ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, 4 ದಿನ ಬ್ಯಾಂಕಿಂಗ್ ಸೇವೆ ಇಲ್ಲ, ಮುನ್ನೆಚ್ಚರವಾಗಿ ಹಣ ತೆಗೆದಿಟ್ಟುಕೊಳ್ಳಿ.!

0
694

ರಾಷ್ಟ್ರೀಕೃತ ಬ್ಯಾಂಕ್‍ ನೌಕರರು ಮುಸ್ಕರ ಮಾಡುತ್ತಿದ್ದು 4 ನಾಲ್ಕು ದಿನ ಬ್ಯಾಂಕ್ ವ್ಯವಹಾರಗಳು ಇರುವುದಿಲ್ಲ. ಎರಡು ದಿನ ನೌಕರರಿಂದ ಮುಷ್ಕರವಾದರೆ ಇನ್ನೆರೆಡು ದಿನ ನಾಲ್ಕನೆ ಶನಿವಾರ ಮತ್ತು ಭಾನುವಾರ ವಿರುವುದರಿಂದ ಬ್ಯಾಂಕಿಂಗ್ ವ್ಯವಹಾರ ಇರುವುದಿಲ್ಲ. ಇದರಿಂದ Atm -ಗಳಲ್ಲಿ ಕೂಡ ಹಣವಿರುವುದಿಲ್ಲ ಆದ ಕಾರಣ ಗ್ರಾಹಕರು ನಾಲ್ಕು ದಿನ ಮುಂಗಡವಾಗಿ ಬ್ಯಾಂಕಿಂಗ್ ವ್ಯವಹಾರಗಳನ್ನು ಮಾಡಿಕೊಳ್ಳುವುದು ಒಳ್ಳೆಯದು.

Also read: ಕನ್ನಡಿಗರ ಆಕ್ರೋಶಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ; ಕನ್ನಡದಲ್ಲೇ ಬ್ಯಾಂಕಿಂಗ್ ಪರೀಕ್ಷೆಗೆ ಅವಕಾಶ ಕಲ್ಪಿಸಬೇಕೆಂದು ನಿರ್ಮಲಾಸೀತಾರಾಮನ್ ಸೂಚನೆ.!

ನಾಲ್ಕು ದಿನ ಬ್ಯಾಂಕ್ ಬಂದ್?

ಹೌದು 10 ರಾಷ್ಟ್ರೀಕೃತ ಬ್ಯಾಂಕ್‍ಗಳ ಮಹಾ ವಿಲೀನವನ್ನು ಖಂಡಿಸಿ ನಾಲ್ಕು ಬ್ಯಾಂಕ್ ನೌಕರರ ಸಂಘಗಳು ಸೆಪ್ಟೆಂಬರ್ 25ರ ಮಧ್ಯರಾತ್ರಿಯಿಂದ ಎರಡು ದಿನಗಳ ಕಾಲ ಮುಷ್ಕರ ಹಮ್ಮಿಕೊಂಡಿವೆ. ಈ ಕುರಿತು ಸಂಘಟನೆಯ ಮುಖ್ಯಸ್ಥರು ಸ್ಪಷ್ಟಪಡಿಸಿದ್ದು, ಸೆಪ್ಟೆಂಬರ್ 25ರ ಮಧ್ಯರಾತ್ರಿಯಿಂದ ಎರಡು ದಿನಗಳ ಕಾಲ ಮುಷ್ಕರ ನಡೆಸಲಾಗುವುದು. ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದಲ್ಲಿ. ನವೆಂಬರ್ ಎರಡನೇ ವಾರದಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಹೀಗಾಗಿ ಬ್ಯಾಂಕಿಂಗ್ ಸೇವೆಯಲ್ಲಿ ತೀವ್ರತರ ವ್ಯತ್ಯಯವಾಗಲಿದೆ. ಇದರಲ್ಲಿ SBI, ಕೆನರಾ, ಕರ್ನಾಟಕ ಬ್ಯಾಂಕ್ ಸೇರಿದಂತೆ ಎಲ್ಲಾ ಬ್ಯಾಂಕ್‌ಗಳೂ ಈ ಮುಷ್ಕರಕ್ಕೆ ಕೈ ಜೋಡಿಸಲಿವೆ. ಬೆಂಗಳೂರಿನಲ್ಲಿ SBI ಬ್ಯಾಂಕ್ ಎದುರು ಬೃಹತ್ ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಕಾಲ ಕಾಲಕ್ಕೆ ವೇತನ ಪರಿಷ್ಕರಣೆ, ವಾರದಲ್ಲಿ 5 ದಿನ ಮಾತ್ರ ಕೆಲಸದ ವ್ಯವಸ್ಥೆ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರ ನಡೆಸಲಾಗುತ್ತಿದೆ. ಮುಷ್ಕರಕ್ಕೆ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಓಎ), ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್ (ಐಎನ್‍ಬಿಓಸಿ) ಮತ್ತು ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಸಂಸ್ಥೆ (ಎನ್‍ಓಬಿಓ) ಬೆಂಬಲ ಸೂಚಿಸಿವೆ.

Also read: ವಾಹನ ಸವಾರರ ವಿರೋಧಕ್ಕೆ ಮಣಿದ ಸರ್ಕಾರ; ತಕ್ಷಣದಿಂದಲೇ ಹಳೆಯ ದಂಡ ವಿಧಿಸಲು ಆದೇಶ..!

ಏನಿದು ಬ್ಯಾಂಕ್ ವಿಲೀನ?

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಗಸ್ಟ್ 30ರಂದು 10 ಸಾರ್ವಜನಿಕ ವಲಯದ ಬ್ಯಾಂಕ್‍ಗಳನ್ನು ನಾಲ್ಕು ಬ್ಯಾಂಕ್‍ಗಳಿಗೆ ವಿಲೀನಗೊಳಿಸಿರುವ ಕುರಿತು ಘೋಷಣೆ ಮಾಡಿದ್ದರು. ಐದು ವರ್ಷಗಳ ಆರ್ಥಿಕತೆಯ ಕುಂಠಿತವನ್ನು ಸರಿ ದಾರಿಗೆ ತಂದು, ಬೆಳೆವಣಿಗೆಯತ್ತ ಕೊಂಡೊಯ್ಯಬೇಕು. ಹೀಗಾಗಿ ಸಣ್ಣ ಬ್ಯಾಂಕ್‍ಗಳನ್ನು ವಿಲೀನಗೊಳಿಸಿ ಬೃಹತ್ ಬ್ಯಾಂಕ್‍ಗಳನ್ನಾಗಿ ಮಾಡಿ, ವಿಶ್ವ ದರ್ಜೆಗೆ ಕೊಂಡೊಯ್ಯಬೇಕು ಎನ್ನುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದರು.

Also read: ದೊಡ್ಡ ನಗರಗಳಲ್ಲಿ ಪ್ಲಾಟ್ ಖರೀದಿಸುವ ಮುನ್ನ ಈ ಕತೆ ಓದಿ; ಹಣ ನೀಡಿ ಹತ್ತು ವರ್ಷ ಹೋರಾಡಿ ಪ್ಲಾಟ್ ಪಡೆದ ಜನರ ಪರಿಸ್ಥಿತಿ ಹೇಗಿದೆ ನೋಡಿ.!

ಇದರ ಭಾಗವಾಗಿ ರಾಜ್ಯದ ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್‍ಗಳನ್ನು ಸಹ ವಿಲೀನ ಮಾಡಲಾಗುತ್ತಿದೆ. ಈ ಕುರಿತು ಆಗಸ್ಟ್ 30ರಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ನಿರ್ಮಲಾ ಸೀತಾರಾಮನ್ ಅವರು, 2017ರಲ್ಲಿ 17 ಸಾರ್ವಜನಿಕ ವಲಯದ ಬ್ಯಾಂಕ್‍ಗಳಿದ್ದವು. ಇದನ್ನು 13ಕ್ಕೆ ಇಳಿಸುವ ನಿಟ್ಟಿನಲ್ಲಿ ಈ ವಿಲೀನ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದರು. “ಈ ಹಿಂದೆ ಬ್ಯಾಂಕ್ ಆಫ್ ಬರೋಡಾ, ವಿಜಯ ಬ್ಯಾಂಕ್ ಹಾಗೂ ದೇನಾ ಬ್ಯಾಂಕ್ ವಿಲೀನವಾಗಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ವಿಲೀನದ ಬಳಿಕ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದು ಹಾಕಿಲ್ಲ, ಹೀಗಾಗಿ, ಈಗ 10 ಬ್ಯಾಂಕ್ ವಿಲೀನದ ಬಳಿಕ ಹೊರ ಹೊಮ್ಮುವ 4 ಬ್ಯಾಂಕ್ ಗಳ ಉದ್ಯೋಗಿಗಳು ಸೇರಿದಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಕಡಿತದ ಭೀತಿ ಬೇಡ” ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು ಹಲವು ನಿಯಮಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ.