ಜನರು ಪಕ್ಷಾಂತರಿಗಳನ್ನು ಒಪ್ಪಿಕೊಂಡಿದ್ದಾರೆ. ನಾವು ಸೋಲನ್ನು ಒಪ್ಪಿಕೊಂಡಿದ್ದೇವೆ, ಆದರೆ, ನಿರಾಸರಾಗುವುದಿಲ್ಲ ಡಿ.ಕೆ ಶಿವಕುಮಾರ್.!

0
225

ರಾಜ್ಯದ ಉಪಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲವು ಸಾಧಿಸಿದ್ದು. ಸಹಜವಾಗಿ ಸೋಲೊಪ್ಪಿಕೊಂಡ ಡಿಕೆ ಶಿವಕುಮಾರ್​ ಉಪಚುನಾವಣೆಯಲ್ಲಿ ಜನತೆ ನೀಡಿರುವ ತೀರ್ಪನ್ನು ನಾವು ತಲೆಬಾಗಿ ಸ್ವೀಕರಿಸುತ್ತೇವೆ. ಸಾಮಾನ್ಯವಾಗಿ ಆಡಳಿತ ಪಕ್ಷದ ಅಭ್ಯರ್ಥಿಗಳು ಉಪಚುನಾವಣೆ ಯಲ್ಲಿ ಗೆಲ್ಲುವುದು ಸಹಜ. ಈಗಲೂ ಅದೇ ರೀತಿ ಆಗಿದೆ. ಅದು ಜನರ ಇಚ್ಛೆ. ಮತದಾರರ ತೀರ್ಮಾನವನ್ನು ನಾವು ಒಪ್ಪುತ್ತೇವೆ ಎಂದು ಕಾಂಗ್ರೆಸ್​ ನಾಯಕ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಹೌದು ಉಪ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಇನ್ನೂ ಮುಗಿಯದಿದ್ದರೂ ಅಧಿಕ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲುವುದು ನಿಶ್ಚಿತ ಎಂಬುದು ಸದ್ಯದ ಟ್ರೆಂಡ್​ನಿಂದ ತಿಳಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಮಾಜಿ ಸಚಿವ ಡಿಕೆ ಶಿವಕುಮಾರ್​ ಪಕ್ಷದ ಸೋಲನ್ನು ಒಪ್ಪಿಕೊಂಡಿದ್ದಾರೆ. ಉಪಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿರುವ ಕುರಿತು ಮಾತನಾಡಿದ ಅವರು, ಯಾರು ಯಾವ ಪಕ್ಷಕ್ಕೆ ಹೋದರು ಅಭ್ಯರ್ಥಿಗಳ ಪರ ಜನರು ಮತ ಚಲಾಯಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ನಿರ್ಣಯವೇ ಅಂತಿಮವಾಗಿದ್ದು, ಅವರ ತೀರ್ಮಾನವನ್ನು ಒಪ್ಪುತ್ತೇವೆ ಎಂದು ಹೇಳಿದ್ದಾರೆ.

ರಾಜಕೀಯ ಅನುಭವದ ಮೇಲೆ ಮಾತನಾಡಿದ ಡಿಕೆಶಿ “ಮತದಾರರು ನೀಡಿದ ತೀರ್ಪಿಗೆ ತಲೆ ಬಾಗಲೇಬೇಕು, 15 ಕ್ಷೇತ್ರಗಳಲ್ಲಿ ಯಾವ ರೀತಿ ಫಲಿತಾಂಶ ಬಂದರೂ ಸ್ವೀಕರಿಸಲು ಸಿದ್ಧವಾಗಿದ್ದೇವೆ. ಅನರ್ಹರಂದು ಜನರು ಒಪ್ಪಿಕೊಂಡು ಆಶೀರ್ವದಿಸಿದರೆ, ನಾವು ನಮ್ಮ ಸೋಲೊಪ್ಪಿಕೊಳ್ಳಬೇಕಾಗುತ್ತದೆ. ಇದರಿಂದ ಹಿನ್ನಡೆಯಾಗಿದೆ ಎನ್ನಲಾಗುವುದಿಲ್ಲ, ರಾಜಕೀಯ ಸ್ಥಿತ್ಯಂತರ ಒಪ್ಪಿಕೊಳ್ಳಬೇಕು’ ಫಲಿತಾಂಶವನ್ನು ಗಮನಿಸಿದರೆ ಕಾಂಗ್ರೆಸ್​ ರಾಜಕಾರಣದಲ್ಲಿ ಎಡವುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್​ನಲ್ಲಿ ನಾವೆಲ್ಲಾ ಇದ್ದೇವೆ. ಯಾವಾಗ ಏನು ತಂತ್ರ ಮಾಡಬೇಕು ಎಂಬುದು ಗೊತ್ತಿದೆ. ಸೂಕ್ತ ಕಾಲದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ ಎಂದು ಪ್ರತಿಕ್ರಿಯಿಸಿದರು.

ಬಿಜೆಪಿ ನಾಯಕರು ಕಾಂಗ್ರೆಸ್​ಗೆ ಉಳಿಗಾಲವುಲ್ಲ ಎಂಬ ಟೀಕೆಗೆ ಉತ್ತರಿಸಿದ ಅವರು, ಬಹಳ ಸಂತೋಷ. ಒಳ್ಳೆಯದಾಗಲಿ. ಯಶಸ್ಸು ಸಿಗಲಿ ಎಂದು ಹಾರೈಸಿದರು. ಇತ್ತೀಚಿನ ಮಾಹಿತಿ ಪ್ರಕಾರ ಬಿಜೆಪಿ ಒಟ್ಟೂ 12 ಕ್ಷೇತ್ರಗಳಲ್ಲಿ, ಕಾಂಗ್ರೆಸ್​ 2 ಕ್ಷೇತ್ರಗಳಲ್ಲಿ ಮತ್ತು ಸ್ವತಂತ್ರ್ಯ ಅಭ್ಯರ್ಥಿ ಶರತ್​ ಬಚ್ಚೇಗೌಡ ಮುನ್ನಡೆ ಸಾಧಿಸಿದ್ದಾರೆ. ಯಶವಂತಪುರ, ಗೋಕಾಕ್, ಕಾಗವಾಡ, ಹಿರೇಕೆರೂರು, ರಾಣೆಬೆನ್ನೂರು, ಕೆ ಆರ್​ ಪೇಟೆ, ಚಿಕ್ಕಬಳ್ಳಾಪುರ, ಯಲ್ಲಾಪುರ, ಕೆ.ಆರ್​. ಪುರಂ, ಅಥಣಿ, ಮಹಾಲಕ್ಷ್ಮಿ ಲೇಔಟ್​, ವಿಜಯನಗರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಹುಣಸೂರು ಮತ್ತು ಶಿವಾಜಿನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಮುನ್ನಡೆ ಪಡೆದಿದೆ.

ಒಟ್ಟಾರೆಯಾಗಿ ಜನರು ಪಕ್ಷಾಂತರಿಗಳನ್ನು ಒಪ್ಪಿಕೊಂಡಿದ್ದಾರೆ. ನಾವು ಸೋಲನ್ನು ಒಪ್ಪಿಕೊಂಡಿದ್ದೇವೆ, ಆದರೆ, ನಿರಾಸರಾಗುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಯಲ್ಲಾಪುರ, ಚಿಕ್ಕಬಳ್ಳಾಪುರ ಮತ್ತು ಕೆ.ಆರ್​. ಪೇಟೆಯಲ್ಲಿ ಬಿಜೆಪಿ ಗೆಲುವು ಸ್ಪಷ್ಟವಾಗಿದೆ. ಆದರೆ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.

Also read: ರಾಜ್ಯದ ತುಂಬೆಲ್ಲ ಅರಳಿದ ಕಮಲ; 5 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು, 7 ಕ್ಷೇತ್ರಗಳಲ್ಲಿ ಮುನ್ನಡೆ.!