ಭಾರತೀಯ ಸೇನೆಯ ಗಡಿ ಭದ್ರತಾ ಪಡೆ BSF 1072 ಕಾನ್ಸ್ಟೇಬಲ್ ಮತ್ತು ಹೆಡ್​ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
787

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ಸೇನೆಯ ಗಡಿ ಭದ್ರತಾ ಪಡೆ (ಬಿಎಸ್​ಎಫ್) ಖಾಲಿಯಿರುವ 1072 ​ ಕಾನ್ಸ್ಟೇಬಲ್ ಮತ್ತು ಹೆಡ್​ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 12, 2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಸಶಸ್ತ್ರ ಸೀಮಾ ಬಲ ನೇಮಕಾತಿ 290 ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಹೆಡ್​ ಕಾನ್ಸ್ಟೇಬಲ್ ರೇಡಿಯೋ ಆಪರೇಟರ್ ಮತ್ತು ರೇಡಿಯೋ ಮೆಕ್ಯಾನಿಕ್

ಸಂಸ್ಥೆ (Organisation): BSF (ಭಾರತೀಯ ಸೇನೆಯ ಗಡಿ ಭದ್ರತಾ ಪಡೆ)

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ (SSLC) ಮತ್ತು 12ನೇ ತರಗತಿ (PUC) ಪಾಸ್ ಆಗಿರಬೇಕು.

ವಯೋಮಿತಿ: ಅರ್ಜಿದಾರನ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷಗಳಾಗಿರಬೇಕು.

ವೇತನ: ಆಯ್ಕೆಯಾದ ಅಭ್ಯರ್ಥಿಗೆ 25,500 ರಿಂದ 81,100 ರೂ.ವರೆಗೆ ವೇತನ ದೊರೆಯಲಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ನಡತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ / ಒಬಿಸಿ- 100 ರೂ. SC /ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): ಜೂನ್ 12, 2019.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಭಾರತ ಗಡಿ ಭದ್ರತಾ ಪಡೆಯ ಅಧಿಕೃತ ವೆಬ್​​ಸೈಟ್ bsf.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು.