ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ, ಅತ್ತಿಬೆಲೆ ಮತ್ತು ಚಂದಾಪುರ ನಗರಸಭೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
249

ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ, ಅತ್ತಿಬೆಲೆ ಮತ್ತು ಚಂದಾಪುರ ನಗರಸಭೆಯಲ್ಲಿ ಖಾಲಿ ಇರುವ 179 ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜನವರಿ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Also read: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: (Name Of The Posts): ಪೌರಕಾರ್ಮಿಕ

ಸಂಸ್ಥೆ (Organisation): ಬೆಂಗಳೂರು ನಗರ ಜಿಲ್ಲೆ

ವಿದ್ಯಾರ್ಹತೆ (Educational Qualification): ಶೈಕ್ಷಣಿಕ ವಿದ್ಯಾರ್ಹತೆಯ ಅಗತ್ಯವಿಲ್ಲ

ಉದ್ಯೋಗ ಸ್ಥಳ (Job Location): ಬೆಂಗಳೂರು (ಕರ್ನಾಟಕ)

ಅರ್ಹತೆ (Qualification): ಕನ್ನಡ ಮಾತನಾಡಲು ಗೊತ್ತಿರಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ (Application Start Date): ಜನವರಿ 6, 2019

ವಯೋಮಿತಿ: ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಅಧಿಸೂಚನೆಯ ಪ್ರತಿಯನ್ನು ಹಾಗೂ ನಿಗದಿತ ಅರ್ಜಿ ನಮೂನೆಯನ್ನು ಈ ಕಾರ್ಯಾಲಯದಿಂದ ಹಾಗೂ ಸಂಬಂಧಿಸಿದ ನಗರಸಭೆ/ಪುರಸಭೆಗಳಿಂದ ಪಡೆದು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 6,2020ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ತಪ್ಪದೇ ನಮೂದಿಸತಕ್ಕದ್ದು.

ಕಛೇರಿಯ ವಿಳಾಸ:
ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ,
ಅಧಿಕಾರಿಗಳ ಕಾರ್ಯಾಲಯ 4ನೇ ಮಹಡಿ,
ಬೆಂಗಳೂರು ನಗರ ಜಿಲ್ಲೆ.

ಹೆಚ್ಚಿನ ಮಾಹಿತಿಗಾಗಿ https://bengaluruurban.nic.in/en/ ಇಲ್ಲಿ ಕ್ಲಿಕ್ ಮಾಡಿ