ಬಾಗಲಕೋಟ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಹಲವು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
643

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಬಾಗಲಕೋಟ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಹಲವು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಅರ್ಜಿ ಪಡೆದು ಜೂನ್ 24, 2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ದ್ವಿತೀಯ ದರ್ಜೆ ಸಹಾಯಕ

ಸಂಸ್ಥೆ (Organisation): ಬಾಗಲಕೋಟ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ.

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಸರ್ಕಾರದ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಎ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1/ ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): June 24, 2019

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಡಿಸಿಸಿ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://bgkdccbank.com/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸ, ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮೀತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಸೆಕ್ಟರ್ ನಂ:24, ನವನಗರ ಬಾಗಲಕೋಟೆ-587103 ಗೆ ಜೂನ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.