ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯ ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಗ್ರೂಪ್ “ಡಿ” ವೃಂದದ 4000 ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 9,2019 ರ ಒಳಗೆ ಅರ್ಜಿ ಸಲ್ಲಿಸಬೇಕು.
Also read: ಇಎಸ್ಐಸಿ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..
ಹುದ್ದೆಗೆ ಸಂಬಂಧಪಟ್ಟ ಮಾಹಿತಿ:
ಹುದ್ದೆಯ ಹೆಸರು (Name Of The Posts): ಪೌರಕಾರ್ಮಿಕ
ಸಂಸ್ಥೆ (Organisation): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)
ವಿದ್ಯಾರ್ಹತೆ (Educational Qualification): ಶೈಕ್ಷಣಿಕ ವಿದ್ಯಾರ್ಹತೆಯ ಅಗತ್ಯವಿಲ್ಲ
ಉದ್ಯೋಗ ಸ್ಥಳ (Job Location): ಬೆಂಗಳೂರು (ಕರ್ನಾಟಕ)
ವೇತನ ವಿವರ (Salary Scale): ತಿಂಗಳಿಗೆ 17,000/-ರಿಂದ 28,950/-ರೂ
ಅರ್ಜಿ ಸಲ್ಲಿಸಲು ಪ್ರಾರಂಭ (Application Start Date): September 9, 2019
ವಯೋಮಿತಿ: ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿದ್ದು, ಶುಲ್ಕದ ವಿವರ ಇಲ್ಲಿದೆ.ಪ.ಜಾತಿ ಪ.ಪಂಗಡ, ಪ್ರವರ್ಗ-1ಅಭ್ಯರ್ಥಿಗಳು 100/-ರೂ,
ಇತರೆ ಅಭ್ಯರ್ಥಿಗಳು 200/-ರೂ, ವಿಕಲ ಚೇತನರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ http://bbmp.gov.in/en/web/guest/home ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿವ ಮೂಲಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ ಅಕ್ಟೋಬರ್ 9,2019ರೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ: https://kannada.careerindia.com/downloads/2019/8/Notification-BBMP-Pourakarmika-Posts.pdf ಕ್ಲಿಕ್ ಮಾಡಿ.