ಭೃಂಗರಾಜದ ಔಷಧೀಯ ಗುಣಗಳು

0
721

 

ಕನ್ನಡದಲ್ಲಿ ಗರುಗ, ಗರುಗದ ಸೊಪ್ಪು, ಕಾಡಿಗ್ಗರುಗ ಎಂದು ಕರೆಯಲ್ಪಡುವ ಭೃಂಗರಾಜ ಎಲ್ಲೆಡೆ ಕಳೆಯಂತೆ ಬೆಳೆಯುವ ಸಸ್ಯ[೩]. ಕೂದಲಿಗೆ ಬಣ್ಣ ಕೊಡುವ ಮತ್ತು ತಲೆಗೂದಲನ್ನು ಸೊಂಪಾಗಿ ಬೆಳೆಸುವ ಗುಣವುಳ್ಳವಾದ್ದರಿಂದ ಸಂಸ್ಕೃತದಲ್ಲಿ ಕೇಶರಂಜನ, ಕೇಶರಾಜ ಎಂಬ ಹೆಸರೂ ಇದೆ. ಅರ್ಧ ತಲೆನೋವಿಗೆ ಉತ್ತಮ ಔಷಧಿಯಾಗಿರುವುದರಿಂದ ಸೂರ್ಯಾವರ್ತ ಎಂಬ ಹೆಸರೂ ಇದೆ. ಭೃಂಗರಾಜ ತನ್ನಲ್ಲಿರುವ ಅಮೂಲ್ಯ ಗಣಗಳಿಂದಾಗಿ ಪ್ರಾಚೀನ ಕಾಲದಿಂದಲೂ ಸೌಂದರ್ಯವರ್ಧಕ ಗಿಡಮೂಲಿಕೆಯಾಗಿ ಬಳಸಲ್ಪಡುತ್ತಿತ್ತೆಂದು ಶೌನಕೇಯ, ಅಥರ್ವ ಮತ್ತು ಕೌಶಿಕ ಸೂತ್ರಗಳಲ್ಲಿ ಉಲ್ಲೇಖ ದೊರೆಯುತ್ತದೆ. ಅಷ್ಟಾಂಗ ಹೃದಯದಲ್ಲಿ ವಾಗ್ಭಟ ಭೃಂಗರಾಜವನ್ನು ದಿನನಿತ್ಯ ಸೇವನೆ ಮಾಡವುದರಿಂದ ರಸಾಯನ (ಬಲದಾಯಕ ಔಷಧಿ)ವಾಗಿ ಕಾರ್ಯ ಮಾಡುತ್ತದೆಂದು ತಿಳಿಸಿದ್ದಾನೆ. ರಾಜನಿಘಂಟುವಿನಲ್ಲಿ ಕೃಷ್ಣವರ್ಣ (ನೀಲಿ) ಭೃಂಗರಾಜ ಉತ್ತಮ ಔಷಧೀಯ ಗುಣಗಳನ್ನು ಹೊಂದಿದೆಯೆಂದು ವಿವರಿಸಲಾಗಿದೆ. ಕಹಿರಸ ಹೊಂದಿದ್ದು ಚರ್ಮಕ್ಕೆ ಹಿತಕರವಾಗಿದೆ. ಇದರ ಎಲೆಗಳನ್ನು ಸಂಕಷ್ಟಹರ ಚತುರ್ಥಿ ವ್ರತದಲ್ಲಿ ಗಣಪತಿಗೆ, ನಿತ್ಯ ಸೋಮವಾರ ವ್ರತದಲ್ಲಿ ಶಿವ ಮತ್ತು ಗೌರಿಗೆ, ಶ್ರೀ ನರಸಿಂಹ ಜಯಂತಿ ವ್ರತದಲ್ಲಿ ವಿಷ್ಣುವಿಗೆ ಮತ್ತು ಶ್ರೀ ಉಮಾ-ಮಹೆಶ್ವರರಿಗೆ ಪೂಜಿಸುತ್ತಾರೆ.

ಔಷಧೀಯ ಗುಣಗಳು

* ಅಜೀರ್ಣದಿಂದಾಗಿ ಹೊಟ್ಟೆಯುಬ್ಬರ ಉಂಟಾಗಿದ್ದರೆ ಭೃಂಗರಾಜವನ್ನು ಸಣ್ಣಗೆ ಹೆಚ್ಚಿಕೊಂದು ಸ್ವಲ್ಪ ಎಣ್ಣೆಯಲ್ಲಿ ಹುರಿದು ಮೊಸರಿನಲ್ಲಿ ಜೀರಿಗೆ ಪುಡಿಯೊಂದಿಗೆ ಬೆರೆಸಿ ತಿನ್ನಬೆಕು.

* ಚರ್ಮರೋಗಗಳಲ್ಲಿ ಭೃಂಗರಾಜದ ಬೇರನ್ನು ಕುಟ್ಟಿ ಪುಡಿ ಪುಡಿ ಮಾಡಿ ನೀರಿನಲ್ಲಿ ಬೆರೆಸಿ ಲೇಪಿಸಬೆಕು.

* ತಲೆನೋವಿನಿಂದ ಬಳಲುವ ವರು ಭೃಂಗರಾಜದ ರಸವನ್ನು ಎಳ್ಳೆಣ್ಣೆಯೊಂದಿಗೆ ಬೆರೆಸಿ ಹಣೆಗೆ ಲೇಪಿಸಿಕೊಳ್ಳಬೇಕು.

* ಎಲ್ಲ ದೇಶೀಯ ಯಕೃತ್ತಿನ ಟಾನಿಕ್ ಗಳು ಈ ಸಸ್ಯದ ಅಂಶ ಹೊಂದಿರುತ್ತದೆ.

* ಕೂದಲುದುರುವಿಕೆ : ತಲೆಗೂದಲು ಉದುರುತ್ತಿದ್ದಲ್ಲಿ ಮತ್ತು ಚಿಕ್ಕವಯಸ್ಸಿನಲ್ಲಿಯೇ ಕೂದಲು ಬೆಳ್ಳಗಾಗಲು ಆರಂಭವಾಗಿದ್ದಲ್ಲಿ ಭೃಂಗರಾಜದಿಂದ ತಯಾರಿಸಿದ ತೈಲವನ್ನು ಪ್ರತಿದಿನ ತಲೆಗೆ ಹಚ್ಚಿಕೊಂಡಲ್ಲಿ ಕೂದಲುದುರುವುದ ನಿಲ್ಲುವುದಲ್ಲದೇ ಸೊಂಪಾಗಿ ಆರೋಗ್ಯಪೂರ್ಣವಾಗಿ ಬೆಳೆಯುತ್ತದೆ.

* ಭೃಂಗರಾಜ ಎಲೆ, ನೆಲ್ಲಿಕಾಯಿ, ಕಪ್ಪು ಎಳ್ಳು ಮತ್ತಿತರ ವಸ್ತುಗಳನ್ನು ಸೇರಿಸಿ ಮನೆಂುುಲ್ಲೇ ಎಣ್ಣೆ ಮಾಡಿ ನತ್ಯ ತಲೆಗೆ ಹಚ್ಚುವುದರಿಂದಲೂ ಕೂದಲು ಉದುರುವುದನ್ನು ಕಡಿಮೆ ಮಾಡಿಕೊಳ್ಳಬಹುದು.

* ತಲೆಗೆ ಸ್ನಾನ ಮಾಡಿದ ಮೇಲೆ ತಲೆ ಬುಡವನ್ನು ಚೆನ್ನಾಗಿ ಮಸಾಜ್ ಮಾಡುವಂತೆ ಉಜ್ಜಿ. ಇದು ನಿಮ್ಮ ತಲೆಬುಡದಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ ಹಾಗೂ ಕೂದಲನ್ನು ದೃಢವಾಗಿಸುತ್ತದೆ.

* ಬಸಳೆ ಸೊಪ್ಪಿನ ಹಸಿಯಾದ ಬ್ಯೂಸ್ ಮಾಡಿ ಕುಡಿಯಿರಿ. ಇದು ಕೂದಲ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಕ್ಯಾರೆಟ್ ಜ್ಯೂಸ್ ಕೂಡಾ ಉತ್ತಮ.