ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 695 ಶಿಶಿಕ್ಷು (ಅಪ್ರೆಂಟಿಸ್) ತರಬೇತಿಗೆ ಅರ್ಜಿಗಳನ್ನು ಆಹ್ವಾನ.!

0
127

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 695 ಶಿಶಿಕ್ಷು (ಅಪ್ರೆಂಟಿಸ್) ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು . ಅಕ್ಟೋಬರ್ 9,2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಎಸ್‌ಎಸ್‌ಸಿ ದೆಹಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಮತ್ತು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಶಿಶಿಕ್ಷು

ವಿದ್ಯಾರ್ಹತೆ: ಶಿಶಿಕ್ಷು ತರಬೇತಿಗೆ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ: ಅಕ್ಟೋಬರ್ 9,2019ರ ಅನ್ವಯ ಕನಿಷ್ಟ 16 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ,ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಹೆಸರು, ವಿಳಾಸ, ಹುಟ್ಟಿದ ದಿನಾಂಕ, ವಿದ್ಯಾರ್ಹತೆ, ಜಾತಿ ಮಾಹಿತಿಗಳನ್ನೊಳಗೊಂಡ ಹಾಗೂ ಅಂದವಾಗಿ ಬೆರಳಚ್ಚುಗೊಳಿಸಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಳನ್ನು ತೆಗೆದುಕೊಂಡು ಅಕ್ಟೋಬರ್ 9,2019ರಂದು ಬೆಳಿಗ್ಗೆ 10:30ಗಂಟೆಯಿಂದ ಸಂಜೆ 5:00 ಗಂಟೆಯೊಳಗಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ,ಅನೆಕ್ಸ್ ಬಿಲ್ಡಿಂಗ್,3ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ, ಬೆಂಗಳೂರು-560027, ಇಲ್ಲಿ ಖುದ್ದಾಗಿ ಮೂಲಕ ದಾಖಲಾತಿಗಳ ಪರಿಶೀಲನೆಗೆ ಹಾಜರಾಗತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ: ಅಧಿಕೃತ ವೆಬ್‌ಸೈಟ್‌: https://www.mybmtc.karnataka.gov.in/