ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
195

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 55 ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಜನವರಿ 21,2020ರೊಳಗೆ
ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೊಪ್ಪಳ ಜಿಲ್ಲೆಯಲ್ಲಿ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ

ಸಂಸ್ಥೆ (Organisation):ಜಿಲ್ಲಾ ನ್ಯಾಯಾಲಯ

ವಿದ್ಯಾರ್ಹತೆ (Educational Qualification): ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಸ್ಥಳ (Job Location): ಬೆಳಗಾವಿ (ಕರ್ನಾಟಕ)

ವೇತನ (Salary Scale): ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/- ರಿಂದ 42,000/-ರೂ, ಆದೇಶ ಜಾರಿಕಾರ- 19,950/- ರಿಂದ 37,900/-ರೂ

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 21,2020ರಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆಯ ವಿಧಾನ: ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬೆಳಗಾವಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/belagavi-onlinerecruitment ಗೆ ಭೇಟ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 21,2020ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522