮಲತಾ ಅವರಿಗೆ ಬೆಂಬಲ ನೀಡಿದ್ದಾರೆ ಎಂದು ಮುಸ್ಲಿಂ ಸಮುದಾಯದಲ್ಲಿ ಗೊಂದಲಗಳು ಶುರುವಾಗಿದ್ದು, ಬಹಿರಗವಾಗಿ ಮಾಧ್ಯಮದವರ ಜೊತೆಗೆ ಮಾತನಾಡಿ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಯಾವುದೇ ಕಾರಣಕ್ಕೂ ವೋಟ್ ಹಾಕಲ್ಲ ಎಂದು ಮಂಡ್ಯ ಮುಸ್ಲಿಮರು ಬಹಿರಂಗವಾಗಿ ಹೇಳಿಕೆ ನೀಡಿದ್ದು, ಸುಮಲತಾ ಅವರಿಗೆ ಆಶೀರ್ವಾದ ಮಾಡಿ. ಪ್ರಧಾನಿಯಾಗಿರುವ ನರೇಂದ್ರ ಮೋದಿಯವರೇ ಅಧಿಕೃತವಾಗಿ ಹೇಳಿದ್ದಾರೆ. ಅಲ್ಲಿಗೆ ಸುಮಲತಾ ಅವರು ಬಿಜೆಪಿ ಅಭ್ಯರ್ಥಿ ಎಂದು ಅವರೇ ಒಪ್ಪಿಕೊಂಡಂತೆ ಆಯಿತು. ಹೀಗಾಗಿ ಪಕ್ಷೇತರ ಅಭ್ಯರ್ಥಿಗೆ ನಾವು ವೋಟ್ ಹಾಕಲ್ಲ ಎಂದು ಹೇಳಿದ್ದಾರೆ.

Also read: ಮನೆಗೆ ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತಾಡ್ತಾರೆ; ಎಂದು ಯಶ್ ಗೆ ಟೀಕೆ ಮಾಡಿದ ನಿಖಿಲ್ ಗೆ ಯಶ್ ಹೇಳಿದ್ದೇನು ಗೊತ್ತಾ..

ಇದೆ ವೇಳೆಯಲ್ಲಿ ಮಾತನಾಡಿದ ಮುಸ್ಲಿಂ ಸಮುದಾಯದ ಮಾಹಿಳಾ ನಾಯಕಿ; ಮುಸ್ಲಿಂ ಸಮುದಾಯವನ್ನು ಬಿಜೆಪಿಯವರು ಟಾರ್ಗೆಟ್ ಮಾಡುತ್ತಾರೆ. ಜಾತಿ ರಾಜಕೀಯ ಮಾಡುತ್ತಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಮುಸ್ಲಿಂ ಜನಾಂಗ ಬಿಜೆಪಿಗೆ ವೋಟ್ ಹಾಕಲ್ಲ. ಇಲ್ಲಿ ನಾವು ವ್ಯಕ್ತಿ ನೋಡಲ್ಲ ನಾವು ಪಕ್ಷ ನೋಡುತ್ತೇವೆ. ನಮಗೆ ಮೊದಲು ಬೇಕಾಗಿರೋದು ದೇಶ, ನಂತರ ಪಕ್ಷ, ಆ ಬಳಿಕ ವ್ಯಕ್ತಿ ವಿನಃ ವ್ಯಕ್ತಿಯಿಂದ ಪಕ್ಷ ನೋಡಲ್ಲ. ಆದರೆ ಅಂಬರೀಶ್ ಅಭಿಮಾನಿಗಳಾಗಿರುವ ನಮಗೆ ಮೊದಲೇ ಗೊಂದಲ ಇತ್ತು. ಅಣ್ಣ ಚಿರಸ್ಮರಣೆ ಆಗಿದ್ದರೂ ಕೂಡ ಅವರು ನಮ್ಮ ಮನದಲ್ಲಿ ಉಳಿದುಕೊಂಡಿದ್ದಾರೆ.

ಹೀಗಾಗಿ ಅವರ ಮುಖಾಂತರ ನಾವು ಸುಮಲತಾ ಅವರಿಗೆ ಬೆಂಬಲ ಕೊಡಬೇಕು ಅಂದುಕೊಂಡಿದ್ದೆವು. ಆದ್ರೆ ಇದೀಗ ಮೋದಿ ಕೊಟ್ಟಿರುವ ಹೇಳಿಕೆ ಗಮನಿಸಿದ್ರೆ ಅವರು ಬಿಜೆಪಿ ಕ್ಯಾಂಡಿಡೇಟ್ ಎಂದು ಖಚಿತವಾಗಿದೆ. ಸುಮಲತಾ ಪಕ್ಷೇತರ ಆದ್ರೂ ನರೇಂದ್ರ ಮೋದಿಯವರೇ ಆಶೀರ್ವಾದ ಮಾಡಿದ್ದಾರೆ. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸುಮಲತಾ ಬಿಜೆಪಿ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ. ನಾವೇನು ದಡ್ಡರಲ್ಲ. ಯಾರು ಯಾವ ರೀತಿ ಹೇಳಿಕೆ ಕೊಟ್ಟಿದ್ದಾರೆ ಎಂದು ತಿಳಿದುಕೊಳ್ಳುವಷ್ಟು ನಮಗೆ ಸಾಮಥ್ರ್ಯ ಇದೆ. ಹಾಗಾಗಿ ನಾವು ಯಾವುದೇ ಕಾರಣಕ್ಕೂ ಸುಮಲತಾಗೆ ಬೆಂಬಲ ನೀಡಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

Also read: ಮಂಡ್ಯದಲ್ಲಿ ಸುಮಲತಾರವರು ಗೆದ್ದರೆ ಯಾರಿಗೆ ಬೆಂಬಲ ಸೂಚಿಸಬೇಕು ಕಾಂಗ್ರೆಸ್-ಗಾ ಅಥವಾ ಬಿಜೆಪಿಗಾ??

ಒಟ್ಟಾರೆಯಾಗಿ ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡರಿಗೆ ಸುಮಲತಾ ಅಂಬರೀಶ್ ಗೆಲ್ಲುವುದು ಮುಖ್ಯವಾಗಿತ್ತು. ಆದರೆ ಈಗ ಮೋದಿ ಮಾತನಾಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದರಿಂದ ಅಲ್ಪಸಂಖ್ಯಾತರ ಮತಗಳು ಸುಮಲತಾ ಅವರಿಂದ ದೂರ ಆಗ್ತವಾ? ಅಥವಾ ಜೆಡಿಎಸ್ ವಿರೋಧಿ ಮತಗಳು ಬಿಜೆಪಿ ಮದ್ಯಸ್ಥಿಕೆಯಿಂದ ಮತ್ತೆ ಜೆಡಿಎಸ್-ನ ತೆಕ್ಕೆಗೆ ಸೇರುತ್ತಾವ ಎನ್ನುವ ಗೊಂದಲ ಸೃಷ್ಟಿಯಾಗಿದೆ.