ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 300 ಸಾಮಾನ್ಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ.!

0
87

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಬ್ಯಾಂಕ್ ಆಫ್ ಮಹಾರಾಷ್ಟ್ರ ಭಾರತದೆಲ್ಲೆಡೆ 300 ಸಾಮಾನ್ಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ 130 ಯಂಗ್ ಪ್ರೊಫಷನಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸಾಮಾನ್ಯ ಅಧಿಕಾರಿ

ಸಂಸ್ಥೆ (Organisation): ಬ್ಯಾಂಕ್ ಆಫ್ ಮಹಾರಾಷ್ಟ್ರ

ವಿದ್ಯಾರ್ಹತೆ (Educational Qualification): ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಏಪ್ರಿಲ್ 1,2019ರ ಅನ್ವಯ ಸಾಮಾನ್ಯ ಅಧಿಕಾರಿ ಹುದ್ದೆಗಳಿಗೆ ಕನಿಷ್ಟ 20 ರಿಂದ ಗರಿಷ್ಟ 35 ಮತ್ತು 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ: ಸ್ಕೇಲ್-II ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 45,950/-ರೂ ಮತ್ತು ಸ್ಕೇಲ್-III ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,020/- ರಿಂದ 51,490/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಐಬಿಪಿಎಸ್ ನಡೆಸುವ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 1180/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 118/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬ್ಯಾಂಕ್ ಆಫ್ ಮಹಾರಾಷ್ಟ್ರದ ಅಧಿಕೃತ ವೆಬ್‌ಸೈಟ್‌ https://www.bankofmaharashtra.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.