ಸರ್ಕಾರದ ವಿರುದ್ಧ ಬಿಸಿಯೂಟ, ಅಂಗನವಾಡಿ, ಆಶಾ ಕಾರ್ಯಕರ್ತರ ಸರಣಿ ಪ್ರತಿಭಟನೆಗೆ ಕಾರಣವೇನು? ಅಕ್ಷರ ದಾಸೋಹ ನೌಕರರ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯ ಸರೀನಾ.?

0
200

ಇತ್ತೀಚಿಗೆ ರಾಜ್ಯದಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿವೆ. ಅದರಲ್ಲಿ ಮಹಿಳೆಯರಿಗೆ ಸರಿಯಾದ ವೇತನ ಸಿಗುತ್ತಿಲ್ಲ, ಎನ್ನುವ ವಿರೋದ್ಧ ಕೂಡ ಕೇಳಿ ಬರುತ್ತಿದ್ದು, ಒಂದು ವಾರದ ಹಿಂದೆ ವೇತನ ಹೆಚ್ಚಳ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದರು. ಮತ್ತೆ ನಿನ್ನೆ ಗೌರವಧನ ನಿಗದಿ, ಖಾಸಗೀಕರಣ ಕೈ ಬಿಡುವುದೂ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ನೌಕರರು ಬೆಂಗಳೂರು ನಗರ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು, ಇವೆಲ್ಲ ನೋಡಿದರೆ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳೆಯರ ಬಗ್ಗೆ ಗೌರವ ತೋರುತ್ತಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಹೋರಾತ್ರಿ ಧರಣಿ ಆರಂಭಿಸಿರುವ ಬಿಸಿಯೂಟ ಕಾರ್ಯಕರ್ತೆಯರು ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲೇ ಜಮಾಯಿಸಿ ಅಲ್ಲೇ ಸತ್ಯಾಗ್ರಹ ಆರಂಭಿಸಿದ್ದರು. ಯಾವುದೇ ಕಾರಣಕ್ಕೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪ್ರತಿಭಟನಕಾರರು ಪಟ್ಟು ಹಿಡಿದರೆ, ಅಲ್ಲಿಂದ ಫ್ರೀಡಂ ಪಾರ್ಕ್‌ಗೆ ತೆರಳಲು ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಹಠ ಹಿಡಿದು ನಿಲ್ದಾಣದ ಆವರಣದಲ್ಲೇ ಬ್ಯಾರಿಕೇಡ್‌ ಹಾಕಿ ತಡೆದು ನಿಲ್ಲಿಸಿದರು. ದಿಗ್ಬಂಧನದ ನಡುವೆ ಸರಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತೆಯರು ವೇತನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಹಿಳೆಯರು ನಮಗೆ ಕೇವಲ 2,600 ರೂ. ನೀಡಲಾಗುತ್ತಿದೆ. ಶಿಕ್ಷಕರಿಗೆ ಚಹಾ ಮಾಡಿಕೊಡುವುದೂ ಸೇರಿದಂತೆ ಇನ್ನಿತರ ಕೆಲಸಗಳನ್ನು ಮಾಡಬೇಕಾಗುತ್ತದೆ. ಶಾಲೆಗಳಿಗೆ ಭೇಟಿ ನೀಡುವ ಅಧಿಕಾರಿಗಳು ನಮಗೆ ಬೈಯ್ಯುತ್ತಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ಅಂಗಡಿಗಳು ಸಮೀಪದಲ್ಲಿ ಇರುವುದಿಲ್ಲ. ಕೆಲವೊಮ್ಮೆ ಅಕ್ಕಿ ಖಾಲಿಯಾದರೆ ದೂರದ ಊರಿಗೆ ಹೋಗಿ ಅಕ್ಕಿ ತರಬೇಕು. ಅದಕ್ಕೆ 60 ರೂ. ಖರ್ಚಾಗುತ್ತದೆ. ಅಂತಹ ಪರಿಸ್ಥಿತಿ ಇರುವಾಗ ನಮಗೆ ತಿಂಗಳಿಗೆ ಕೇವಲ 2,600 ರೂ. ಗೌರವಧನ ನೀಡುತ್ತಿರುವುದು ಯಾವ ನ್ಯಾಯ?’’ ಎಂದು ಹಲವು ಪ್ರತಿಭಟನಾಕಾರರು ಪ್ರಶ್ನಿಸಿದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬಿಸಿ ತಯಾರಕರ ಬೇಡಿಕೆಗಳೇನು?

* 21 ಸಾವಿರ ರೂ. ಗೌರವಧನ ನಿಗದಿ
* ‘ಡಿ’ ದರ್ಜೆ ನೌಕರರಾಗಿ ಪರಿಗಣನೆ
* ಬಿಸಿಯೂಟ ಖಾಸಗೀಕರಣ ಕೈ ಬಿಡಬೇಕು
* ನಿವೃತ್ತಿ ವೇತನ ಒದಗಿಸಬೇಕು
* ಉದ್ಯೋಗ ಖಾತ್ರಿ ಯೋಜನೆಯಡಿ ಶಾಲೆಯಲ್ಲಿ ಕೈತೋಟ ನಿರ್ವಹಣೆಗೆ ಕನಿಷ್ಠ ಕೂಲಿ ನೀಡಬೇಕು
* ಹಾಜರಾತಿ ಆಧಾರದ ಮೇಲೆ ಅಡುಗೆಯವರನ್ನು ಕೆಲಸದಿಂದ ತೆಗೆಯಬಾರದು
* ನೇರವಾಗಿ ಶಿಕ್ಷಣ ಇಲಾಖೆ ಮೇಲ್ವಿಚಾರಣೆ ಮಾಡಬೇಕು
* ಬಿಸಿಯೂಟವನ್ನು 12ನೇ ತರಗತಿವರೆಗೆ ವಿಸ್ತರಿಸಬೇಕು
* ಪ್ರತಿ ಶಾಲೆಯಲ್ಲಿಇಬ್ಬರು ಅಡುಗೆಯವರು ಇರಬೇಕು.
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳೇನು?
* ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಸೇವೆಯನ್ನು ಖಾಯಂಗೊಳಿಸಬೇಕು.
* ನಮಗೆ ವೇತನ ಹೆಚ್ಚಳ ಮಾಡಬೇಕು.
* ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಅಂಗನವಾಡಿಗಳ ಅಭಿವೃದ್ಧಿ ಹಾಗೂ ನಮ್ಮ ವೇತನಕ್ಕೆ ಹೆಚ್ಚು ಅನುದಾನ ನೀಡಬೇಕು.
* ಸರ್ಕಾರ ನಮ್ಮ ಪರ ನಿಲುವು ವ್ಯಕ್ತಪಡಿಸಬೇಕು.
* ಪಿಂಚಣಿ, ಕನಿಷ್ಠ ವೇತನದಂತಹ ಸೌಲಭ್ಯ ನೀಡಬೇಕು.
* ನಮ್ಮ ಆರೋಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸಲು ಯೋಜನೆ ಮಾಡಿ.
ಒಟ್ಟಾರೆಯಾಗಿ ಇಂತಹ ಹಲವು ಬೇಡಿಕೆಗಳನ್ನು ಅಂಗನವಾಡಿ ಕಾರ್ಯಕರ್ತೆಯರು ಮತ್ತು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರು ನಡೆಸುತ್ತಿರುವ ಪ್ರತಿಭಟನೆಗೆ ಸರ್ಕಾರ ಭರವಸೆ ನೀಡಿದಂತೆ ಅವರ ಬೇಡಿಕೆಗಳನ್ನು ಈಡೇರಿಸುತ್ತಾ ಎನ್ನುವುದ್ದನ್ನು ಕಾದು ನೋಡಬೇಕಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522