ಬಿಗ್ ಬ್ರೆಕಿಂಗ್; ಕನ್ನಡಿಗರ ಹೋರಾಟಕ್ಕೆ ಕಡೆಗೂ ಫಲ, ಇನ್ಮುಂದೆ ಕನ್ನಡದಲ್ಲೂ ಬ್ಯಾಕಿಂಗ್ ಪರೀಕ್ಷೆ ಬರೆಯಲು ಅನುಮತಿ..

0
303

ಬಹುದಿನಗಳಿಂದ ನೆನೆಗುದಿಯಲ್ಲಿದ್ದ ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಸಲು ಅವಕಾಶ ನೀಡುವಂತೆ ಕೋರಿ ಕನ್ನಡ ಸಂಘ-ಸಂಸ್ಥೆಗಳು ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಫಲ ಲಭಿಸಿದೆ. ಇದುವರೆಗೆ ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ಮಾತ್ರ ನಡೆಯುತ್ತಿದ್ದ ಗ್ರಾಮೀಣ ಬ್ಯಾಂಕ್ ಅರ್ಹತಾ ಪರೀಕ್ಷೆಗಳು ಇನ್ನು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಡೆಯುತ್ತದೆ ಎಂದು ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿಂದು ಅಧಿಕೃತವಾಗಿ ಘೋಷಿಸಿದ್ದಾರೆ.

Also read: ಮತ್ತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಶ್ನೆ ಪತ್ರಿಕೆಯ ಸ್ವರೂಪವನ್ನು ಬದಲಿಸಿದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ; ಹೇಗಿದೆ ನೋಡಿ ಹೊಸ ಪ್ರಶ್ನೆಪತ್ರಿಕೆ ಸ್ವರೂಪ..

ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ?

ಹೌದು ಬ್ಯಾಂಕಿಂಗ್ ನೇಮಕಾತಿಗೆ ನಡೆಯುವ ಅರ್ಹತಾ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಯಬೇಕೆಂಬ ಕನ್ನಡಿಗರ ಬಹುದಿನದ ಬೇಡಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅಸ್ತು ಎಂದಿದ್ದಾರೆ. ಆ ಮೂಲಕ ಕರುನಾಡ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌(RRB)ಗಳ ನೇಮಕಾತಿಗೆ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಪರೀಕ್ಷೆ ನಡೆಸುತ್ತಿದೆ. ಇದುವರೆಗೆ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ನಡೆಯುತ್ತಿದ್ದ ಪರೀಕ್ಷೆ ಇನ್ನು ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿಯೂ ನಡೆಯಲಿದೆ ಎಂದು ನಿರ್ಮಲಾ ಸಂಸತ್ತಿನಲ್ಲಿ ಘೋಷಿಸಿದ್ದಾರೆ.

ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

Also read: ಕರ್ನಾಟಕ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕ ಮತ್ತು ಸಹಾಯಕ ಉಪನ್ಯಾಸಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಲೋಕಸಭಾ ಅಧಿವೇಶನದಲ್ಲಿ ಗುರುವಾರ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ದೇಶದಲ್ಲಿ 45 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳಿದ್ದು, 90 ಸಾವಿರ ಜನರು ಉದ್ಯೋಗಿಗಳಿದ್ದಾರೆ. ಇವುಗಳಿಗೆ ಆರ್‌ಆರ್‌ಬಿ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಐಬಿಪಿಎಸ್ ಮೂಲಕ ನೇಮಕಾತಿ ನಡೆಯುತ್ತಿದೆ. ಹೀಗಾಗಿ ಸ್ಥಳೀಯ ವಿದ್ಯಾರ್ಥಿಗಳಿಗೆ ಬ್ಯಾಂಕ್‍ನಲ್ಲಿ ಉದ್ಯೋಗ ಪಡೆಯುವ ಅವಕಾಶ ನೀಡುವ ನಿಟ್ಟಿನಲ್ಲಿ 13 ಸ್ಥಳಿಯ ಭಾಷೆಯಲ್ಲೂ ಪರೀಕ್ಷೆ ಬರೆಯಬಹುದು ಎಂದು ತಿಳಿಸಿದರು. ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಸ್ಥಳೀಯ ಭಾಷೆಯಲ್ಲಿ ಹೆಚ್ಚು ಜ್ಞಾನ ಪಡೆದುಕೊಂಡಿರುತ್ತಾರೆ. ಹೀಗಾಗಿ ಪ್ರಾದೇಶಿಕ ಭಾಷೆಯಲ್ಲಿಯೇ ಆರ್‌ಆರ್‌ಬಿ, ಐಬಿಪಿಎಸ್ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಒತ್ತಾಯ ಕೇಳಿ ಬರುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಸ್ಥಳೀಯರಿಗೆ ಹೆಚ್ಚಲಿವೆ ಉದ್ಯೋಗ

ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಪ್ರಾದೇಶಿಕ ಭಾಷೆಗಳಲ್ಲೂ ಪರೀಕ್ಷೆ ನಡೆಸಬೇಕೆಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಮೈಸೂರು ಸಂಸದ ಪ್ರತಾಪ್ ಸಿಂಹ ಸೇರಿ ರಾಜ್ಯದ ಇತರೆ ಸಂಸದರು ನಿರ್ಮಲಾ ಅವರನ್ನು ಆಗ್ರಹಿಸಿ, ಮನವಿ ಪತ್ರ ಸಲ್ಲಿಸಿದ್ದರು. ಈ ಬೆನ್ನಲ್ಲೇ RRBಯ ಸ್ಕೇಲ್-1 ಮತ್ತು ಕಚೇರಿ ಸಹಾಯಕ ಹುದ್ದೆಗಳಿಗೆ ಪ್ರಾದೇಶಿಕ ಭಾಷೆಗಳಲ್ಲೂ ಇನ್ನು ಪರೀಕ್ಷೆ ನಡೆಯುತ್ತದೆ. ಇದುವರೆಗೆ ಹಿಂದಿ ಹಾಗೂ ಇಂಗ್ಲಿಷ್ ಗೊತ್ತಿರದ ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಪರದಾಡುತ್ತಿದ್ದರು. ಪ್ರಾದೇಶಿಕ ಭಾಷೆಯಲ್ಲಿಯೇ ಪರೀಕ್ಷೆ ಇದ್ದರೆ ಹಲವರು ಬ್ಯಾಂಕಿಂಗ್ ಉದ್ಯೋಗ ಪಡೆಯಲು ಅರ್ಹರಾಗುತ್ತಾರೆ, ಎನ್ನುವುದು ಮನವಿಯಲ್ಲಿತ್ತು.

ಎಷ್ಟು ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ?

Also read: ಟೋಲ್-ಗಳಲ್ಲಿ ಉದ್ದದ ಕ್ಯೂ ಇರುವಾಗ ಕ್ಯಾಶ್ ಮೂಲಕ ಹಣ ಪಾವತಿಸಲು ಮುಂದಾದರೆ ಬೀಳುತ್ತೆ ಭಾರಿ ದಂಡ!! ಇನ್ಹೇಗೆ ಪಾವತಿಸಬೇಕು ಅಂತ ಇಲ್ಲಿ ಓದಿ!!

ಆರ್‌ಆರ್‌ಬಿಯ ನೇರ ನೇಮಕಾತಿ ಸ್ಕೇಲ್ 1 ಹಾಗೂ ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ ವಿದ್ಯಾರ್ಥಿಗಳು ತಮ್ಮ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು. ಜೊತೆಗೆ ಐಬಿಪಿಎಸ್ ಪರೀಕ್ಷೆಗಳ್ನು ಇಂಗ್ಲೀಷ್ ಹಾಗೂ ಹಿಂದಿ ಹೊರತಾಗಿಯೂ ಕನ್ನಡ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕೊಂಕಣಿ, ಮಲೆಯಾಳಂ, ಮಣಿಪುರಿ, ಮರಾಠಿ, ಒರಿಯಾ, ಪಂಜಾಬಿ, ತಮಿಳು, ತೆಲುಗು ಹಾಗೂ ಉರ್ದು ಭಾಷೆಯಲ್ಲಿ ಬರೆಯಬಹುದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.