ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ 193 ಇಂಜಿನಿಯರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
570

ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ 193 ಇಂಜಿನಿಯರ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 8,2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಎನ್‌ವೈಕೆಎಸ್ ವಿವಿಧ 225 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು Name Of The Posts): ಇಂಜಿನಿಯರ್ ಮತ್ತು ಮ್ಯಾನೇಜರ್

ಉದ್ಯಮ (Industry) ರೈಲ್ವೆ

ಸಂಸ್ಥೆ (Organisation): ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ

ಉದ್ಯೋಗ ಸ್ಥಳ (Job Location): ಬೆಂಗಳೂರು, ಕರ್ನಾಟಕ

ವಿದ್ಯಾರ್ಹತೆ (Educational Qualification): ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ
ಅಭ್ಯರ್ಥಿಗಳು ಬಿ.ಇ ಅಥವಾ ಬಿ.ಟೆಕ್ / ಎಂ.ಇ ಅಥವಾ ಎಂ.ಟೆಕ್ / ಬಿ.ಆರ್ಕ್ ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ಬೋರ್ಡ್ ನಿಂದ ಹೊಂದಿರಬೇಕು.

ವಯೋಮಿತಿ: ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಕನಿಷ್ಟ 35 ರಿಂದ ಗರಿಷ್ಟ 60 ವರ್ಷ ವಯೋಮಿತಿಯನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಯ ವಿವರಗಳಿಗಾಗಿ ಅಧಿಸೂಚನೆಯನ್ನು ಓದಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಜಿದಾರರು ಅರ್ಜಿ ಶುಲ್ವ ಪಾವತಿಸುವ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದತಕ್ಕದ್ದು.

ಅರ್ಜಿ ಸಲ್ಲಿಸುವುದು ಪ್ರಕ್ರಿಯೆ: ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 8,2019 ರ ಸಂಜೆ 4 ಗಂಟೆಯೊಳಗೆ ಕಚೇರಿಯ ವಿಳಾಸಕ್ಕೆ ಕಳುಹಿಸಬಹುದು.

ಅರ್ಜಿ ಕಳುಹಿಸುವ ಕಚೇರಿಯ ವಿಳಾಸ: ಜನರಲ್ ಮ್ಯಾನೇಜರ್ (ಹೆಚ್‌.ಆರ್), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, 3 ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್,
ಕೆ.ಹೆಚ್‌ ರೋಡ್, ಶಾಂತಿನಗರ, ಬೆಂಗಳೂರು 560027

ಹೆಚ್ಚಿನ ಮಾಹಿತಿಗಾಗಿ: http://projectrecruit.bmrc.co.in/ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): April 8, 2019