ಏರ್ಟೆಲ್ ಸಂಸ್ಥೆಗೆ ಆಧಾರ್ ಇಲಾಖೆ ನಿರ್ಬಂಧ ಹೇರಿದ್ದು ಯಾಕೆ? ಗ್ರಾಹಕರಿಗೆ ಅರಿವಿಲ್ಲದೇ ಅವರ ಹಣವನ್ನು ವರ್ಗಾವಣೆ ಮಾಡಿತ್ತಾ ಏರ್ಟೆಲ್??

0
391

ಮೊಬೈಲ್‌ ಗ್ರಾಹಕರ ಗಮನಕ್ಕೆ ತರದೇ ಖಾತೆ ತೆರೆದು ಅವರ ಅಡುಗೆ ಅನಿಲ (ಎಲ್‌ಪಿಜಿ) ಸಬ್ಸಿಡಿ ಹಣವನ್ನು ಏರ್ಟೆಲ್ ಪೇಮೆಂಟ್ಸ್‌ ಬ್ಯಾಂಕ್‌ ವರ್ಗಾಯಿಸಿಕೊಂಡಿದೆ.

37.21 ಲಕ್ಷ ಗ್ರಾಹಕರ ಒಪ್ಪಿಗೆ ಇಲ್ಲದೆಯೇ ಅವರ ಸುಮಾರು ಕೋಟ್ಯಾಂತರ ರೂಪಾಯಿ ಎಲ್ ಪಿಜಿ ಸಬ್ಸಿಡಿಯನ್ನು ಏರ್ಲೆಟ್ ಪೇಮೆಂಟ್ಸ್ ಬ್ಯಾಂಕ್ ಖ್ಯಾತೆಗೆ ವರ್ಗಾವಣೆ ಮಾಡಲಾಗಿದೆ. ನವೆಂಬರ್ ತಿಂಗಳ ಅಂತ್ಯದಲ್ಲಿ ಎಲ್ ಪಿಜಿ ಸಬ್ಸಿಡಿ ಹಣವನ್ನು ಏರ್ಟೆಲ್ ಪೇಮೆಂಟ್ಸ್ ಬ್ಯಾಂಕ್ ಗೆ ವರ್ಗಾವಣೆ ಮಾಡಲಾಗಿದೆ. ಒಟ್ಟು 37.21 ಲಕ್ಷ ಗ್ರಾಹಕರ ಖಾತೆಗೆ ಆ ಹಣ ಜಮೆ ಆಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ ಶನಿವಾರವಷ್ಟೇ ಭಾರತಿ ಏರ್ಟೆಲ್ ಮತ್ತು ಪೇಮೆಂಟ್ಸ್ ಬ್ಯಾಂಕ್ ನ ಆಧಾರ್ ಆಧಾರಿತ ಸಿಮಿ ಪರಿಶೀಲನೆಗೆ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ತಾತ್ಕಾಲಿಕ ತಡೆ ನೀಡಿತ್ತು. ಇದರ ಬೆನ್ನಲ್ಲೇ ಈ ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಆಧಾರ್ ಹೇಗೆ ದುರ್ಬುಳಕೆ ಮಾಡಿಕೊಳ್ಳಬಹುದು ಎಂಬುದುಕ್ಕೆ ಸಾಕ್ಷಿಯಾಗಿದೆ.

ತನ್ನ ಗ್ರಾಹಕರಿಗೆ ಮಾಹಿತಿ ನೀಡದೆ ಭಾರತಿ ಏರ್ಟೆಲ್ ಪೇಮೆಂಟ್ಸ್ ಬ್ಯಾಂಕ್ ಖಾತೆಗಳನ್ನು ಆರಂಭಿಸುತ್ತಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಯುಐಡಿಎಐ ಈ ಕ್ರಮ ತೆಗೆದುಕೊಂಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಇಕೆವೈಸಿ ಹಾಗೂ ಪೇಮೆಂಟ್ಸ್ ಬ್ಯಾಂಕ್ ಗ್ರಾಹಕರ ಕೆವೈಸಿ ಪ್ರಕ್ರಿಯೆಯನ್ನು ಸ್ಥಗತಿಗೊಳಿಸುವಂತೆ ಸೂಚಿಸಿದೆ.

ಆಧಾರ್‌ ಕಾಯ್ದೆ ಉಲ್ಲಂಘನೆ ಆರೋಪದ ಕುರಿತು ಭಾರ್ತಿ ಏರ್‌ಟೆಲ್‌ ವಿರುದ್ಧ ಪ್ರಾಧಿಕಾರ ಕಳೆದ ತಿಂಗಳು ತನಿಖೆಗೆ ಆದೇಶಿಸಿತ್ತು. ಮೊಬೈಲ್‌ ಗ್ರಾಹಕರ ಇ-ಕೆವೈಸಿ ಪ್ರಕ್ರಿಯೆಯನ್ನೇ ಬಳಸಿ ಗ್ರಾಹಕರಿಗೆ ಅರಿವಿಲ್ಲದಂತೆ ಅವರ ಹೆಸರಿಗೆ ಪೇಮೆಂಟ್‌ ಬ್ಯಾಂಕ್‌ ಖಾತೆಗಳನ್ನು ತೆರೆಯುತ್ತಿರುವ ಬಗ್ಗೆ ದೂರು ನೀಡಲಾಗಿತ್ತು. ತಕ್ಷಣದಿಂದಲೇ ಈ ಅಕ್ರಮ ನಿಲ್ಲಿಸದಿದ್ದರೆ ಭಾರೀ ಪ್ರಮಾಣದ ದಂಡ ತೆರಬೇಕಾದೀತು ಎಂದು ಯುಐಡಿಎಐ ಭಾರ್ತಿ ಏರ್‌ಟೆಲ್‌ಗೆ ಎಚ್ಚರಿಕೆ ನೀಡಿತ್ತು.