BSNL ಜ್ಯೂನಿಯರ್ ಟೆಲಿಕಾಮ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
922

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತ ಸಂಚಾರ ನಿಗಮವು ಖಾಲಿ ಇರುವ 198 ಜ್ಯೂನಿಯರ್ ಟೆಲಿಕಾಮ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 12.2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: (Name Of The Posts): ಜ್ಯೂನಿಯರ್ ಟೆಲಿಕಾಮ್ ಅಧಿಕಾರಿ

ಸಂಸ್ಥೆ (Organisation): ಭಾರತ ಸಂಚಾರ ನಿಗಮ

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ ಮಾಡಿರಬೇಕು ಅಥವಾ ಜ್ಯೂನಿಯರ್ ಟೆಲಿಕಾಮ್
ಅಧಿಕಾರಿ ಹುದ್ದೆಗಳಿಗೆ ಸಿವಿಲ್ ಇಂಜಿನಿಯರಿಂಗ್ ಮತ್ತು ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಅನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡಿರಬೇಕು ಮತ್ತು ಅಭ್ಯರ್ಥಿಗಳು ಗೇಟ್2019 ರ ಪರೀಕ್ಷೆಯಲ್ಲಿ ಭಾಗವಹಿಸಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / ಮೀಸಲಾತಿ ಅಭ್ಯರ್ಥಿಗಳು ಕನಿಷ್ಟ 18 ರಿಂದ 30 ವರ್ಷ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5
ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿಯ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): March 12, 2019

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ: BSNL ಅಧಿಕೃತ ವೆಬ್ ಸೆಟ್ http://www.bsnl.co.in/ ಕ್ಲಿಕ್ ಮಾಡಿ.

Also read: ಎಸ್ ಎಸ್ ಬಿ -ಯಲ್ಲಿ ವಿವಿಧ ಇನ್ಸ್ ಪೆಕ್ಟೆರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..