ಬೆಂಗಳೂರು ಮೆಟ್ರೋ ರೈಲು ನಿಗಮ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
1419

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ, ಅರ್ಜಿ ಆಹ್ವಾನಿಸಿದ್ದು ಆಸಕ್ತ ಅಭ್ಯರ್ಥಿಗಳು ಫೆಬ್ರುವರಿ 2/2019 ರ ಒಳಗೆ ಅರ್ಜಿ ಸಲ್ಲಿಸಬೇಕು.


Also read: SSLC ಪಾಸಾದ ಅಭ್ಯರ್ಥಿಗಳಿಗೆ ಇಂಡಿಯನ್ ರೈಲ್ವೆ ಇಲಾಖೆಯಲ್ಲಿ ಕಾನ್ಸ್​ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ
  • ಹುದ್ದೆಯ ಹೆಸರು: Maintainer, ಜ್ಯೂನಿಯರ್ ಇಂಜಿನಿಯರ್, ಸೆಕ್ಷನ್ ಇಂಜಿನಿಯರ್.
  • ವಯೋಮಿತಿ: Maintainer ಹುದ್ದೆಗೆ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35, SC/ST/CAT-1 40, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38, ನಿವೃತ್ತ ಯೋಧರಿಗೆ 50 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
  • ಜ್ಯೂನಿಯರ್ ಇಂಜಿನಿಯರ್ ಹುದ್ದೆಗೆ: 14000-26950 ರೂ. ವೇತನ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35, ಎಸ್‌ಸಿ/ಎಸ್‌ಟಿ/ಪ್ರವರ್ಗ-1 40, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38, ನಿವೃತ್ತ ಯೋಧರಿಗೆ 50 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.


Also read: ಭಾರತೀಯ ರೈಲ್ವೆ ಇಲಾಖೆಯಿಂದ ವಿವಿಧ 14,033 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

  • ವೇತನ: Maintainer ಹುದ್ದೆಗೆ: 10170-18500 ರೂ. ಜ್ಯೂನಿಯರ್ ಇಂಜಿನಿಯರ್ ಹುದ್ದೆಗೆ: 14000-26950 ರೂ.
  • ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 354 ರೂ., ಸಾಮಾನ್ಯ, 2ಎ, 3ಬಿ, 3ಎ, 3ಬಿ, ನಿವೃತ್ತ ಯೋಧರಿಗೆ 826 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.
  • ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ತಿಳಿಸಲಾಗಿದೆ.
  • ಹೆಚ್ಚಿನ ಮಾಹಿತಿಗಾಗಿ: http://www.bmrcl recruitment 2019 ಕ್ಲಿಕ್ ಮಾಡಿ.