ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ 400 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
511

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 400 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 31,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಕೇಂದ್ರ ಲೋಕ ಸೇವಾ ಆಯೋಗ 415 ಎನ್‌ಡಿಎ, ಎನ್‌ಎ-II ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಪ್ರೆಂಟಿಸ್

ಸಂಸ್ಥೆ (Organisation): ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂಜಿನಿಯರಿಂಗ್‌ನಲ್ಲಿ ಪದವಿ ಹಾಗೂ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಬೆಂಗಳೂರು (ಕರ್ನಾಟಕ)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): August 31, 2019

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಂತೆ ಎಲ್ಲಾ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಆಗಸ್ಟ್ 31,2019ರ ಸಂಜೆ 4 ಗಂಟೆಯೊಳಗೆ ನೇರವಾಗಿ ಅಥವಾ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿ: https://bescom.org/kn/ ಕ್ಲಿಕ್ ಮಾಡಿ.